ಖಾಸಗಿ ಬಸ್ಸೊಂದು ಪುನಾ ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಮೇಲೆ ಉರುಳಿ ಬಿದ್ದ ಪರಿಣಾಮ ಕೆಲವು ಗಂಟೆಗಳಿಂದ ರಸ್ತೆ ಸಂಚಾರ ಬಂದಾಗಿರುವ ಘಟನೆ ರಾಣಿ ಚನ್ನಮ್ಮ ವಿವಿ ಬಳಿ ನಡೆದಿದೆ.
ಇಂದು ಮಧ್ಯಾಹ್ನ 12 ಗಂಟೆ ಸುಮಾರಿಗೆ ಖಾಸಗಿ ಬಸ್ ಕಾಕತಿ ಪೆÇಲೀಸ ಠಾಣಾ ವ್ಯಾಪ್ತಿಯ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಬಳಿ ಪುನಾ ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಮೇಲೆ ಉರುಳಿ ಬಿದ್ದಿದೆ. ನಡು ರಸ್ತೆಯಲ್ಲಿ ಈ ಬಸ್ ಬಿದ್ದಿರುವ ಹಿನ್ನೆಲೆಯಲ್ಲಿ ಬೇರೆ ವಾಹನಗಳು ಸಂಚರಿಸಲು ಅವಕಾಶ ಇಲ್ಲದೆ ಕೆಲವು ಗಂಟೆಗಳಿಂದ ರಸ್ತೆ ಸಂಚಾರಕ್ಕೆ ಅಸ್ತ ವ್ಯಸ್ತ ಉಂಟಾಗಿದೆ. ಆದರೆ ಈ ಘಟನೆಯಲ್ಲಿ ಪ್ರಾಣ ಹಾನಿಯಾದ ಬಗ್ಗೆ ಮಾಹಿತಿ ದೊರೆತಿಲ್ಲ.