ರಮೇಶ ಕತ್ತಿ ಕಾಂಗ್ರೆಸ್ ಗೆ ಸೇರುತ್ತಿರುವ ವಿಚಾರ ನನ್ನ ಗಮನಕ್ಕೆ ಬಂದಿಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು.
ಮಂಗಳವಾರ ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ಪಕ್ಷದ ಸಿದ್ಧಾಂತವನ್ನು ಒಪ್ಪಿಕೊಂಡು ಯಾರೇ ಬಂದರೂ ಸ್ವಾಗತ. ಆದರೆ ರಮೇಶ ಕತ್ತಿ ಕಾಂಗ್ರೆಸ್ ಸೇರುತ್ತಿರುವ ವಿಚಾರ ನನ್ನ ಗಮನಕ್ಕೆ ಇಲ್ಲ ಎಂದರು.
ಸರಕಾರ ಜನವರಿ ಹಾಗೂ ಸಂಕ್ರಾಂತಿ ವರೆಗೆ ಪಥನವಾಗುತ್ತದೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಅವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, ಅಲ್ಲಿಯವರೆಗೂ ಸರಕಾರ ಇರುತ್ತದೆ ನೋಡೋಣ ಎಂದರು.
ಕುರುಬ ಸಮಾಜವನ್ನು ಎಸ್ಟಿ ಪಂಗಡಕ್ಕೆ ಸೇರಿಸುವ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಅದು ಕೇಂದ್ರ ಸರಕಾರಕ್ಕೆ ಬಿಟ್ಟ ವಿಚಾರ. ರಾಜ್ಯ ಸರಕಾರದ್ದು ಕೇವಲ ಕೇಂದ್ರಕ್ಕೆ ಶಿಪಾರಸ್ಸು ಮಾಡುವುದು ಅಷ್ಟೆ ಕೆಲಸ ಎಂದರು
ಲೋಕಸಭಾ ಚುನಾವಣೆಯಲ್ಲಿ ಚಿಕ್ಕೋಡಿ ಅಥವಾ ಬೆಳಗಾವಿ ಕ್ಷೇತ್ರದಿಂದ ನಿಮ್ಮ ಪುತ್ರ ಅಥವಾ ಪುತ್ರಿ ಸ್ಪರ್ಧೆ ನಡೆಸುತ್ತಾರೆ ಎನ್ನುವ ಪ್ರಶ್ನೆಗೆ ಉತ್ತರಿಸಿದ ಅವರು, ಅದು ಇನ್ನೂ ನಿಣರ್ಯವಾಗಿಲ್ಲ ಎಂದರು.