ಬೆಳಗಾವಿಯ ಉತ್ತರ ವಿಧಾನಸಭಾ ಕ್ಷೇತ್ರದಲ್ಲಿ ಪ್ರಧಾನಮಂತ್ರಿ ಆವಾಸ ಯೋಜನೆ ಅಡಿಯಲ್ಲಿ ಸರ್ವರಿಗೂ ಸೂರು ಕಾರ್ಯಕ್ರಮದ ನಿಮಿತ್ಯ ಬೆಳಗಾವಿ ಉತ್ತರ ಕ್ಷೇತ್ರದಲ್ಲಿ 905 ಮನೆಗಳ ನಿರ್ಮಾಣ ಕಾಮಗಾರಿಗೆ ಸಂಸದೆ ಮಂಗಳಾ ಅಂಗಡಿ ಚಾಲನೆ ನೀಡಿದರು.
ಪ್ರಧಾನಿ ನರೇಂದ್ರ ಮೋದಿಯವರ ಕನಸಾದ ಸರ್ವರಿಗೂ ಸೂರು ಯೋಜನೆಯಡಿ ಪ್ರಧಾನ ಮಂತ್ರಿ ಆವಾಸ್ ಯೋಜನೆ ಹಾಗೂ ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿ ವತಿಯಿಂದ ಬೆಳಗಾವಿ ಉತ್ತರ ಮತಕ್ಷೇತ್ರದ ರುಕ್ಮಿಣಿನಗರ ಸ್ಲಂ ಏರಿಯಾ, ರಾಮನಗರ, ಹಾಗೂ ಚವ್ಹಾಟಗಲ್ಲಿಗಳಲ್ಲಿ 905 ಮನೆಗಳ ನಿರ್ಮಾಣ ಕಾಮಗಾರಿಗೆ ಬೆಳಗಾವಿ ಸಂಸದೆ ಮಂಗಳಾ ಅಂಗಡಿ ಗುದ್ದಲಿ ಪೂಜೆಯನ್ನು ನೆರವೇರಿಸಿದರು.
ಈ ವೇಳೆ ಸಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಸಂಸದೆ ಮಂಗಳಾ ಅಂಗಡಿ, ಪ್ರಧಾನಿ ಮೋದಿಜಿಯವರ ಕನಸಿನಂತೆ ದೇಶದಲ್ಲಿ ಪ್ರತಿಯೊಬ್ಬರಿಗೂ ಮನೆಯನ್ನು ನೀಡುವ ಉದ್ದೇಶದಿಂದ ಕಾಮಗಾರಿಯನ್ನು ಕೈಗೊಳ್ಳಲಾಗಿದೆ. ಈ ನಿಟ್ಟಿನಲ್ಲಿ ಬೆಳಗಾವಿ ಉತ್ತರ ಕ್ಷೇತ್ರದ ರುಕ್ಮಿಣಿ ನಗರ ಏರಿಯಾ, ರಾಮನಗರ ಹಾಗೂ ಚವ್ಹಾಟಗಲ್ಲಿಗಳಲಲ್ಲಿ 905 ಮನೆಗಳ ನಿರ್ಮಾಣ ಕಾಮಗಾರಿಗೆ ಶಂಕುಸ್ಥಾಪನೆಯನ್ನು ನೆರವೇರಿಸಲಾಗಿದೆ. ಹಾಗಾಗಿ ಸಾರ್ವಜನಿಕರು ಅದರ ಸದುಪಯೋಗವನ್ನು ಮಾಡಿಕೊಳ್ಳಬೇಕೆಂದು ಮನವಿ ಮಾಡಿದರು.
ಇನ್ನು ಇದೇ ಸಂದರ್ಭದಲ್ಲಿ ಮಾತನಾಡಿದ ಬೆಳಗಾವಿ ಉತ್ತರ ಶಾಸಕ ಅನೀಲ್ ಬೆನಕೆ, ದೇಶದಲ್ಲಿ 2023-24ರ ವೇಳೆಗೆ ಯಾವೊಬ್ಬ ವ್ಯಕ್ತಿಯೂ ಸೂರು ಇಲ್ಲದೇ ಇರಬಾರದು. ಹಾಗಾಗಿ ಮೋದಿರವರ ಕನಸನ್ನು ಸಾಕಾರಗೊಳಿಸುವ ನಿಟ್ಟಿನಲ್ಲಿ ಕಾರ್ಯ ಮಾಡುತ್ತಿದ್ದೇವೆ. ಇನ್ನು ಈ ಹಿಂದೆ ದಿವಂಗತ ಸುರೇಶ ಅಂಗಡಿಯವರು ಸಂಸದರಾಗಿದ್ದಾಗ ಅನೇಕ ಮನೆಗಳನ್ನು ಇಲ್ಲಿ ಕಟ್ಟಿ ಕೊಡಲಾಗಿದೆ. ಇನ್ನು ಈಗಾಗಲೇ ನಮ್ಮ ಕ್ಷೇತ್ರದಲ್ಲಿ 905 ಮನೆಗಳಿಗೆ ಶಂಕುಸ್ಥಾಪನೆ ನೆರವೇರಿಸಲಾಗಿದೆ.ಇನ್ನು ಅಲಾರವಾಡದಲ್ಲಿ 1400 ಮನೆಗಳನ್ನು ನಿರ್ಮಾಣ ಮಾಡುವ ಗುರಿಯನ್ನು ಹೊಂದಿದ್ದೇವೆ. ಇನ್ನು ಎಸ್.ಸಿ ಎಸ್.ಟಿ ಜನರಿಗೆ ಸರಕಾರದಿಂದ ಇನ್ನೂ ಹೆಚ್ಚು ಸೌಲಭ್ಯಗಳು ಸಿಗುತ್ತಿದ್ದು ಈ ನಿಟ್ಟಿನಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡಲಾಗುತ್ತದೆ. ಸಾರ್ವಜನಿಕರು ಇದನ್ನು ಸದುಪಯೋಗ ಮಾಡಿಕೊಳ್ಳಬೇಕೆಂದು ಮನವಿ ಮಾಡಿದರು.
2023-24ರ ವೇಳೆಗೆ ದೇಶದಲ್ಲಿರುವ ಪ್ರತಿಯೊಬ್ಬ ಸೂರಿಲ್ಲದ ವ್ಯಕ್ತಿಗೂ ಸೂರು ಒದಗಿಸುವ ನಿಟ್ಟಿನಲ್ಲಿ ಕೇಂದ್ರದ ಕಾರ್ಯಕ್ರಮಕ್ಕೆ ಸಾರ್ವಜನಿಕರು ಹರ್ಷ ವ್ಯಕ್ತಪಡಿಸಿದ್ದಾರೆ. ಇನ್ನು ಕೇಂದ್ರದ ಈ ಯೋಜನೆ ಎಷ್ಟರ ಮಟ್ಟಿಗೆ ಪೂರ್ಣವಾಗುತ್ತದೆ ಎಂಬುದ ಮಾತ್ರ ಯಕ್ಷ ಪ್ರಶ್ನೆ.