Vijaypura

10 ಲಕ್ಷ ಮೌಲ್ಯದ ಗೋವಾ ಮದ್ಯ ವಶಕ್ಕೆ

Share

ಅಕ್ರಮವಾಗಿ ಗೋವಾದಿಂದ ವಿಜಯಪುರಕ್ಕೆ ಮದ್ಯ ಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಅಬಕಾರಿ ಪೊಲೀಸರು ಬಂಧಿಸಿ ಲಕ್ಷಾಂತರ ಮೌಲ್ಯದ ಮದ್ಯ ಜಪ್ತಿಗೈದಿರುವ ಘಟನೆ ವಿಜಯಪುರ ಜಿಲ್ಲೆಯ ಬಬಲೇಶ್ವರ ಪಟ್ಟಣದ ಕಾಖಂಡಕಿ ಗ್ರಾಮದಲ್ಲಿ ನಡೆದಿದೆ.

ನವಮಾಥ ಕರಾಡೆ ಹಾಗೂ ದುಂಡಪ್ಪ ಹುಮನಾಬಾದ ಬಂಧಿತ ಆರೋಪಿಗಳು. ಇನ್ನೂ ಗೋವಾದಿಂದ ಎರಡು ಕಾರಿನಲ್ಲಿ ಅಕ್ರಮವಾಗಿ ಮದ್ಯ ಸಾಗಾಟಕ್ಕೆ ಯತ್ನಿಸಿರುವ ಖಚಿತ ಮಾಹಿತಿ ಮೇರೆಗೆ ಅಬಕಾರಿ ಪೊಲೀಸರು ದಾಳಿಗೈದು ಮದ್ಯ ಹಾಗೂ ಎರಡು ಕಾರ್ ಸೇರಿದಂತೆ 10 ಲಕ್ಷ ಮೌಲ್ಯದ ವಸ್ತುಗಳನ್ನು ಅಬಕಾರಿ ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ. ಈ ಕುರಿತು ಅಬಕಾರಿ ಪೊಲೀಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags: