Uncategorized

ಸಪ್ತಸಾಗರ’ ಮೆಚ್ಚಿ ಮನಸಾರೆ ಹೊಗಳಿದ ನಟ ಪ್ರಕಾಶ್ ರಾಜ್

Share

ಭಾರತೀಯ ಸಿನಿಮಾ ರಂಗದ ಹೆಸರಾಂತ ನಟ ಪ್ರಕಾಶ್ ರಾಜ್ (Prakash Raj), ತಾವು ಮೆಚ್ಚಿದ ಸಿನಿಮಾಗಳ ಬಗ್ಗೆ ಆಗಾಗ್ಗೆ ಬರೆಯುತ್ತಲೇ ಇರುತ್ತಾರೆ. ಈ ಬಾರಿ ರಕ್ಷಿತ್ ಶೆಟ್ಟಿ ನಟನೆಯ ‘ಸಪ್ತಸಾಗರದಾಚೆ ಎಲ್ಲೋ’ ಸಿನಿಮಾ ನೋಡಿ ಸಂಭ್ರಮಿಸಿದ್ದಾರೆ. ತಮ್ಮ ಸೋಷಿಯಲ್ ಮೀಡಿಯಾ ಖಾತೆಯಲ್ಲಿ ಸಿನಿಮಾ ಬಗ್ಗೆ, ‘ಸಪ್ತ ಸಾಗರದಾಚೆ ಎಲ್ಲೋ.. ಆಹಾ.. ಒಂದು ಸುಂದರ ದೃಶ್ಯಕಾವ್ಯ ಅನುಭವ. ಡೋಂಟ್ ಮಿಸ್’ ಎಂದು ಬರೆದುಕೊಂಡಿದ್ದಾರೆ.

ರಕ್ಷಿತ್ ಶೆಟ್ಟಿ, ನಿರ್ದೇಶಕ ಹೇಮಂತ್ ರಾವ್, ಚೈತ್ರಾ ಆಚಾರ್ಯ, ರುಕ್ಮಿಣಿ, ಚರಣ್ ರಾಜ್ ಹೀಗೆ ಸಿನಿಮಾದ ಕಲಾವಿದರು ಮತ್ತು ತಂತ್ರಜ್ಞರಿಗೆ ತಮ್ಮ ಬರಹವನ್ನು ಟ್ಯಾಗ್ ಮಾಡಿದ್ದಾರೆ. ಇಡೀ ತಂಡಕ್ಕೆ ಇಂಥದ್ದೊಂದು ಸಿನಿಮಾ ಕೊಟ್ಟಿದ್ದಕ್ಕೆ ಧನ್ಯವಾದಗಳನ್ನೂ ಪ್ರಕಾಶ್ ರಾಜ್ ಅರ್ಪಿಸಿದ್ದಾರೆ.

ಈ ವೇಳೆಯಲ್ಲಿ ಭಾರೀ ಬಜೆಟ್ ಚಿತ್ರಗಳು ಬಿಡುಗಡೆ ಆಗುತ್ತಿವೆ. ಸ್ಟಾರ್ ನಟರ ಚಿತ್ರಗಳು ತೆರೆ ಕಾಣಲು ಸಿದ್ಧತೆ ಮಾಡಿಕೊಳ್ಳುತ್ತಿವೆ. ಅಲ್ಲದೇ, ಪರಭಾಷೆಯ ಚಿತ್ರಗಳ ಹಾವಳಿಯೂ ಹೆಚ್ಚಾಗಿದೆ. ಒಂದೊಳ್ಳೆ ಸಿನಿಮಾ ಕಳೆದು ಹೋಗಬಾರದು ಎನ್ನುವ ಕಾರಣಕ್ಕಾಗಿ ಒಂದು ವಾರ ಚಿತ್ರ ಬಿಡುಗಡೆಯ ದಿನಾಂಕವನ್ನು ಮುಂದೂಡಿದ್ದಾರೆ. ಅಕ್ಟೋಬರ್ 27ಕ್ಕೆ ಗ್ರ್ಯಾಂಡ್ ಆಗಿ ಸಪ್ತ ಸಾಗರದಾಚೆ ಎಲ್ಲೋ ಬಿ ಪಾರ್ಟ್ ಬಿಡುಗಡೆ ಆಗಲಿದೆ.

ರಕ್ಷಿತ್ ಶೆಟ್ಟಿ(Rakshit Shetty), ರುಕ್ಮಿಣಿ ವಸಂತ್ (Rukmini Vasanth) ನಟನೆಯ ‘ಸಪ್ತಸಾಗರದಾಚೆ ಎಲ್ಲೋ’ (Sapta Sagaradacche Yello) ತೆಲುಗು ನೆಲದಲ್ಲೂ ಸದ್ದು ಮಾಡಿದೆ. ಸ್ಯಾಂಡಲ್‌ವುಡ್‌ನಲ್ಲಿ ಕಮಾಲ್ ಮಾಡಿದ ಈ ಸಿನಿಮಾ, ಈಗ ತೆಲುಗಿನಲ್ಲೂ (Tollywood) ಅತ್ಯುತ್ತಮ ಪ್ರತಿಕ್ರಿಯೆಯನ್ನು ಕಂಡಿದೆ. ಹೇಮಂತ್ ನಿರ್ದೇಶಿಸಿದ ದೃಶ್ಯ ಕಾವ್ಯಕ್ಕೆ ಕನ್ನಡಿಗರು ಫಿದಾ ಆಗಿದ್ದಾರೆ. ಮನು- ಪ್ರಿಯಾ ಜೋಡಿಯ ಪ್ರೇಮ್ ಕಹಾನಿ ನೋಡಿ ಪ್ರೇಕ್ಷಕರು ಚಪ್ಪಾಳೆ ತಟ್ಟಿದ್ದಾರೆ.

Tags:

Actor Prakash Raj praised Saptasagara