ಹುಬ್ಬಳ್ಳಿ-ಧಾರವಾಡ ಮಹಾನಗರದಲ್ಲಿ ಕರ್ನಾಟಕ ನಗರ ನೀರು ಸರಬರಾಜು ಆಧುನೀಕರಣ ಯೋಜನೆಯಡಿಯಲ್ಲಿ ಎಲ್ಲ ವಾರ್ಡುಗಳಿಗೆ ಒತ್ತಡ ಸಹಿತ 24/7 ನಿರಂತರ ನೀರು ಸರಬರಾಜು ಯೋಜನೆಯನ್ನು ಅನುಷ್ಠಾನ ಮಾಡಲಾಗುತ್ತಿದೆ. ಈ ಯೋಜನೆಯನ್ನು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಮಾಲೀಕತ್ವದಲ್ಲಿ ಅನುಷ್ಠಾನ ಮಾಡಲು ಮೆ: ಎಲ್ ಆ್ಯಂಡ್ ಟಿ ನಿರ್ವಾಹಕರಿಗೆ ಗುತ್ತಿಗೆ ನೀಡಲಾಗಿದೆ.
ಹುಬ್ಬಳ್ಳಿ-ಧಾರವಾಡ ಮಹಾನಗರದಲ್ಲಿ ಅನಧೀಕೃತ ನಳ ಸಂಪರ್ಕವನ್ನು ಹೊಂದಿದವರು ಕೂಡಲೇ ಸಂಬಂಧಿಸಿದ ಪಾಲಿಕೆಯ ವಲಯ ಕಛೇರಿಗಳಿಗೆ ಭೇಟಿ ನೀಡಿ, ಸೂಕ್ತ ದಾಖಲೆಗಳೊಂದಿಗೆ ಕರ್ನಾಟಕ ಸರ್ಕಾರ ನಿಗದಿಪಡಿಸಿದ ಶುಲ್ಕಗಳನ್ನು ಭರಿಸಿ, ಆಕ್ಟೋಬರ್ 31, 2023 ರೊಳಗಾಗಿ ತಮ್ಮ ನಳ ಸಂಪರ್ಕವನ್ನು ಅಧೀಕೃತಗೊಳಿಸಿಕೊಳ್ಳಲು ತಿಳಿಸಿದೆ. ಇಲ್ಲದಿದ್ದಲ್ಲಿ ಅನಧೀಕೃತ ನಳಗಳನ್ನು ಕಡಿತಗೊಳಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಮಹಾನಗರ ಪಾಲಿಕೆಯ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.