ಬೆಂಗಳೂರಿನಲ್ಲಿ ಅಖಿಲ ಭಾರತ ವಿದ್ಯಾರ್ಥಿ ಪರಿಷತ್ ಸಂಘಟನೆ ಕಾರ್ಯಕರ್ತರ ಮೇಲೆ ಪೊಲೀಸರು ನಡೆಸಿದ ಹಲ್ಲೆಯನ್ನು ಖಂಡಿಸಿ ಬೆಳಗಾವಿಯಲ್ಲಿ ಕಾನೂನು ವಿದ್ಯಾರ್ಥಿಗಳು ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿದರು.
ಬೆಂಗಳೂರು ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಪರೀಕ್ಷೆ, ಮೌಲ್ಯಮಾಪನ, ಹಾಗೂ ಪುನರ್ ಮೌಲ್ಯಮಾಪನ ಸೇರಿದಂತೆ ತಮಗೆ ಆಗುತ್ತಿರುವ ಅನ್ಯಾಯದ ವಿರುದ್ಧ ಹೋರಾಟ ಮಾಡುತ್ತಿದ್ದರು. ಈ ವೇಳೆ ಪೊಲೀಸರು ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ ಮಾಡಿದ್ದಾರೆ. ಹಾಗಾಗಿ ಅವರ ಮೇಲೆ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಬೆಳಗಾವಿಯಲ್ಲಿ ಎಬಿವಿಪಿ ಕಾರ್ಯಕರ್ತರು ಜಿಲ್ಲಾಧಿಕಾರಿಗಳ ಮೂಲಕ ಗೃಹ ಸಚಿವರು ಹಾಗೂ ಮುಖ್ಯಮಂತ್ರಿಗಳಿಗೆ ಮನವಿ ಮಾಡಿದರು.
ಈ ವೇಳೆ ಮಾತನಾಡಿದ ಕಾನೂನು ವಿದ್ಯಾರ್ಥಿ ನಾರಾಯಣ ಬಾಗಿ, ನಿನ್ನೆ ಬೆಂಗಳೂರಿನಲ್ಲಿ ಎಬಿವಿಪಿ ಕಾರ್ಯಕರ್ತರ ಮೇಲೆ ಪೊಲೀಸರು ಲಾಠಿಚಾರ್ಜ ಮಾಡಿದ್ದಾರೆ. ಪರೀಕೆ ಮೌಲ್ಯಮಾಪನ ಹಾಗೂ ಪುನರ್‍ಮೌಲ್ಯಮಾಪನ ಸೇರಿದಂತೆ ತಮ್ಮ ಸಮಸ್ಯೆಗಳನ್ನು ಕುರಿತಂತೆ ಹೋರಾಟ ಮಾಡುತ್ತಿದ್ದ ವೇಳೆ ಎಬಿವಿಪಿ ಕಾರ್ಯಕರ್ತರ ಮೇಲೆ ಪೊಲೀಸರು ಹಲ್ಲೆ ಮಾಡಿದ್ದಾರೆ. ಹಾಗಾಗಿ ಅವರ ಮೇಲೆ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳು ಹಾಗೂ ಗೃಹ ಸಚಿವರಿಗೆ ಮನವಿ ಮಾಡುತ್ತಿದ್ದೇವೆ ಎಂದರು.
ಇನ್ನು ಇದೇ ವೇಳೆ ಮಾತನಾಡಿದ , ಬೆಂಗಳೂರು ವಿಶ್ವ ವಿದ್ಯಾಲಯದಲ್ಲಿ ವಿದ್ಯಾರ್ಥಿಗಳು ಹಾಗೂ ಎಬಿವಿಪಿ ಕಾರ್ಯಕರ್ತರು ಪ್ರತಿಭಟನೆ ಮಾಡುತ್ತಿದ್ದರು. ಈ ವೇಳೆ ಪೊಲೀಸರು ವಿದ್ಯಾರ್ಥಿಗಳು ಹಾಗೂ ಎಬಿವಿಪಿ ಕಾರ್ಯಕರ್ತರ ಮೇಲೆ ಲಾಠಿ ಚಾರ್ಜ ಮಾಡಿದ್ದಾರೆ. ಈ ಘಟನೆ ನಮಗೆಲ್ಲ ಸಾಕಷ್ಟು ದುಃಖವನ್ನು ತಂದಿದ್ದು ನಾವು ಈ ಘಟನೆಯನ್ನು ಖಂಡಿಸುತ್ತೇವೆ. ಲಾಠಿ ಚಾರ್ಜ ಮಾಡಿದ ಪೊಲೀಸರ ಮೇಲೆ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳು ಹಾಗೂ ಗೃಹ ಸಚಿವರಿಗೆ ಮನವಿ ಮಾಡುತ್ತಿದ್ದೇವೆ ಎಂದರು.
ಬೆಂಗಳೂರಿನಲ್ಲಿ ನಡೆದ ಘಟನೆಯಿಂದಾಗಿ ವಿದ್ಯಾರ್ಥಿಗಳು ಹಾಗೂ ಎಬಿವಿಪಿ ಕಾರ್ಯಕರ್ತರು ಕ್ರೀಧಗೊಂಡಿದ್ದಾರೆ. ಇನ್ನು ಲಾಠಿಚಾರ್ಜ ಮಾಡಿದ ಪೊಲೀಸರ ಮೇಲೆ ಕ್ರಮ ಕೈಗೊಳ್ಳಬೇಕೆಂದು ಮುಖ್ಯಮಂತ್ರಿಗಳು ಹಾಗೂ ಗೃಹ ಸಚಿವರಿಗೆ ಮನವಿ ಮಾಡಿದ್ದಾರೆ. ಇನ್ನು ಈ ಕುರಿತಂತೆ ಮುರ್ಖಐಂಂಥ್ರಿಗಳ ನಡೆ ಏನು ಎಂದು ಕಾದು ನೋಡಬೇಕಿದೆ.