Uncategorized

ನೆಹರು ಓಲೇಕಾರ್ ಮತ್ತು ಜಾರಕಿಹೊಳಿ ಕುಟುಂಬಕ್ಕೆ ಮಂತ್ರಿ ಸ್ಥಾನ ನೀಡಿ: ಭಾರತೀಯ ದಲಿತ ಪ್ಯಾಂಥರ್ ಆಗ್ರಹ

Share

ಹಾವೇರಿ ಬಿಜೆಪಿ ಶಾಸಕ ನೆಹರು ಓಲೇಕಾರ್ ಮತ್ತು ರಮೇಶ ಜಾರಕಿಹೊಳಿ ಇಲ್ಲವೇ ಬಾಲಚಂದ್ರ ಜಾರಕಿಹೊಳಿ ಅವರಿಗೆ ಮಂತ್ರಿ ಸ್ಥಾನ ನೀಡಬೇಕು ಎಂದು ಭಾರತೀಯ ದಲಿತ ಪ್ಯಾಂಥರ್ ಹಾಗೂ ಛಲವಾದಿ ಮಹಾಸಭಾ ಬೆಳಗಾವಿ ಜಿಲ್ಲಾ ಘಟಕ ಆಗ್ರಹಿಸಿದೆ.
ಈ ಸಂಬಂಧ  ಡಿಸಿ ಮಹಾಂತೇಶ ಹಿರೇಮಠ ಅವರನ್ನು ಭೇಟಿಯಾದ ಭಾರತೀಯ ದಲಿತ ಪ್ಯಾಂಥರ್ ಹಾಗೂ ಛಲವಾದಿ ಮಹಾಸಭಾ ಪದಾಧಿಕಾರಿಗಳು ಕೇಂದ್ರ ಸಚಿವ ಅಮಿತ್ ಷಾ ಅವರಿಗೆ ಮನವಿ ಸಲ್ಲಿಸಿದರು.

ಇದೇ ವೇಳೆ ಮಾತನಾಡಿದ ಜಿಲ್ಲಾಧ್ಯಕ್ಷ ಡಾ.ಮಹಾನಿಂಗ ಕೋಲಕಾರ್ ಛಲವಾದಿ ಸಮಾಜ ಬೆಂಬಲ ನೀಡಿದ್ದರಿಂದ ಇಂದು ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಿದೆ. ಹೀಗಾಗಿ ಇತ್ತಿಚಿನ ದಿನಗಳಲ್ಲಿ ಸಂಪುಟ ವಿಸ್ತರಣೆ ಮಾಡುತ್ತಾರೆ ಎಂಬ ಮಾತು ಕೇಳಿ ಬರುತ್ತಿದೆ. ಈ ಬಾರಿಯಾದ್ರೂ ಛಲವಾದಿ ಸಮಾಜದ ನೆಹರು ಓಲೇಕಾರ್ ಅವರಿಗೆ ಸಚಿವ ಸ್ಥಾನ ನೀಡಬೇಕು. ಅದೇ ರೀತಿ ಬೆಳಗಾವಿ ಜಿಲ್ಲೆಯಿಂದ ಜಾರಕಿಹೊಳಿ ಕುಟುಂಬದ ಯಾರಿಗಾದ್ರೂ ಸಚಿವ ಸ್ಥಾನ ನೀಡಬೇಕು ಎಂದು ಆಗ್ರಹಿಸಿದರು.

ಈ ಸಂದರ್ಭದಲ್ಲಿ ಛಲವಾದಿ ಮಹಾಸಭಾ ಜಿಲ್ಲಾಧ್ಯಕ್ಷ ದುರ್ಗೇಶ್ ಮೇತ್ರಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

Tags: