ರಾಯಚೂರಿನಲ್ಲಿ ಸಂವಿಧಾನ ಶಿಲ್ಪಿ ಬಾಬಾಸಾಹೇಬ್ ಅಂಬೇಡ್ಕರ್‍ರವರಿಗೆ ಅವಮಾನ ಮಾಡಿದ ರಾಯಚೂರ ಜಿಲ್ಲಾ ನ್ಯಾಯಾಧೀಶರಾದ ಮಲ್ಲಿಕಾರ್ಜುನ ಗೌಡ ವಿರುದ್ಧ ಜೈ ಭೀಮ್ ಟೈಗರ್ ಸಂಘಟನೆಯ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
73ನೇ ಗಣರಾಜ್ಯೋತ್ಸವದ ವೇಳೆ ರಾಯಚೂರಿನ ಜಿಲ್ಲಾ ನ್ಯಾಲಯದ ಆವರಣದಲ್ಲಿ ಜಿಲ್ಲಾ ನ್ಯಾಯಾಧೀಶರಾದ ಮಲ್ಲಿಕಾರ್ಜುನ ಗೌಡ ಅಂಬೇಡ್ಕರ್ ಭಾವಚಿತ್ರವನ್ನು ಪೂಜೆಯಿಂದ ತೆಗೆಯುವಂತೆ ಒತ್ತಾಯಿಸಿ ತೆಗೆಸಿ ಸಂವಿಧಾನ ಶಿಲ್ಪಿಗೆ ಅಪಮಾನ ಮಾಡಿದ್ದಾರೆ. ಹಾಗಾಗಿ ಅವರ ಮೇಲೆ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಬೆಳಗಾವಿಯ ರಾಣಿ ಚೆನ್ನಮ್ಮ ವೃತ್ತದಲ್ಲಿ ಜೈಭೀಮ್ ಟೈಗರ್ ಸಂಘಟನೆಯ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಈ ವೇಳೆ ನ್ಯಾಯಮೂರ್ತಿ ಮಲ್ಲಿಕಾರ್ಜುನ ಗೌಡ ಭಾವಚಿತ್ರಕ್ಕೆ ಚಪ್ಪಲಿಯಿಂದ ಹೊಡೆಯುವ ಮೂಲಕ ಆಕ್ರೋಶ ಹೊರಹಾಕಿದ್ದಾರೆ.
ಈ ವೇಳೆ ಮಾತನಾಡಿದ ಜೈ ಭೀಮ್ ಸಂಘಟನೆಯ ಸಾಗರ ಚೌಗಲೆ, ವೈಯಕ್ತಿಯ ಹಿತಾಸಕ್ತಿಯಿಂದ ರಾಯಚೂರು ನ್ಯಾಯಾಧೀಶರಾದ ಮಲ್ಲಿಕಾರ್ಜುನ ಗೌಡ ಅಂಬೇಡ್ಕರ್ ಭಾವಚಿತ್ರವನ್ನು ಪೂಜೆಯಿಂದ ತೆಗೆಸುವ ಮೂಲಕ ಸಂವಿಧಾನ ಶಿಲ್ಪಿಗೆ ಅವಮಾನ ಮಾಡಿದ್ದಾರೆ. ಹಾಗಾಗಿ ಸರಕಾರ ಈ ಕೂಡಲೇ ಅವರನ್ನು ಗಲ್ಲಿಗೆ ಏರಿಸಬೇಕೆಂದು ಪ್ರತಿಭಟನಾಕಾರರು ಒತ್ತಾಯಿಸಿದರು. ಇಲ್ಲವಾದರೆ ಮುಂಬರುವ ದಿನಗಳಲ್ಲಿ ಉಗ್ರ ಹೋರಾಟ ಮಾಡುವುದಾಗಿ ಎಚ್ಚರಿಕೆ ನೀಡಿದರು.
ಇನ್ನು ಇದೇ ಸಂದರ್ಭದಲ್ಲಿ ಮಾತನಾಡಿದ ನ್ಯಾಯವಾದಿಗಳಾದ ಶಕುಂತಲಾ ಕಾಂಬಳೆ, ಗಣರಾಜ್ಯೋತ್ಸವದ ವೇಳೆ ಅಂಬೇಡ್ಕರ್‍ರ ಭಾವಚಿತ್ರವನ್ನು ಪೂಜಾ ಸ್ಥಳದಿಂದ ತೆಗೆಸುವ ಮೂಲಕ ಜಿಲ್ಲಾ ನ್ಯಾಯಾಧೀಶರಾದ ಮಲ್ಲಿಕಾರ್ನುನ ಗೌಡ ಅಂಬೇಡ್ಕರ್‍ಗೆ ಅವಮಾನ ಮಾಡಿದ್ದಾರೆ. ಒಬ್ಬ ಜಿಲ್ಲಾ ನ್ಯಾಯಾಧೀಶರಾಗಿ ಈ ರೀತಿ ಮಾಡುವುದು ಎಷ್ಟು ಸರಿ ಎಂದು ಪ್ರಶ್ನೆ ಮಾಡಿದರು. ಇನ್ನು ಸರಕಾರ ಈ ಕುರಿತಂತೆ ಕಠಿಣ ಕ್ರಮ ಕೈಗೊಳ್ಳಬೇಕೆಂದು ಮನವಿ ಮಾಡಿದರು.
ಈಗಾಗಲೇ ರಾಜಯಾದ್ಯಂತ ನ್ಯಾಯಮೂರ್ತಿ ಮಲ್ಲಿಕಾರ್ಜುನ ಗೌಡ ವಿರುದ್ಧ ಸಾರ್ವಜನಿಕರು ಆಕ್ರೋಶ ಹೊರಹಾಕಿದ್ದಾರೆ. ಇನ್ನು ನ್ಯಾಯಮೂರ್ತಿಗಳ ಮೇಲೆ ಸರಕಾರ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕೆಂದು ಸಾರ್ವಜನಿಕರು ಒತ್ತಾಯ ಮಾಡುತ್ತಿದ್ದಾರೆ. ಈ ಕುರಿತಂತೆ ಸರಕಾರ ಯಾಕ ಕ್ರಮ ಕೈಗೊಳ್ಳಲಿದೆ ಎಂದು ಕಾದು ನೋಡಬೇಕಿದೆ.