Uncategorized

ಅಂಬೇಡ್ಕರ್ ಭಾವಚಿತ್ರಕ್ಕೆ ಅವಮಾನ ನ್ಯಾ. ಮಲ್ಲಿಕಾರ್ಜುನ ಗೌಡ ಮೇಲೆ ಕ್ರಮಕ್ಕೆ ಅಂಬೇಡ್ಕರ್ ಕ್ರಾಂತಿ ಯುವ ವೇದಿಕೆ ಆಗ್ರಹ

Share

ರಾಯಚೂರಿನಲ್ಲಿ ಜನೇವರಿ 26ರಂದು ನಡೆದ 73ನೇ ಗಣರಾಜ್ಯೋತ್ಸವದ ವೇಳೆ ಅಂಬೇಡ್ಕರ್ ಭಾವಚಿತ್ರಕ್ಕೆ ಅವಮಾನ ಮಾಡಿದ ಜಿಲ್ಲಾ ನ್ಯಾಯಾಧೀಶರಾದ ಮಲ್ಲಿಕಾರ್ಜುನ ಗೌಡ ಅವರ ಮೇಲೆ ಕ್ರಮಕ್ಕೆ ಆಗ್ರಹಿಸಿ ಅಂಬೇಡ್ಕರ್ ಕ್ರಾಂತಿ ಯುವ ವೇದಿಕೆ ವತಿಯಿಂದ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿತ್ತು.

ರಾಯಚೂರಿನಲ್ಲಿ ಜಿಲ್ಲಾನ್ಯಾಯಾಧಿಶರಾದ ಮಲ್ಲಿಕಾರ್ಜುನ ಗೌಡ 73ನೇ ಗಣರಾಜ್ಯೋತ್ಸವ ಆಚರಣೆ ವೇಳೆ ಪೂಜಾ ಸ್ಥಳದಿಂದ ಅಂಬೇಡ್ಕರ್ ಭಾವಚಿತ್ರವನ್ನು ತೆಗೆಸಿ ಅಂಬೇಡ್ಕರ್ ಭಾವಚಿತ್ರಕ್ಕೆ ಅವಮಾನ ಮಾಡಿದ್ದಾರೆ. ಹಾಗಾಗಿ ಇಂಥವರ ಮೇಲೆ ಕಠಿಣ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಬೆಳಗಾವಿಯಲ್ಲಿ ಅಂಬೇಡ್ಕರ್ ಕ್ರಾಂತಿ ಯುವ ವೇದಿಕೆ ವತಿಯಿಂದ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ರಾಣಿ ಚೆನ್ನಮ್ಮ ವೃತ್ತದಿಂದ ಜಿಲ್ಲಾಧಿಕಾರಿಗಳ ಕಚೇರಿ ವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದ ಪ್ರತಿಭಟನಾಕಾರರು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅಂಬೇಡ್ಕರ್ ಕ್ರಾಂತಿ ಯುವ ವೇದಿಕೆಯ ಮಹೇಶ್ ಗಾಡಿಒಡ್ಡರ್ ಮಾತನಾಡಿ, ಅಣರಾಜ್ಯೋತ್ಸವದ ವೇಳೆ ನ್ಯಾಯಮೂರ್ತಿ ಮಲ್ಲಿಕಾರ್ಜುನ ಗೌಡ ಅಂಬೇಡ್ಕರ್ ಫೋಟೊವನ್ನು ಪೂಜಾ ಸ್ಥಳದಿಂದ ತೆಗೆಸಿ ದಲಿತರಿಗಷ್ಟೇ ಅಲ್ಲದೇ ಇಡೀ ದೇಶಕ್ಕೆ ಅವಮಾನ ಮಾಡಿದ್ದಾರೆ. ಇಂಥವರಿಗೆ ಸವಲತ್ತು ಕೊಡುವ ಸರಕಾರಗಳಿಗೆ ಮೊದಲು ನಾಚಿಕೆಯಾಗಬೇಕು. ಇಂತಹ ಘಟನೆಗಳು ಮುಂದೆ ನಡೆಯದಂತೆ ಎಚ್ಚರ ವಹಿಸಬೇಕು. ಮುಂದಿನ ದಿನಮಾನಗಳಲ್ಲಿ ಈ ರೀತಿ ಆದರೆ ಅಂಥವರ ಮನೆಗೆ ಹೋಗಿ ತಕ್ಕ ಪಾಠ ಕಲಿಸುತ್ತೇವೆ. ಇನ್ನು ಮುಂಬರುವ ದಿನಗಳಲ್ಲಿ ದಲಿತರೆಲ್ಲ ಸೇರಿ ಉಗ್ರ ಹೋರಾಟ ಮಾಡುವುದಾಗಿ ಎಚ್ಚರಿಕೆ ನೀಡಿದರು.

ಈ ಸಂದರ್ಭದಲ್ಲಿ ಅಂಬೇಡ್ಕರ್ ಕ್ರಾಂತಿ ಯುವ ವೇದಿಕೆಯ ಅಧ್ಯಕ್ಷರು, ಉಪಾಧ್ಯಕ್ಷರು, ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಸೇರಿದಂತೆ ಇನ್ನೂ ಅನೇಕರು ಉಪಸ್ಥಿತರಿದ್ದರು.

Tags: