Banglore

ತಜ್ಞರ ವರದಿ ಮೇಲೆ ಮುಂದಿನ ಕ್ರಮ: ಕೋವಿಡ್ ಸಭೆಗೂ ಮುನ್ನ ಸಿಎಂ ಬೊಮ್ಮಾಯಿ ಹೇಳಿಕೆ

Share

ಕಳೆದ ಒಂದು ತಿಂಗಳಿನಿಂದ ಕೋವಿಡ್ ಯಾವ ರೀತಿ ಹರಡುತ್ತಿದೆ. ರಾಜ್ಯದ ಜಿಲ್ಲೆಗಳಲ್ಲಿ ಮತ್ತು ಬೆಂಗಳೂರು ನಗರದಲ್ಲಿನ ಸ್ಥಿತಿ ಬಗ್ಗೆ ಎಲ್ಲ ವಿವರ ಪಡೆದುಕೊಂಡು ಕೆಲವು ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಸಿಎಂ ಬೊಮ್ಮಾಯಿ ಅವರು ಇಂದು ಮಿಟಿಂಗ್ ಇದೆ, ತಜ್ಞರ ಸಮಿತಿ ಅಭಿಪ್ರಾಯ ತೆಗೆದುಕೊಳ್ಳುತ್ತಿದ್ದೇವೆ. ಕಳೆದ ಒಂದು ತಿಂಗಳಿನಿಂದ ಕೋವಿಡ್ ಯಾವ ರೀತಿ ಜಿಲ್ಲೆಗಳಲ್ಲಿ ಮತ್ತು ಬೆಂಗಳೂರು ನಗರದಲ್ಲಿನ ಸ್ಥಿತಿ ಬಗ್ಗೆ ಎಲ್ಲ ವಿವರ ಪಡೆದುಕೊಂಡು ಕೆಲವು ತೀರ್ಮಾನ ತೆಗೆದುಕೊಳ್ಳಲಾಗುವುದು. ಮೊದಲು ಕೃಷಿ ಇಲಾಖೆ ಸಭೆಯಿದೆ, ಅದಾದ ಬಳಿಕ ಕೋವಿಡ್ ಸಭೆ ಮಾಡುತ್ತೇವೆ ಎಂದರು. ಇನ್ನು 50;50 ರೂಲ್ಸ್‍ಗೆ ವಿರೋಧ ವಿಚಾರಕ್ಕೆ ತಜ್ಞರ ವರದಿ ಮೇಲೆ ತೀರ್ಮಾನ ಮಾಡುತ್ತೇವೆ ಎಂದು ಸ್ಪಷ್ಟಪಡಿಸಿದರು.

 

Tags: