Politics

ಯಾರು ಪಕ್ಷ ಮಾಡಿದರು, ಯಾರು ಪಕ್ಷ ಬಿಟ್ಟರು? ಇನ್ನು ಕೆಲವರು ಪಕ್ಷ ಬಿಟ್ಟು ಹೋಗುವವರೂ ಇದ್ದಾರೆ, =ಶಾಸಕ ಯತ್ನಾಳ

Share

:ನಾವು ನಮ್ಮ ಪಕ್ಷದ ಮುಂದಿನ ಚುನಾವಣೆಯಲ್ಲಿ ಬಹುಮತ ಪಡೆಯಬೇಕು ಎಂಬುದಷ್ಟೆ ನಮ್ಮ ಮುಂದಿನ ಗುರಿ ಇದೆ‌ ಎಂದು ಜನಾರ್ಧನರೆಡ್ಡಿ ನೂತನ ಪಕ್ಷ ವಿಚಾರಕ್ಕೆ ಸಂಬಂಧಿಸಿದಂತೆ ವಿಜಯಪುರ ನಗರದಲ್ಲಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಹೇಳಿದರು. ಯಾರು ಪಕ್ಷ ಮಾಡಿದರು, ಯಾರು ಪಕ್ಷ ಬಿಟ್ಟರು? ಇನ್ನು ಕೆಲವರು ಪಕ್ಷ ಬಿಟ್ಟು ಹೋಗುವವರೂ ಇದ್ದಾರೆ, ಹೊಸದಾಗಿ ಪಕ್ಷಕ್ಕೆ ಬರೋರು ಇದ್ದಾರೆ,

ಕೆಲವೊಂದು ಮಂದಿ ಪ್ರಾಣ ಹೋದರು ಸೋನಿಯಾಗಾಂಧಿ ಅವರನ್ನು ಬಿಟ್ಟು ಬೇರೆ ಪಕ್ಷ ಸೇರೋದಿಲ್ಲ ಅಂತ ನಾಟಕ ಮಾಡ್ತಾರೆ ಅಲ್ಲಿ ದೆಹಲಿಗೆ ಹೋಗಿ ನಾವು ಬಿಜೆಪಿ ಸೇರ್ತಿವಿ ಎಂದು ಇಲ್ಲಿಯವರೇ ಒಂದಿಬ್ಬರು ಓಡಾಡ್ತಿದ್ದಾರೆ ಎಂದರು. ಸಚಿವ ಸಂಪುಟ ಚರ್ಚೆ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿ ನಾನು ಸಂಪುಟ ವಿಚಾರದಲ್ಲಿ ಇಲ್ಲವೇ ಇಲ್ಲ. ಈಶ್ವರಪ್ಪ, ರಮೇಶ ಜಾರಕಿಹೊಳಿ,

ಸಿ ಪಿ ಯೊಗೇಶ್ವರ ಅವರು ಮಂತ್ರಿ ಆಗಬೇಕು ಅಂತಿದಾರೆ, ನಾನು ಸಿಎಂ ಬೊಮ್ಮಾಯಿ ಅವರಿಗೆ ಹೇಳಿದ್ದು ಇಷ್ಟೆ ಮೀಸಲಾತಿ ಕೊಡಿ, ಕಥೆ ಹೇಳಬೇಡಿ ಎಂದು ಮೀಸಲಾತಿ ವಿಚಾರದಲ್ಲಿ ಸ್ಪಷ್ಟವಾಗಿ ಎಂದಿದ್ದೇನೆ ಎಂದರು. ನಮಗೇನು ಸಚಿವ ಸ್ಥಾನ ಬೇಕಾಗಿಲ್ಲ, ಮೂರು ತಿಂಗಳ ಮಂತ್ರಿ ಆಗೋದು ಅವಶ್ಯಕತೆ ಇಲ್ಲ ಎಂದರು. ನನಗೇನು ಮಂತ್ರಿ ಆಗಬೇಕು ಎಂಬುದು ಇಲ್ಲ, ನಾನು ತಲೆ ಕೆಡೆಸಿಕೊಂಡಿಲ್ಲ, ನಾ‌ ಆಗೋದು ಇಲ್ಲಾ ಎಂದು ಸ್ಪಷ್ಟ ಪಡಿಸಿದರು.

Tags: