Belagavi

ಹುಮನಾಬಾದ್ ತಹಶೀಲ್ದಾರ್ ಮೇಲೆ ಹಲ್ಲೆ ಖಂಡಿಸಿ ಕರ್ನಾಟಕ ರಾಜ್ಯ ನೌಕರರ ಸಂಘದಿಂದ ಜಿಲ್ಲಾಧಿಕಾರಿಗಳಿಗೆ ಮನವಿ

Share

ಬೀದರ್ ಜಿಲ್ಲೆಯ ಹುಮನಾಬಾದ್ ತಾಲೂಕಿನ ತಹಶೀಲ್ದಾರರ ಮೇಲೆ ಹಲ್ಲೆ ಮಾಡಿದ ಆರೋಪಿಗಳನ್ನು ಬಂಧಿಸಿ ಸರಕಾರಿ ನೌಕರರಿಗೆ ರಕ್ಷಣೆ ನೀಡಬೇಕೆಂದು ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ಬೆಳಗಾವಿ ಶಾಖೆಯ ವತಿಯಿಂದ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಮಾಡಿದರು.

ಬೀದರ ಜಿಲ್ಲೆಯ ಹುಮನಾಬಾದ್ ತಾಲೂಕಿನ ತಹಶೀಲ್ದಾರ್ ಪ್ರದೀಪ್ ಕುಮಾರ್ ಹಿರೇಮಠರವರು ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ಕೆಲ ದುಷ್ಕರ್ಮಿಗಳು ಅವರ ಕರ್ತವ್ಯಕ್ಕೆ ಅಡ್ಡಿ ಪಡಿಸಿ ಅವರ ಮೇಲೆ ಹಲ್ಲೆ ಮಾಡಿದ್ದಾರೆ. ಇದನ್ನು ರಾಜ್ಯ ಸರಕಾರಿ ನೌಕರರ ಸಂಘ ತೀವೃವಾಗಿ ಖಂಡಿಸುತ್ತದೆ. ಈ ಘಟನೆಯಲ್ಲಿ ಭಾಗಿಯಾದವರನ್ನು ಬಂಧಿಸಿ ಕಠಿಣ ಶಿಕ್ಷೆ ವಿಧಿಸಿ ಗಡಿಪಾರು ಮಾಡಬೇಕೆಂದು ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಮಾಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾಧ್ಯಕ್ಷರಾದ ಜಗದೀಶಗೌಡ ಪಾಟೀಲ್, ಬೀದರ್‍ನ ಹುಮನಾಬಾದ್ ನಲ್ಲಿ ದುಷ್ಕರ್ಮಿಗಳು ತಹಶೀಲ್ದಾರ್ ಮೇಲೆ ಹಲ್ಲೆ ಮಾಡಿದ್ದಾರೆ. ಇದನ್ನು ರಜ್ಯ ನೌಕರರ ಸಂಘ ತೀವೃವಾಗಿ ಖಂಡಿಸುತ್ತದೆ. ಹಾಗಾಗಿ ಈ ಹಲ್ಲೆಯಲ್ಲಿ ಭಾಗಿಯಾದವರ ಮೇಲೆ ಕಠಿಣ ಕ್ರಮವನ್ನು ತೆಗೆದುಕೊಂಡು ಅವರನ್ನು ಜಿಲ್ಲೆಯಿಂದ ಗಡಿಪಾರು ಮಾಡಬೇಕು. ಇನ್ನು ಇಂತಹ ಘಟನೆಗಳು ಮರುಕಳಿಸದಂತೆ ಸರಕಾರಿ ನೌಕರರಿಗೆ ಭದ್ರತೆ ಒದಗಿಸಬೇಕೆಂದು ಮನವಿ ಮಾಡಿದರು.

ಹುಮನಾಬಾದ್ ತಹಶೀಲ್ದಾರ್ ಮೇಲೆ ಹಲ್ಲೆ ಮಾಡಿದ ಕಿಡಿಗೇಡಿಗಳ ವಿರುದ್ಧ ತೀವೃ ಖಂಡನೆ ವ್ಯಕ್ತವಾಗುತ್ತದೆ. ಇನ್ನು ಇಂತವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಎಲ್ಲೆಡೆ ಕೇಳಿಬರುತ್ತಿದೆ. ಇನ್ನು ಈ ಕುರಿತಂತೆ ಸರಕಾರ ಏನು ಕ್ರಮ ಕೈಗೊಳ್ಳಲಿದೆ ಎಂದು ಕಾದು ನೋಡಬೇಕಿದೆ.

Tags: