ಬೆಳಗಾವಿ ಎಬಿವಿಪಿಯ 42ನೇ ರಾಜ್ಯ ಸಮ್ಮೇಳನದ ಅಂಗವಾಗಿ ನಗರದಲ್ಲಿಶನಿವಾರ ಎಬಿವಿಪಿ ಕಾರ್ಯಕರ್ತರು ಬೃಹತ್ ಶೋಭಾಯಾತ್ರೆ ನಡೆಸಿದರು.
ಮಾನವನ ಜೀವನದಲ್ಲಿ ಮೂರು ಹಂತಗಳು ಪ್ರಮುಖವಾಗಿವೆ. ಯುವಕರಿಗೆ ಅನೇಕ ಸ ಕೆಲಸಗಳನ್ನು ಮಾಡುವ ಶಕ್ತಿ ಇದೆ. ಅದೇ ಕೆಲಸವನ್ನು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಮಾಡುತ್ತಿದೆ. ವಿದ್ಯಾರ್ಥಿಗಳೇ ದೇಶದ ಶಕ್ತಿಯಾಗಿದ್ದು, ದೇಶದ ಅಭಿವೃದ್ಧಿ ವಿದ್ಯಾರ್ಥಿಗಳ ಕೈಯಲ್ಲಿದೆ ಎಂದು ಘೋಷಣೆ ಕೂಗಿದರು.
ಚನ್ನಮ್ಮ ವೃತ್ತದಿಂದ ಆರಂಭವಾದ ಯಾತ್ರೆ, ಬಸವೇಶ್ವರ ವೃತ್ತ, ಸಂಗೊಳ್ಳಿ ರಾಯಣ್ಣನ ವೃತ್ತ ಸೇರಿದಂತೆ ವಿವಿಧ ಮಾರ್ಗಗಗಳಲ್ಲಿ ಯಾತ್ರೆ ಸಂಚರಿಸಿತು.