Uncategorized

ಬೀದರ್‌ನಲ್ಲಿ 47 ಲಕ್ಷ ರೂ. ಮೌಲ್ಯದ ಗಾಂಜಾ ಜಪ್ತಿ – ನಾಲ್ವರು ಅರೆಸ್ಟ್

Share

ಬೀದರ್: ಆಂದ್ರಪ್ರದೇಶದಿಂದ ಬೀದರ್ (Bidar) ಮಾರ್ಗವಾಗಿ ಮಹಾರಾಷ್ಟ್ರಕ್ಕೆ ಅಕ್ರಮವಾಗಿ ಕಾರಿನಲ್ಲಿ ಸಾಗಿಸುತ್ತಿದ್ದ 47 ಲಕ್ಷ ರೂ.ಗೂ ಅಧಿಕ ಮೌಲ್ಯದ ಗಾಂಜಾವನ್ನು ಪೊಲೀಸರು ಜಪ್ತಿ ಮಾಡಿದ್ದಾರೆ. ಈ ವೇಳೆ ಕಾರಿನಲ್ಲಿದ್ದ ನಾಲ್ಕು ಜನ ಆರೋಪಿಗಳನ್ನು ಪೊಲೀಸರು (Police) ಬಂಧಿಸಿದ್ದಾರೆ.

ಭಾಲ್ಕಿಯ ಹಾಲಿಹಿಪ್ಪರ್ಗಾ ಕ್ರಾಸ್ ಬಳಿ ವಾಹನ ತಪಾಸಣೆ ವೇಳೆ ಕಾರಿನಲ್ಲಿ 25 ಕೆಜಿ ಗಾಂಜಾ ಪತ್ತೆಯಾಗಿದೆ. ಅಲ್ಲದೇ ಗೊನ್ನಳಿ ಬಳಿಯ ಮನೆಯಲ್ಲಿ ಸಂಗ್ರಹಿಸಿಟ್ಟಿದ್ದ 22 ಕೆಜಿ ಗಾಂಜಾವನ್ನು ಜಪ್ತಿ ಮಾಡಲಾಗಿದೆ. ಒಟ್ಟಾರೆ ಜಪ್ತಿ ಮಾಡಲಾದ ಗಾಂಜಾ ಮೌಲ್ಯ 47 ಲಕ್ಷಕ್ಕೂ ಅಧಿಕ ಎಂದು ಅಂದಾಜಿಸಲಾಗಿದೆ. ಸಾಗಾಟಕ್ಕೆ ಬಳಸಿದ್ದ ಕಾರನ್ನು ಜಪ್ತಿ ಮಾಡಲಾಗಿದೆ.
ನಾಲ್ಕು ಜನ ಆರೋಪಿಗಳನ್ನು ಪೊಲೀಸರು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಎಸ್ಪಿ ಚೆನ್ನಬಸವಣ್ಣ ಲಂಗೋಟಿ ಮಾರ್ಗದರ್ಶನದಲ್ಲಿ ಕಾರ್ಯಾಚರಣೆ ನಡೆಸಲಾಗಿದೆ.

Tags:

47 lakhs in Bidar. Valuable ganja seized – four arrested