ಚಿಕ್ಕ ಚಿಕ್ಕ ಮಕ್ಕಳಿಗೆ ಚಾಕಲೇಟ್ ಆಮಿಷ ತೋರಿಸಿ ಕಾಮ ತೃಷೆಗಾಗಿ ಬಳಸಿಕೊಳ್ಳುತ್ತಿದ್ದ ವಿಕೃತ ಕಾಮಿಯನ್ನು ಸ್ಥಳಿಯರೆ ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ಹಳೇ ಹುಬ್ಬಳ್ಳಿಯಲ್ಲಿ ನಡೆದಿದೆ.
ಹುಬ್ಬಳ್ಳಿಯ ಪ್ರತಿಷ್ಠಿತ ಹೊಟೇಲ್ ಕುಕ್ ಆಗಿ ಕಾರ್ಯನಿರ್ವಹಿಸುತ್ತಿದ್ದ ಸ್ಥಳೀಯರು ಹಿಡಿದು ಪೊಲೀಸರಿಗೆ ಒಪ್ಪಿಸಿರುವ ಘಟನೆ ಹಳೇ ಹುಬ್ಬಳ್ಳಿಯಲ್ಲಿ ನಡೆದಿದೆ.
ಹುಬ್ಬಳ್ಳಿಯ ಹೊಸುರ ಬಳಿ ಇರುವ ಪ್ರತಿಷ್ಠಿತ ಹೊಟೆಲ್ ನಲ್ಲಿ ಕೆಲಸ ಮಾಡುತ್ತಿದ್ದ ಒರಿಸ್ಸಾ ಮೂಲದ ಕುಕ್ ಅಪ್ರಾಪ್ತ ಮಕ್ಕಳಿಗೆ ಹಣದಾಸೆ ತೋರಿಸಿ ಕಾಮ ತೃಷೆ ತೀರಿಸಿಕೊಳ್ಳುತ್ತಿದ್ದ. ಅಷ್ಟೇ ಅಲ್ಲದೆ ಮಕ್ಕಳನ್ನು ಬೆತ್ತಲೆ ಮಾಡಿ ತಾನೇ ವಿಡಿಯೋ ಮಾಡಿ ಹಣಕ್ಕೆ ಮಾರಾಟ ಮಾಡ್ತಿದ್ದ ಎಂಬ ಆರೋಪ ಕೇಳಿ ಬಂದಿದೆ.
ಇಲ್ಲಿನ ಸಿದ್ಧಲಿಂಗೇಶ್ವರ ಕಾಲೋನಿಯಲ್ಲಿ ವಾಸ ಮಾಡ್ತಿದ್ದ ಈ ಕುಕ್, ಅಪ್ತಾಪ್ತ ಮಕ್ಕಳ ಟಾರ್ಗೆಟ್ ಮಾಡಿ ಚಾಕಲೇಟ್, ಹಣದ ಆಸೆ ತೋರಿಸಿ ಮಕ್ಕಳೊಂದಿಗೆ ಕಾಮದಾಟ ಆಡಿ ವಿಡಿಯೋ ಮಾಡ್ತಿದ್ದ ಸದ್ಯ ಕಾಮುಕನಿಗೆ ಸ್ಥಳೀಯರೇ ಹಿಗ್ಗಾಮುಗ್ಗಾ ಥಳಿಸಿ ಹಳೇ ಹುಬ್ಬಳ್ಳಿ ಪೊಲೀಸರಿಗೆ ಒಪ್ಪಿಸಿದ್ದಾರೆ.
ಈ ಕುರಿತಂತೆ ಹು-ಧಾ ಪೊಲೀಸ್ ಕಮಿಷನರ್ ರೇಣುಕಾ ಸುಕುಮಾರ್ ಮಾಹಿತಿ ನೀಡಿದ್ದು, ಈಗಾಗಲೇ ಆರೋಪಿಯನ್ನು ಹಳೇ ಹುಬ್ಬಳ್ಳಿ ಠಾಣೆ ಪೊಲೀಸರು ಬಂಧಿಸಿದ್ದು, ಆತನ ವಿರುದ್ದ ಪೋಕ್ಸೊ ಪ್ರಕರಣ ದಾಖಲಿಸಿ ವಿಚಾರಣೆ ನಡೆಸಲಾಗುತ್ತಿದೆ ಎಂದು ಮಾಹಿತಿ ನೀಡಿದರು.