ಬೆಂಗಳೂರಿನ ಕೆಆರ್ ಪುರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಕೋವಿಡ್ ನಿಂದ ಮೃತಪಟ್ಟ ಬಿಪಿಎಲ್ ಕುಟುಂಬದ ವಾರಸುದಾರರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ಚೆಕ್ ಮೂಲಕ ಪರಿಹಾರ ಧನ ವಿತರಿಸಿದರು.
ಕೆಆರ್ ಪುರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಕೋವಿಡ್ ನಿಂದ ಮೃತಪಟ್ಟ ಒಟ್ಟು 95 ಬಿಪಿಎಲ್ ಕುಟುಂಬಗಳಿಗೆ ತಲಾ 1 ಲಕ್ಷ ರೂಪಾಯಿಯಂತೆ ಪರಿಹಾರದ ಚೆಕ್ ಸಿಎಂ ವಿತರಿಸಿದರು. ಈ ಸಂದರ್ಭದಲ್ಲಿ ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜ್, ಆರೋಗ್ಯ ಸಚಿವ ಡಾ. ಕೆ ಸುಧಾಕರ್ , ಸಹಕಾರ ಸಚಿವ ಎಸ್ ಟಿ ಸೋಮಶೇಖರ್, ಬಿಬಿಎಂಪಿ ಆಡಳಿತಾಧಿಕಾರಿ ರಾಕೇಶ್ ಸಿಂಗ್, ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ ಮತ್ತು ಇತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು