Uncategorized

ಸರಕಾರದ ಜೊತೆ ಎಲ್ಲ ಸಮಾಜದವರೂ ಇದ್ದಾರೆ – ಲಕ್ಷ್ಮೀ ಹೆಬ್ಬಾಳಕರ್

Share

ಕಾಂಗ್ರೆಸ್ ಪಕ್ಷಕ್ಕೆ ಎಲ್ಲಾ ಸಮುದಾಯದ ಬೆಂಬಲ ಸಿಕ್ಕಿದೆ. ಕೇವಲ ಒಂದು ಸಮುದಾಯದ ಬೆಂಬಲದಿಂದ ಅಧಿಕಾರಕ್ಕೇರಿಲ್ಲ. ಎಲ್ಲಾ ಸಮಾಜದವರೂ ಸರಕಾರದೊಂದಿಗಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದರು.

ಸರ್ಕಾರದಲ್ಲಿ ಲಿಂಗಾಯತ ಅಧಿಕಾರಿಗಳ ಸ್ಥಿತಿ ನಾಯಿಪಾಡು ಎಂದು ವೀರಶೈವ ಮುಖಂಡ ಶಾಮನೂರು ಶಿವಶಂಕರಪ್ಪ ಹೇಳಿಕೆ ಬಗ್ಗೆ ಮಾಧ್ಯಮಗಳ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ಶಾಮನೂರು ಶಿವಶಂಕರಪ್ಪನವರ ಹೇಳಿಕೆ ನನ್ನ ಗಮನಕ್ಕೂ ಬಂದಿದೆ. ಈ ಬಗ್ಗೆ ಚರ್ಚಿಸಲಾಗುವುದು ಎಂದು ಸಚಿವರು ಹೇಳಿದರು.

ಹಿಂದೆಲ್ಲ ಲಿಂಗಾಯತ ಸಮಾಜ ಕಾಂಗ್ರೆಸ್ ಜೊತೆಗೆ ಇಲ್ಲ ಎಂಬ ಕೊರಗಿತ್ತು. ಆ ಕೊರಗು ಈಗ ಇಲ್ಲ ಎಂದು ತಿಳಿಸಿದರು.
ಶಾಮನೂರು ಶಿವಶಂಕರಪ್ಪ ಅವರ ಹೇಳಿಕೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಹಿರಿಯರಾದ ಶಾಮನೂರು ಶಿವಶಂಕರಪ್ಪ ಅವರ ಜೊತೆ ಚರ್ಚೆ ಮಾಡುತ್ತೇನೆ ಎಂದು‌ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದರು.

Tags:

The entire society is with the government - Lakshmi Hebbalkar