Banglore

ಮಾಜಿ ಸಿಎಂ ಯಡಯೂರಪ್ಪ ಮೊಮ್ಮಗಳು ಆತ್ಮಹತ್ಯೆಗೆ ಶರಣು..!

Share

ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಮೊಮ್ಮಗಳು ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಶರಣಾಗಿದ್ದಾರೆ.

ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಮೊಮ್ಮಗಳು ಡಾ.ಸೌಂದರ್ಯ ಇಂದು ಬೆಳಗ್ಗೆ ಸುಮಾರು 10 ಗಂಟೆಗೆ ಬೆಂಗಳೂರಿನ ತಮ್ಮ ನಿವಾಸದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪದ್ಮಾವತಿ ಪುತ್ರಿ ಸೌಂದರ್ಯ(30) ಆತ್ಮಹತ್ಯೆ ಮಾಡಿಕೊಂಡ ಯುವತಿ. ಹೈಗ್ರೌಂಡ್ಸ್ ಪೆÇಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಬಿಎಸ್ ಯಡಿಯೂರಪ್ಪ ಅವರ ದ್ವಿತೀಯ ಪುತ್ರಿ ಪದ್ಮಾವತಿ ಅವರ ಮಗಳು ಸೌಂದರ್ಯ ಅವರು ವಸಂತನಗರದಲ್ಲಿರುವ ಮೌಂಟ್ ಕಾರ್ಮೆಲ್ ಕಾಲೇಜು ಬಳಿಯ ಫ್ಲ್ಯಾಟ್ನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಡಾ. ಸೌಂದರ್ಯ ರಾಮಯ್ಯ ಆಸ್ಪತ್ರೆಯಲ್ಲಿ ವೈದ್ಯೆಯಾಗಿದ್ದರು. 2018ರಲ್ಲಿ ವೈದ್ಯ ಡಾ. ನೀರಜ್ ಅವರನ್ನು ಸೌಂದರ್ಯ ಮದುವೆಯಾಗಿದ್ದರು. ಸೌಂದರ್ಯ ಪತಿ ನೀರಜ್ ಬೆಳಗ್ಗೆ 8 ಗಂಟೆಗೆ ಕೆಲಸಕ್ಕೆ ಹೋಗಿದ್ದರು.

ಇತ್ತ ಸೌಂದರ್ಯ 10 ಗಂಟೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮನೆ ಕೆಲಸದವರು ಬಂದಾಗ ಬಾಗಿಲು ತೆಗೆಯದಿದ್ದಾಗ ಸೌಂದರ್ಯ ಪತಿ ಡಾ. ನೀರಜ್‍ಗೆ ಕೆಲಸದವರು ಕರೆ ಮಾಡಿದ್ದರು. ಮನೆ ಕೆಲಸದವರು ಫೆÇೀನ್ ಮಾಡಿದ ಬಳಿಕ ಪ್ರಕರಣ ಬೆಳಕಿಗೆ ಬಂದಿದೆ.

Tags: