ಉಡುಪಿ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಅದ್ಯಕ್ಷತೆಯಲ್ಲಿ
ಜಿಲ್ಲಾ ಕಾಂಗ್ರೆಸ್ ಸಮಿತಿ ಸಭೆ ಜರುಗಿತು
ಉಡುಪಿ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಜಿಲ್ಲಾ ಕಾಂಗ್ರೆಸ್ ಸಮಿತಿ, ಮಹಿಳಾ ಕಾಂಗ್ರೆಸ್ ಸಮಿತಿ ಹಾಗೂ ಮುಂಚೂಣಿ ಘಟಕಗಳ ಅಧ್ಯಕ್ಷರುಗಳ ಸಭೆಯಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ಮಾತನಾಡಿದರು.
ಸಭೆಯಲ್ಲಿ ಮಾಜಿ ಸಚಿವ ವಿನಯ ಕುಮಾರ್ ಸೊರಕೆ, ಮಾಜಿ ಶಾಸಕರಾದ ಗೋಪಾಲ್ ಪೂಜಾರಿ, ಮುಖಂಡರಾದ ಉದಯ್ ಕುಮಾರ್ ಶೆಟ್ಟಿ, ಮಿಥುನ್ ರೈ, ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ಸೇರಿದಂತೆ ಹಲವರು ಉಪಸ್ಥಿತರಿದ್ದರು.