ಸಂವಿಧಾನಶಿಲ್ಪಿ, ಭಾರತರತ್ನ ಡಾ.ಬಿ.ಆರ್.ಅಂಬೇಡ್ಕರ್ ಅವರಿಗೆ ಅಪಮಾನ ಮಾಡಿರುವ ಮಲ್ಲಿಕಾರ್ಜುನಗೌಡರನ್ನು ನ್ಯಾಯಾಧೀಶರ ಹುದ್ದೆಯಿಂದ ವಜಾ ಮಾಡಬೇಕು ಎಂದು ಭಾರತೀಯ ಬೌದ್ಧ ಮಹಾಸಭಾ ಬೆಳಗಾವಿ ಘಟಕ ಆಗ್ರಹಿಸಿದೆ.
ಶನಿವಾರ ಬೆಳಗಾವಿಯ ಡಿಸಿ ಕಚೇರಿ ಮುಂಭಾಗದಲ್ಲಿ ರಾಯಚೂರು ನ್ಯಾಯಾಧೀಶ ಮಲ್ಲಿಕಾರ್ಜುನಗೌಡ ವಿರುದ್ಧ ಭಾರತೀಯ ಬೌದ್ಧ ಮಹಾಸಭಾ ಬೆಳಗಾವಿ ಘಟಕದಿಂದ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ಇಡೀ ವಿಶ್ವದಲ್ಲಿ ಶ್ರೇಷ್ಠ ಸಂವಿಧಾನ ಕೊಟ್ಟ ಮಹಾಮಾನವತಾವಾದಿ ಡಾ.ಬಾಬಾಸಾಹೇಬ ಅಂಬೇಡ್ಕರ್ ಅವರಿಗೆ ಅಪಮಾನ ಮಾಡಿದ್ದಾರೆ ಎಂದು ನ್ಯಾಯಾಧೀಶ ಮಲ್ಲಿಕಾರ್ಜುನಗೌಡ ವಿರುದ್ಧ ಪ್ರತಿಭಟನಾಕಾರರು ತೀವ್ರ ಆಕ್ರೋಶ ಹೊರ ಹಾಕಿದರು.
ಪ್ರತಿಭಟನೆಯಲ್ಲಿ ಭಾರತೀಯ ಬೌದ್ಧ ಮಹಾಸಭಾ ಜಿಲ್ಲಾಧ್ಯಕ್ಷ ಯಲ್ಲಪ್ಪ ಕಾಂಬಳೆ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶೇಖರ್ ಶಿಂಗೆ, ಖಜಾಂಚಿ ಯಮನಪ್ಪ ಗಾಡಿನಾಯಿಕ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.