ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದ ಪರಿಣಾಮ ರಿಕ್ಷಾ ಹಾಗೂ 4 ದ್ವಿಚಕ್ರ ವಾಹನಗಳು ಜಖಂಗೊಂಡಿವೆ. ಅದೃಷ್ಟವಶಾತ್ ಈ ಘಟನೆಯಲ್ಲಿ ಯಾವುದೇ ಪ್ರಾಣಹಾನಿಯಾಗಿಲ್ಲ.
ಬೆಳಗಾವಿಯ ಗಣಪತ್ ಗಲ್ಲಿಯಲ್ಲಿ ಇಂದು ಶನಿವಾರ ಬೆಳಗ್ಗೆ ವೇಗವಾಗಿ ಬಂದ ಕಾರೊಂದು ರಸ್ತೆಯಲ್ಲಿ ನಿಂತಿದ್ದ ರಿಕ್ಷಾ ಹಾಗೂ 4 ದ್ವಿಚಕ್ರ ವಾಹನಗಳಿಗೆ ಡಿಕ್ಕಿ ಹೊಡೆದಿದೆ. ಇದರಿಂದ ವಾಹನಕ್ಕೆ ಹಾನಿಯಾಗಿದೆ. ಚಾಲಕನ ನಿಯಂತ್ರಣ ತಪ್ಪಿ ಅಪಘಾತ ಸಂಭವಿಸಿದೆ. ಅದೃಷ್ಟವಶಾತ್ ಬೆಳಗಿನ ಜಾವವಾಗಿದ್ದರಿಂದ ರಿಕ್ಷಾದಲ್ಲಿ ಯಾರೂ ಇಲ್ಲದ ಕಾರಣ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಘಟನೆ ಕುರಿತು ಮಾಹಿತಿ ಪಡೆದ ಖಡೇಬಜಾರ್ ಹಾಗೂ ಸಂಚಾರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.