Athani

ಅಥಣಿ ಕ್ಷೇತ್ರಕ್ಕೆ ನೀರಾವರಿ ಸೌಲಭ್ಯ ನೀಡದಿರುವುದಕ್ಕೇ ನಾವು ಕಾಂಗ್ರೆಸ್ ಬಿಟ್ಟಿದ್ದು- ಮಾಜಿ ಸಚಿವ ರಮೇಶ್ ಜಾರಕಿಹೊಳಿ

Share

ಅಥಣಿ ಕ್ಷೇತ್ರದಲ್ಲಿ ನೀರಾವರಿಗೆ ಆದ್ಯತೆ ನೀಡುವುದಿಲ್ಲ ಎಂದಿದ್ದಕ್ಕೇ ನಾವು ಕಾಂಗ್ರೆಸ್ ಪಕ್ಷವನ್ನು ಬಿಡಬೇಕಾಯಿತು ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಹೇಳಿದ್ದಾರೆ.

ಅಥಣಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಮಾಜಿ ಸಚಿವ ರಮೇಶ್ ಜಾರಕಿಹೊಳಿ, ಕಳೆದ ಬಾರಿ ಚುನಾವಣೆ ಸಂದರ್ಭದಲ್ಲಿ ಸಂದರ್ಭದಲ್ಲಿ ನಾನೇ ಮಹೇಶ್ ಕುಮಠಳ್ಳಿ ಮಂತ್ರಿಯಾಗುತ್ತಾರೆ ಎಂದು ಹೇಳಿದ್ದೆ. ಅಲ್ಲದೇ ಅಥಣಿ ಕ್ಷೇತ್ರದಲ್ಲಿ ನೀರಾವರಿ ಸೌಲಭ್ಯಕ್ಕೆ ಹೆಚ್ಚಿನ ಆದ್ಯತೆ ನೀಡಲಾಗುತ್ತದೆ ಎಂದು ಹೇಳಿದ್ದೆ. ಆದರೆ ಕಾಂಗ್ರೆಸ್ ಪಕ್ಷದಲ್ಲಿ ನೀರಾವರಿಗೆ ಅನುಮತಿ ನೀಡುವುದಿಲ್ಲ ಎಂದರು.

ಇನ್ನು ಅಥಣಿ ಕ್ಷೇತ್ರದ ಹಳ್ಳಿ ಹಳ್ಳಿಗಳ ಜನತೆ ಪ್ರೀತಿಯಿಂದ ಕುಮಠಳ್ಳಿಯವರಿಗೆ ಮತ ಹಾಕಿದ್ದಾರೆ. ಅವರಿಗೆ ಅನ್ಯಾಯವಾಗಬಾರದೆಂದು ನಾವು ಕಾಂಗ್ರೆಸ್‍ನ್ನು ತೊರೆಯಬೇಕಾಯಿತು. ಇನ್ನು ಈಗ ಬಿಜೆಪಿಯಲ್ಲಿದ್ದೇವೆ. ಇನ್ನು ಸಮಯಾವಕಾಶವಿದೆ. ನೀರಾವರಿ ಮಾಡೇ ಮಾಡುತ್ತೇವೆ ಎಂದರು.

ಇನ್ನು ಇದೇ ಸಂದರ್ಭದಲ್ಲಿ ಮಹೇಶ್ ಕುಮಠಳ್ಳಿ ಯಾವಾಗ ಮಂತ್ರಿಯಾಗುತ್ತಾರೆ ಎಂಬ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಅವರು, ಇದು ಪಕ್ಷದ ತೀರ್ಮಾನ. ಈ ಕುರಿತಂತೆ ಕೆಲ ವಿಷಯಗಳನ್ನು ಬಹಿರಂಗವಾಗಿ ಹೇಳಲಾಗದು. ನನ್ನ ಅಥವಾ ಕುಮಠಳ್ಳಿ ವಿಚಾರವಾಗಿ ಪಕ್ಷ ಏನೇ ನಿರ್ಧಾರ ತೆಗೆದುಕೊಂಡರೂ ನಾವು ಅದಕ್ಕೆ ಬದ್ಧರಿದ್ದೇವೆ ಎಂದರು.

ಇನ್ನು ಗೋಕಾಕ ಕ್ಷೇತ್ರದಲ್ಲಿ ಯಾವುದೇ ಅಭಿವೃದ್ಧಿಯಾಗಿಲ್ಲ ಎಂಬ ಶಾಸಕ ಸತೀಶ್ ಜಾರಕಿಹೊಳಿ ಆರೋಪಕ್ಕೆ ಪ್ರತಿಕ್ರಿಯೆ ನೀಡಿದ ಅವರು, ನನ್ನ ಕ್ಷೇತ್ರದಲ್ಲಿ ಎಲ್ಲಾ ಕಡೆ ರಸ್ತೆಗಳಿವೆ. ಈಗಲೇ ಎಲ್ಲರೂ ಸೇರಿ ಅಲ್ಲಿಗೆ ಹೋಗೋಣ ಒಂದು ವೇಳೆ ಅವರು ಹೇಳಿದಂತೆ ನನ್ನ ಕ್ಷೇತ್ರದಲ್ಲಿ ಅಭಿವೃದ್ಧಿಯಾಗದೇ ಇದ್ದರೆ ನಾನಿ ನಿಂತಲ್ಲೇ ರಾಜಿನಾಮೆ ನೀಡಿ ರಾಜಕೀಯ ನಿವೃತ್ತಿಯನ್ನು ಘೋಷಿಸಿಕೊಳ್ಳುತ್ತೇನೆ ಎಂದರು.

Tags: