ರಾಯಚೂರಿನಲ್ಲಿ 73ನೇ ಗಣರಾಜ್ಯೋತ್ಸವದ ವೇಳೆ ಅಂಬೇಡ್ಕರ್ ಭಾವಚಿತ್ರಕ್ಕೆ ಅವಮಾನ ಮಾಡಿದ ಜಿಲ್ಲಾ ನ್ಯಾಯಾಧೀಶರಾದ ಮಲ್ಲಿಕಾರ್ಜುನ ಗೌಡ ಅವರ ಮೇಲೆ ಕ್ರಮಕ್ಕೆ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ, ಅಂಬೇಡ್ಕರ್ ಧ್ವನಿ ವತಿಯಿಂದ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿತ್ತು.
ರಾಯಚೂರಿನಲ್ಲಿ ಜಿಲ್ಲಾನ್ಯಾಯಾಧೀಶರಾದ ಮಲ್ಲಿಕಾರ್ಜುನ ಗೌಡರವರು 73ನೇ ಗಣರಾಜ್ಯೋತ್ಸವ ಆಚರಣೆ ವೇಳೆ ಪೂಜಾ ಸ್ಥಳದಿಂದ ಅಂಬೇಡ್ಕರ್ ಭಾವಚಿತ್ರವನ್ನು ತೆಗೆಸಿ ಅಂಬೇಡ್ಕರ್ ಭಾವಚಿತ್ರಕ್ಕೆ ಅವಮಾನ ಮಾಡಿದ್ದಾರೆ ಇಂಥವರ ಮೇಲೆ ಕಠಿಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ವತಿಯಿಂದ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ನ್ಯಾ.ಮಲ್ಲಿಕಾರ್ಜುನಗೌಡ ವಿರುದ್ಧ ಧಿಕ್ಕಾರ ಕೂಗಿದ ಪ್ರತಿಭಟನಾಕರರು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಚಂದ್ರಕಾಂತ ಕಾದ್ರೊಳ್ಳಿ ಬಣದ ಮಹಾಲಿಂಗ ಅಗರಿ, ಗಣರಾಜ್ಯೋತ್ಸವದ ವೇಳೆ ಬಾಬಾಸಾಹೇಬ್ ಅಂಬೇಡ್ಕರ್ರವರಿಗೆ ಅವಮಾನ ಮಾಡಿದ್ದಾರೆ. ಒಬ್ಬ ಜಿಲ್ಲಾ ನ್ಯಾಯಾಧೀಶರಾಗಿ ಈ ರೀತಿ ಮಾಡಿರುವುದು ಎಷ್ಟು ಸರಿ ಎಂದು ಪ್ರಶ್ನೆ ಮಾಡಿದರು. ಇನ್ನು ರಾಜ್ಯದಲ್ಲಿ ಕೆಲವರು ಸಂವಿಧಾನ ಬದಲು ಮಾಡುವ ಕುರಿತಂತೆ ಮಾತನಾಡುತ್ತಿದ್ದಾರೆ. ಹಾಗಾಗಿ ಅಂಬೇಡ್ಕರ್ ಭಾವಚಿತ್ರಕ್ಕೆ ಅವಮಾನ ಮಾಡಿದವರ ಮೇಲೆ ಕಠಿಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಬೆಳಗಾವಿ ಜಿಲ್ಲೆಯ ವಿವಿಧ ತಾಲೂಕುಗಳ ದಲಿತ ಸಂಘಟನೆಗಳ ನಾಯಕರು ಉಪಸ್ಥಿತರಿದ್ದರು.