Belagavi

ಬೆಳಗಾವಿಯಲ್ಲಿ ರೈತರ ಹೋರಾಟಕ್ಕೆ ಬೆಂಬಲ ಸೂಚಿಸಿದ ವಕೀಲರ ಸಂಘ

Share

ಪ್ರತಿ ಟನ್ ಕಬ್ಬಿಗೆ 5500 ರೂಪಾಯಿ ದರ ನಿಗದಿ ಪಡಿಸುವಂತೆ ಆಗ್ರಹಿಸಿ ಬೆಳಗಾವಿ ಡಿಸಿ ಕಚೇರಿ ಮುಂದೆ ಅಹೋರಾತ್ರಿ ಧರಣಿ ಮುಂದುವರಿಸಿರುವ ರೈತರ ಹೋರಾಟಕ್ಕೆ ವಕೀಲರ ಸಂಘ ಬೆಂಬಲ ಕೊಟ್ಟಿದೆ. ಬುಧವಾರ ಈ ಸಂಬಂಧ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲು ನಿರ್ಧರಿಸಿದೆ.

ಹೌದು ಸೋಮವಾರ ಬೆಳಗಾವಿಯಲ್ಲಿ ಬೃಹತ್ ಪ್ರತಿಭಟನಾ ರ್ಯಾಲಿ ನಡೆಸಿ ಡಿಸಿ ಕಚೇರಿ ಮುಂದೆ ಧರಣಿ ನಡೆಸುತ್ತಿರುವ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆಯ ಪದಾಧಿಕಾರಿಗಳ ಹೋರಾಟಕ್ಕೆ ಬೆಳಗಾವಿ ಜಿಲ್ಲಾ ವಕೀಲರ ಸಂಘ ಕೂಡ ಬೆಂಬಲ ಘೋಷಿಸಿದೆ.

ಈ ಬಗ್ಗೆ ಮಾಹಿತಿ ನೀಡಿರುವ ವಕೀಲರ ಸಂಘದ ಅಧ್ಯಕ್ಷ ಪ್ರಭು ಯತ್ನಟ್ಟಿ ಎಫ್‍ಆರ್‍ಪಿ ದರ ನೀಡುವಂತೆ ರೈತರು ಪ್ರತಿಭಟನೆ ಮಾಡುತ್ತಿದ್ದಾರೆ. ಹೀಗಾಗಿ ನಾವು ಕೂಡ ರೈತರ ಹೋರಾಟಕ್ಕೆ ಬೆಂಬಲ ಸೂಚಿಸಿದ್ದೇವೆ. ನಾಳೆ ಬುಧವಾರ ಬೆಳಿಗ್ಗೆ 12 ಗಂಟೆ ಸುಮಾರಿಗೆ ರೈತರ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಮನವಿ ಸಲ್ಲಿಸುತ್ತೇವೆ ಎಂದರು.

Tags: