Athani

ಅಂಬೇಡ್ಕರ್ ಅವರಿಗೆ ಅಪಮಾನ ಖಂಡಿಸಿ ಕಾಗವಾಡ ಬಂದ್ ಯಶಸ್ವಿ: ನ್ಯಾ.ಮಲ್ಲಿಕಾರ್ಜುನಗೌಡಗೆ ಚಪ್ಪಲಿ ಹಾರ ಹಾಕಿ ಆಕ್ರೋಶ..!

Share

ರಾಯಚೂರಿನಲ್ಲಿ ಗಣರಾಜ್ಯೋತ್ಸವ ದಿನ ಡಾ.ಬಾಬಾಸಾಹೇಬ ಅಂಬೇಡ್ಕರ್ ಅವರ ಭಾವಚಿತ್ರ ತೆಗೆಯುವವರೆಗೆ ನಾನು ಕಾರ್ಯಕ್ರಮಕ್ಕೆ ಬರುವದಿಲ್ಲ ಎಂದು ಡಾ.ಬಿ.ಆರ್.ಅಂಬೇಡ್ಕರ್ ಅವರಿಗೆ ಅವಮಾನ ಮಾಡಿದ ಘಟನೆಯನ್ನ ಖಂಡಿಸಿ ಕರೆ ನೀಡಿದ್ದ ಕಾಗವಾಡ ಬಂದ್ ಸಂಪೂರ್ಣ ಯಶಸ್ವಿಯಾಗಿದೆ.

ಕಾಗವಾಡ ಸಂಪೂರ್ಣ ಬಂದ್‍ಗೆ ದಲಿತ ಸಂಘಟನೆಗಳು ಹಾಗೂ ವಕೀಲರ ಸಂಘದಿಂದ ಕರೆ ನೀಡಿದ ಹಿನ್ನೆಲೆ ಕಾಗವಾಡ ಸಂಪೂರ್ಣ ಸ್ಥಬ್ದವಾಗಿತ್ತು. ಪಟ್ಟಣದ ಅಂಬೇಡ್ಕರ್ ವೃತ್ತದಲ್ಲಿ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಮಾಲಾರ್ಪಣೆ ಹಾಕುವದರ ಮೂಲಕ ಪ್ರತಿಭಟನಾ ಮೆರವಣಿಗೆಗೆ ಚಾಲನೆ ನೀಡಲಾಯಿತು. ಬಳಿಕ ರಾಯಚೂರು ನ್ಯಾಯಾಧೀಶ ಮಲ್ಲಿಕಾರ್ಜುನಗೌಡ ಭಾವಚಿತ್ರಕ್ಕೆ ಚಪ್ಪಲಿಹಾರ ಹಾಕಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು. ಬಜಾರ ಪೇಟದಿಂದ ಚಾವಡಿ ಮುಖಾಂತರ ಪ್ರತಿಭಟನಾ ರ್ಯಾಲಿಯು ವಿಜಯಪುರ-ಕಾಗವಾಡ ರಸ್ತೆಯಿಂದ ಚನ್ನಮ್ಮ ವೃತ್ತದಲ್ಲಿ ಜಮಾವಣೆಗೊಂಡು ಮಾನವಳಿ ಸರಪಳಿ ನಿರ್ಮಿಸಿ ರಾಯಚೂರ ನ್ಯಾಯಾದೀಶ ಮಲ್ಲಿಕಾರ್ಜುನ ಗೌಡ ವಿರುದ್ದ ಧಿಕ್ಕಾರ ಕೂಗಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು.

ಇದೇ ವೇಳೆ ಮಾತನಾಡಿದ ಜಿಲ್ಲಾ ಸಂಚಾಲಕ ಸಂಜಯ ತಳವಲ್ಕರ್ ಕೂಡಲೇ ಮಲ್ಲಿಕಾರ್ಜುನಗೌಡ ಅವರನ್ನ ಅವರ ಸ್ಥಾನದಿಂದ ವಜಾಮಾಡಬೇಕು. ಅμÉ್ಟೀ ಅಲ್ಲದೇ ಅವರ ಮೇಲೆ ಅಟ್ರಾಸಿಟಿ ಕೇಸ್ ಹಾಕಿ ದೇಶ ದ್ರೋಹದ ಮೇಲೆ ಗಡಿಪಾರು ಮಾಡಬೇಕು. ಅವರನ್ನ ವಜಾ ಮಾಡದಿದ್ದರೆ ಮುಂದಿನ ದಿನಗಳಲ್ಲಿ ಎಲ್ಲ ಸಂಘಟನೆಗಳು ಸೇರಿ ಬೃಹತ್ ಪ್ರತಿಭಟನೆ ಮಾಡಲಾಗುವದು ಎಂದು ಎಚ್ಚರಿಕೆ ನೀಡಿದರು.

ನಂತರ ಮಾತನಾಡಿದ ಡಿಎಸ್‍ಎಸ್ ಜಿಲ್ಲಾ ಸಂಚಾಲಕ ಶ್ರೀಕಾಂತ್ ತಳವಾರ ಗಣರಾಜ್ಯೋತ್ಸವದ ದಿನ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪೂಜೆ ಮಾಡುವ ನಿಯಮವನ್ನು ಸರ್ಕಾರದ ಸುತ್ತೋಲೆ ಇದ್ದರೂ ಕೂಡ ರಾಯಚೂರು ಜಿಲ್ಲಾ ನ್ಯಾಯಾದೀಶರು ಡಾ.ಬಿ.ಅರ್.ಅಂಬೇಡ್ಕರ್ ಅವರ ಭಾವಚಿತ್ರ ತೆಗೆಯುವವರೆಗೂ ನಾನು ಧ್ವಜಾರೋಹಣ ಕಾರ್ಯಕ್ರಮಕ್ಕೆ ಬರುವದಿಲ್ಲ ಎಂದು ಉದ್ದಟತನವನ್ನು ಮಾಡಿದ್ದಾರೆ. ಕೂಡಲೇ ಅವರನ್ನು ನ್ಯಾಯಾಧೀಶರ ಸ್ಥಾನದಿಂದ ವಜಾಗೊಳಿಸುವಂತೆ ಒತ್ತಾಯಿಸಿದರು.

ನಂತರ ತಹಶಿಲ್ದಾರ ಆರ್.ಆರ್.ಬುರ್ಲಿ ಅವರ ಮುಖಾಂತರ ರಾಷ್ಟ್ರಪತಿಗಳಿಗೆ ಪ್ರತಿಭಟನಾಕಾರರು ಮನವಿ ಸಲ್ಲಿಸಿದರು. ಪ್ರತಿಭಟನೆಯಲ್ಲಿ ಪ್ರಕಾಶ ದೋಂಡಾರೆ, ಬಾಳಾಸಾಬ ಕಾಂಬಳೆ, ವಕೀಲರಾದ ಅಮೀತ ದಿಕ್ಷಾಂತ, ಶಿವಾಜಿ ಕಾಂಬಳೆ, ಎಸ್.ಎಸ್.ನಿಡೋಣಿ, ಸುಭಾμï ಡಾಲೆ, ಜ್ಯೋತಿಕುಮಾರ ಪಾಟೀಲ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

Tags: