ಹೌದು ಖಾನಾಪೂರ ತಾಲೂಕಿನಲ್ಲಿ ಮಳೆ ಕೊರತೆಯಿಂದ ಬರ ಪರಿಸ್ಥಿತಿ ತಲೆದೋರಿದೆ, ಉಳಿದ ಬೆಳೆಗಳಿಗೆ ನೀರು ಕೊಟ್ಟು ರೈತರು ಬದುಕುವ ಪ್ರಯತ್ನ ಮಾಡುತ್ತಿದ್ದಾರೆ ಆದರೆ ಕಳೆದ ಒಂದು ತಿಂಗಳಿಂದ ಹೆಸ್ಕಾಂ ಕೃಷಿಗೆ ವಿದ್ಯುತ್ ಪೂರೈಕೆ ಮಾಡದ ಕಾರಣ ರೈತರು ಅಪಾರ ನಷ್ಟ ಅನುಭವಿಸುತ್ತಿದ್ದಾರೆ.ಕಾಲಕಾಲಕ್ಕೆ ಹೆಸ್ಕಾಂ ಅಧಿಕಾರಿಗಳಿಗೆ ತಿಳಿಸಿದರೂ ಮೊದಲಿನಂತೆ ತ್ರಿಫೇಸ್ ವಿದ್ಯುತ್ ಪೂರೈಕೆಯಾಗದ ಕಾರಣ ಪೂರ್ವ ಭಾಗದ ರೈತರು ತಹಶೀಲ್ದಾರ್ ಕಚೇರಿಗೆ ಮೆರವಣಿಗೆ ಮೂಲಕ ಪ್ರತಿಭಟನೆ ನಡೆಸಿದರು.
ಈ ಸಂದರ್ಭದಲ್ಲಿ ತಹಶೀಲ್ದಾರ್ ಪ್ರಕಾಶ್ ಗಾಯಕವಾಡ,ಶಾಸಕ ವಿಠ್ಠಲ ಹಲಗೇಕರ ಅವರು ಹೆಸ್ಕಾಂ ಇಲಾಖೆಯ ಅಧಿಕಾರಿಗೆ ಚರ್ಚಿಸಿ ಇದರ ಬಗ್ಗೆ ಸೂಕ್ತ ನಿರ್ಧಾರ ಕೈಗೊಳ್ಳುವುದು ಎಂದು ತಿಳಿಸಿದರು.ಈ ಸಂದರ್ಭದಲ್ಲಿ ಹೆಸ್ಕಾಂ ಇಲಾಖೆಯ ಅಧಿಕಾರಿ ಕಲ್ಪನಾ ತಿರವೀಕ ಅವರಿಗೆ ರೈತರು ಪ್ರಶ್ನೆಗಳ ಸುರಿಮಳೆ ಸುರಿಸಿದರು.ಯೋಗ್ಯವ್ಯವಸ್ಥೆ ಕಲ್ಪಿಸುವ ಭರವಸೆ ನೀಡಿದ ಮೇಲೆ ಪ್ರತಿಭಟನೆ ಹಿಂಪಡೆಯಲಾಯಿತು.ಈ ಸಂದರ್ಭದಲ್ಲಿ ಪೂರ್ವ ಭಾಗದ ಬಹುಸಂಖ್ಯೆಯಲ್ಲಿ ರೈತರು ಉಪಸ್ಥಿತರಿದ್ದರು.
ಅಲ್ತಾಫ್ ಬಸರೀಕಟ್ಟಿ
ಇನ್ ನ್ಯೂಸ್ ಖಾನಾಪೂರ