Banglore

ಸಿಎಂ ಬೊಮ್ಮಾಯಿ ತಮ್ಮ ಹುಟ್ಟು ಹಬ್ಬದ ಪ್ರಯುಕ್ತ ಗೋಪೂಜೆ ನೇರವೇರಿಸಿದರು.

Share

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ತಮ್ಮ ಹುಟ್ಟುಹಬ್ಬದ ಅಂಗವಾಗಿ ಹಾಗೂ ಅವರ ನೇತೃತ್ವದ ಸರ್ಕಾರಕ್ಕೆ ಆರು ತಿಂಗಳು ಪೂರೈಸಿದ ಹಿನ್ನಲೆಯಲ್ಲಿ ತಮ್ಮ ಆರ್ ಟಿ ನಗರ್ ನಿವಾಸದಲ್ಲಿ ಗೋಪೂಜೆ ನೆರವೇರಿಸಿದರು.

ಈ ವೇಳೆ ಮಾಜಿ ಮುಖ್ಯ ಮಂತ್ರಿ ಬಿಎಸ್ ಯಡಿಯೂರಪ್ಪಾ, ಅಮೀತ ಶಾ, ಶಂಕರ ಪಾಟೀಲ ಮುನೇಯನಕೊಪ್ಪ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ದೂರವಾಣಿ ಕರೆ ಮಾಡಿ ಜನ್ಮದಿನದ ಶುಭಾಶಯ ಹಾಗೂ ಅವರ ನೇತೃತ್ವದ ಸರ್ಕಾರಕ್ಕೆ ಆರು ತಿಂಗಳು ತುಂಬಿರುವ ಹಿನ್ನಲೆ ಶುಭಾಶಯಗಳನ್ನು ಕೋರಿದರು.

ಆರ್‍ಟಿ ನಗರದ ಸಿಎಂ ನಿವಾಸದಲ್ಲಿ ಬಿಎಸ್‍ವಾಯ್, ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ, ಸಚಿವ ಪ್ರಭು ಚವ್ಹಾಣ ಬಸವರಾಜ ಬೊಮ್ಮಾಯಿಯವರಿಗೆ ಪುಷ್ಪ ಗುಚ್ಚ ನೀಡುವ ಮೂಲಕ ಹುಟ್ಟು ಹಬ್ಬದ ಶುಭಾಶಯಗಳನ್ನು ಕೋರಿದರು. ಈ ವೇಳೆ ಸಿಎಂ ಬಿಎಸ್‍ವಾಯ್ ಗೆ ಶಾಲು ಹೋದಿಸಿ ಸನ್ಮಾನಿಸಿದರು.

ಸಿಎಂ ಬೊಮ್ಮಾಯಿಯವರು ತಮ್ಮ ಹುಟ್ಟು ಹಬ್ಬದ ಹಿನ್ನಲೆಯಲ್ಲಿ ಬೆಂಗಳೂರಿನ ದೇವಾಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ಅವರ ಕುಟುಂಬದ ಸದಸ್ಯರು ಉಪಸ್ಥಿತರಿದ್ದರು.

Tags: