Education

ಮುನ್ನೆಚ್ಚರಿಕಾ ಕ್ರಮ ಅನುಸರಿಸಿ..ಕೋವಿಡ್ ಟೆಸ್ಟ್ ಮಾಡಿಸಿಕೊಂಡು..ಕಾಲೇಜಿಗೆ ಬನ್ನಿ..ಡಿಸಿಎಂ ಅಶ್ವತ್ಥನಾರಾಯಣ ಕರೆ

Share

ಎಷ್ಟೇ ವಿದ್ಯಾರ್ಥಿಗಳು ಕ್ಲಾಸಿಗೆ ಬಂದ್ರೂ ಕೂಡ ಚಿಂತೆಯಿಲ್ಲ. ಇಷ್ಟೇ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಬರಬೇಕು ಎಂಬ ಟಾರ್ಗೆಟ್ ಸರ್ಕಾರದ ಮುಂದೆ ಇಲ್ಲ. ವಿದ್ಯಾರ್ಥಿಗಳಿಗೆ ಕಾಲೇಜು ಕಲಿಯಲು ಅವಕಾಶ ಮಾಡಿಕೊಡುತ್ತಿದ್ದೇವೆ.

ಕೊರೊನಾ ಸೋಂಕಿತರು ಕಾಲೇಜಿಗೆ ಬರುವಂತೆ ಆಗಬಾರದು ಎಂಬ ಉದ್ದೇಶದಿಂದ ಕೋವಿಡ್ ಟೆಸ್ಟ್ ಕಡ್ಡಾಯಗೊಳಿಸಿದ್ದೇವೆ ಎಂದು ಡಿಸಿಎಂ ಹಾಗೂ ಉನ್ನತ ಶಿಕ್ಷಣ ಸಚಿವ ಡಾ.ಅಶ್ವತ್ಥನಾರಾಯಣ ಸ್ಪಷ್ಟಪಡಿಸಿದರು.
ಮಂಗಳವಾರದಿಂದ ರಾಜ್ಯಾಧ್ಯಂತ ಕಾಲೇಜು ಆರಂಭ ಆಗುತ್ತಿರುವ ಹಿನ್ನೆಲೆ ಖಾಸಗಿ ವಾಹಿನಿ ಜೊತೆ ಮಾತನಾಡಿರುವ ಉನ್ನತ ಶಿಕ್ಷಣ ಸಚಿವ ಡಾ.ಅಶ್ವತ್ಥನಾರಾಯಣ ಅವರು ಎಲ್ಲಾ ರೀತಿಯ ಮುಂಜಾಗ್ರತಾ ಕ್ರಮಗಳನ್ನು ಅನುಸರಿಸಿ ರಾಜ್ಯದಲ್ಲಿ ಮಂಗಳವಾರ ಕಾಲೇಜುಗಳನ್ನು ಆರಂಭಿಸಲು ಸಿದ್ಧತೆ ಕೈಗೊಳ್ಳಲಾಗಿದೆ.

ಕೋವಿಡ್ ಟೆಸ್ಟ್‍ನ್ನು ಕಡ್ಡಾಯವಾಗಿ ಮಾಡಿಸಿಕೊಂಡು ಕಾಲೇಜಿಗೆ ಬರುವಂತೆ ಸೂಚಿಸಲಾಗಿದೆ. ಅದೇ ರೀತಿ ಪಾಲಕರಿಂದ ಒಪ್ಪಿಗೆ ಪತ್ರ ತೆಗೆದುಕೊಂಡು ಬರಬೇಕು ಎಂದು ತಿಳಿಸಲಾಗಿದೆ. ಇನ್ನು ಕೊನೆಯ ವರ್ಷದ ವಿದ್ಯಾರ್ಥಿಗಳಿಗೆ ರೆಗುಲರ್ ಕ್ಲಾಸ್‍ಗಳು ಇರುತ್ತವೆ. ಇನ್ನಿತರ ವರ್ಷದ ವಿದ್ಯಾರ್ಥಿಗಳಿಗೆ ಕಾಂಟಾಕ್ಟ್ ಕ್ಲಾಸ್‍ಗಳು ಇರುತ್ತವೆ. ಆನ್‍ಲೈನ್ ಕ್ಲಾಸ್‍ನಲ್ಲಿ ತೊಂದರೆ ಆಗುತ್ತಿದೆ ಎಂಬುದನ್ನು ಅರಿತು ಸ್ವಇಚ್ಛೆಯಿಂದ ಬರುವ ವಿದ್ಯಾರ್ಥಿಗಳಿಗೆ ಈ ರೀತಿಯ ಅವಕಾಶ ಮಾಡಿಕೊಡುತ್ತಿದ್ದೇವೆ ಎಂದು ತಿಳಿಸಿದರು.

ಇನ್ನು ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು, ಸ್ಯಾನಿಟೈಸ್ ಮಾಡಿಕೊಳ್ಳುವುದು, ಹೈಜೆನ್ ಆಗಿರುವುದು ಸೇರಿದಂತೆ ಹಲವು ಮುನ್ನೆಚ್ಚರಿಕಾ ಕ್ರಮಗಳನ್ನು ವಿದ್ಯಾರ್ಥಿಗಳು ಅನುಸರಿಬೇಕು. ಏನಾದ್ರು ಲಕ್ಷಣಗಳು ಕಂಡು ಬಂದ್ರೆ ತಕ್ಷಣವೇ ಪರೀಕ್ಷೆ ಮಾಡಿಸಿಕೊಳ್ಳಿ. ಆನ್‍ಲೈನ್‍ನಲ್ಲಿ ಕಲಿಯಲು ತೊಂದರೆ ಆಗುತ್ತಿದ್ದ ವಿದ್ಯಾರ್ಥಿಗಳು ಕಾಲೇಜಿಗೆ ಬಂದು ಇದರ ಸದುಪಯೋಗ ಪಡಿಸಿಕೊಳ್ಳಿ. ಯಾವುದೇ ರೀತಿ ಆತಂಕ ಬೇಡ ಎಂದು ವಿದ್ಯಾರ್ಥಿಗಳಿಗೆ ಇದೇ ವೇಳೆ ಸಚಿವ ಡಾ.ಅಶ್ವತ್ಥನಾರಾಯಣ ಧೈರ್ಯ ತುಂಬಿದರು.

: ಒಟ್ಟಾರೆ ಮಂಗಳವಾರದಿಂದ ರಾಜ್ಯಾಧ್ಯಂತ ಕಾಲೇಜುಗಳು ಆರಂಭ ಆಗುತ್ತಿದ್ದು. ಕಾಲೇಜು ಕಲಿಯಲು ಆಸಕ್ತಿ ಇರುವ ವಿದ್ಯಾರ್ಥಿಗಳು ಕೋವಿಡ್ ಟೆಸ್ಟ್ ಕಡ್ಡಾಯವಾಗಿ ಮಾಡಿಸಿಕೊಂಡು ಹೋಗಬೇಕು. ಎಲ್ಲಾ ರೀತಿಯ ಮುನ್ನೆಚ್ಚರಿಕಾ ಕ್ರಮಗಳನ್ನು ನಮ್ಮ ಸರ್ಕಾರ ಕೈಗೊಂಡಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಅಶ್ವತ್ಥನಾರಾಯಣ ವಿಶ್ವಾಸ ವ್ಯಕ್ತಪಡಿಸಿದರು.

 

 

Tags: