Protest

ನ್ಯಾಯಾಧೀಶರ ಭಾವಚಿತ್ರಕ್ಕೆ ಚಪ್ಪಲಿ ಸೇವೆ ಮಾಡಿ ಆಕ್ರೋಶ ಹೊರಹಾಕಿದ ವಕೀಲರು

Share

ಗಣರಾಜ್ಯೋತ್ಸವದಂದು ಡಾ ಬಿ ಆರ್ ಅಂಬೇಡ್ಕರ್ ಅವರಿಗೆ ಅವಮಾನ ಮಾಡಿಲಾಗಿದೆ ಎಂದು ಆರೋಪಕ್ಕೆ ಸಂಬಂಧಿಸಿದಂತೆ ರಾಯಚೂರಿನ ಜಿಲ್ಲಾ ನ್ಯಾಯಾದೀಶ ಮಲ್ಲಿಕಾರ್ಜುನಗೌಡರ ವಿರುದ್ದ
ವಿಜಯಪುರ ಜಿಲ್ಲೆ ಮುದ್ದೇಬಿಹಾಳ ಪಟ್ಟಣದಲ್ಲಿ ನ್ಯಾಯಾದೀಶರ ವಿರುದ್ದ ಪ್ರತಿಭಟನೆ ನಡೆಸಿದರು.

ಪಟ್ಟಣದ ಬಸವೇಶ್ವರ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ಹೋರಾಟ ನಡೆಸಿದ ದಲಿತ ಪರ ಹಾಗೂ ಪ್ರಗತಿಪರ ಸಂಘಟನೆಗಳ ಒಕ್ಕೂಟದ ನೇತೃತ್ವದಲ್ಲಿ ನ್ಯಾಯಾಧೀಶರ ಭಾವಚಿತ್ರಕ್ಕೆ ಚಪ್ಪಲಿಸೇವೆ ಮಾಡಿ ಆಕ್ರೋಶ ಹೊರಹಾಕಿದರು.‌ ಮುದ್ದೇಬಿಹಾಳ ವಿಜಯಪುರ ರಸ್ತೆ ತಡೆದು ಘೋಷಣೆ ಕೂಗಿದತು. ಪ್ರತಿಭಟನಾಕಾರರು ಬಸವೇಶ್ವರ ವೃತ್ತದಿಂದ ತಹಶೀಲ್ದಾರ್ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ ನ್ಯಾಯಾಧೀಶರ ವಿರುದ್ದ ಕ್ರಮ ತೆಗೆದು ಕೊಳ್ಳಬೇಕೆಂದು ಸರ್ಕಾರಕ್ಕೆ ಒತ್ತಾಯಿಸಿದರು.

Tags: