ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಇಂದಿನಿಂದ ದಸರಾ ಆರಂಭವಾಗಲಿದೆ. ಸಂಗೀತ ನಿರ್ದೇಶಕ ಹಂಸಲೇಖ ಅವರು ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ಚಾಲನೆ ನೀಡಿದರು , ಮುಖ್ಯಮಂತ್ರಿ ಸಿದ್ದರಾಮಯ್ಯ, ಜಿಲ್ಲಾ ಉಸ್ತುವಾರಿ ಸಚಿವ ಹೆಚ್ಸಿ ಮಹದೇವಪ್ಪ ಸೇರಿದಂತೆ ಅನೇಕರು ಭಾಗಿಯಾಗಿದ್ದರು
ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತನಾಡುತ್ತಾ ನಮ್ಮ ಸರ್ಕಾರ ಐದು ಗ್ಯಾರಂಟಿಗಳ ಪೈಕಿ ನಾಲ್ಕು ಗ್ಯಾರಂಟಿಗಳನ್ನು ಜಾರಿ ಮಾಡಲಾಗಿದ್ದು, ಐದನೇ ಗ್ಯಾರಂಟಿಯನ್ನು ಕೆಲವೇ ತಿಂಗಳಲ್ಲಿ ಜಾರಿಗೊಳಿಸಲಾಗುವುದು ಎಂದು ಸಿದ್ದರಾಮಯ್ಯ ಹೇಳಿದರು. ದಸರಾದ ಮಹತ್ವ ಕಡಿಮೆಯಾಗಬಾರದು ಎಂದು ಬರಗಾಲದ ನಡುವೆ ಸಾಂಪ್ರದಾಯಿಕವಾಗಿ ಆಚರಣೆ ಮಾಡುತ್ತಿದ್ದೇವೆ. 42 ಲಕ್ಷ ಹೆಕ್ಟೇರ್ನಲ್ಲಿ ಬೆಳೆ ಹಾನಿಯಾಗಿದೆ. 30 ಸಾವಿರ ಕೋಟಿ ರೂಪಾಯಿ ರೈತರಿಗೆ ನಷ್ಟವಾಗಿದೆ. ಕೇಂದ್ರದ ತಂಡ ರಾಜ್ಯಕ್ಕೆ ಆಗಮಿಸಿ ವೀಕ್ಷಣೆ ಮಾಡಿದ್ದು, 4864 ಕೋಟಿ ರೂ. ಪರಿಹಾರ ನೀಡುವ ಭರವಸೆ ಇಟ್ಟುಕೊಂಡಿದ್ದೇವೆ.ಎಂದರು
ಬಾಲ್ಯದಲ್ಲಿದ್ದಾಗ ಮೈಸೂರು ದಸರಾ ವೀಕ್ಷಣೆ ಮಾಡುತ್ತಿದ್ದ ಬಗ್ಗೆ ನೆನಪಿಸಿಕೊಂಡರು. ನಮ್ಮ ನಾಡು ಶ್ರೀಮಂತವಾಗಿದೆ. ಕರ್ನಾಟಕದ ಜನ ಸುಸಂಸ್ಕೃತ ಜನ. ನಮ್ಮಲ್ಲಿ ಪ್ರೀತಿ ವಿಶ್ವಾಸ ಮುನುಷ್ಯತ್ವ ಗುಣಗಳನ್ನು ಮೈಗೂಡಿಸಿಕೊಂಡ ರಾಜ್ಯ ಕರ್ನಾಟಕ. ಪರಪಸ್ಪರ ಪ್ರೀತಿ, ಗೌರವದಿಂದ ಬದುಕುದು ಬಹಳ ಮುಖ್ಯ. ಪ್ರತಿಯೊಬ್ಬ ಕನ್ನಡಿಗನೂ ಈ ರೀತಿಯಾಗಿ ನಡೆದುಕೊಳ್ಳುವುದು ಅವಶ್ಯಕ. ಪ್ರತೀ ಪ್ರಜಾ ಸರ್ಕಾರದ ಕರ್ತವ್ಯ ಸಂವಿಧಾನದ ಪ್ರಸ್ತಾವನೆಯನ್ನು ಈಡೇರಿಸುವುದಾಗಿರಬೇಕು ಎಂದರು
ಈ ಸಂದರ್ಭದಲ್ಲಿ ಮಾತನಾಡಿದ ಸಂಗೀತ ನಿರ್ದೇಶಕ ಹಂಸಲೇಖ ದಸರಾ ಎನ್ನುವುದು ಜೀವಂತ ಮಹಾಕಾವ್ಯ ದಸರಾ ಒಂದು ರೀತಿ ಕಥಾ ಕಣಜ, ಮಹಾಕಾವ್ಯವಾಗಿ ಬೆಳಗಬೇಕು. ಕನ್ನಡ ನಮ್ಮ ಶೃತಿ ಆಗಬೇಕು, ಅಭಿವೃದ್ಧಿ ನಮ್ಮ ಕೃತಿ ಆಗಬೇಕು. ಕನ್ನಡದ ಭಾಷೆಗೆ ಮಿತಿ ಇದೆ, ಆದರೆ ಭಾವಕ್ಕೆ ಮಿತಿ ಎಲ್ಲಿದೆ? ನಮಗೆ ದೆಹಲಿ ಬೇಕು ದೆಹಲಿಗೂ ನಾವು ಬೇಕು. ದೆಹಲಿಗೆ ಕನ್ನಡವೇ ಬೇಕಾಗುತ್ತಿಲ್ಲ, ಅದಕ್ಕೆ ತಲೆಕೆಡಿಸಿಕೊಳ್ಳೋದು ಬೇಡ. ನಾವು ಕನ್ನಡವನ್ನು ಜಗತ್ತಿನಲ್ಲಿ ಮೆರೆಸಬೇಕಿದೆ. ಕರ್ನಾಟಕದ ಶಾಂತಿ, ಸಮೃದ್ಧಿ ಕನ್ನಡಿಗರ ಮಂತ್ರ ಆಗಬೇಕು. ಕಾವೇರಿಗೆ ಒಂದು ಮಿತಿಯಿದೆ, ಕನ್ನಡ ಭಾಷೆಗೆ ಒಂದು ಮಿತಿಯಿದೆ. ಅದರ ಭಾವಕ್ಕೆ ಎಲ್ಲಿ ಮಿತಿಯಿದೆ ಎಂದರು.
ಪೂಜ್ಯ ಕನ್ನಡಕ್ಕೆ, ಪೂಜ್ಯ ಕನ್ನಡಿಗರಿಗೆ ನನ್ನ ನಮನ. ಈ ಅವಕಾಶಕ್ಕಾಗಿ ನಾನು ಸಾವಿರ ಮೆಟ್ಟಿಲು ಹತ್ತಿ ಬಂದಿದ್ದೇನೆ ಎಂದರು. ಯಾರು ಯಾರನ್ನು ನೆನೆಯಾನಾ ? ಯಾರು ಯಾರನ್ನು ನೆನೆಯಲಿ, ಕನ್ನಡ ದೀಪ, ಸಮೃದ್ದಿ ಅಭಿವೃದ್ಧಿ ಶಾಂತಿ ಸಮೃದ್ದಿಯ ನನ್ನ ಮಾತಿನ ಪರಿವಿಧಿ. ಪೂಜ್ಯ ಕನ್ನಡಿಗರಿಗೆ ಪೂಜ್ಯ ಕನ್ನಡಕ್ಕೆ ಈ ದೇವಾಲಯ ಪ್ರೇಮಾಲಯಕ್ಕೆ ಸಾವಿರದ ಶರಣುಗಳು. ಐದಶ ಕರ್ನಾಕದ ಏಕೀಕರಣಕ್ಕೆ ಈಗ ಐದಶ ಅಂದರೆ ಐವತ್ತು. ಏಕೀಕರಣಕ್ಕೆ ಐವತ್ತು ತುಂಬಿದೆ ಕರ್ನಾಟಕ ಐದಶ ಅಂತಾ ಕರೆಯೋಣ. ಕರ್ನಾಟಕ ಐದಶ ಕರ್ನಾಟಕದ ಐದಶದ ಜೊತೆಗೆ ನನ್ನ ಕಲಾ ಕಾಯಕಲ್ಪಕ್ಕೂ 50 ವರ್ಷ. ಈ ನನ್ನ ಐದಶದಲ್ಲಿ ಸಿಕ್ಕಿದ ಈ ಅವಕಾಶ ಇದು ಬಹಳ ಬೆಲೆ ಬಾಳುವಂತಹದ್ದು. ಈ ಅವಕಾಶಕ್ಕಾಗಿ ನಿರಾಯಾಸವಾಗಿ ಬಂದಿಲ್ಲ. ಇದಕ್ಕಾಗಿ ಸಾವಿರ ಮೆಟ್ಟಿಲು ಹಾಗೂ ಸಾವಿರಾರು ಮೆಟ್ಟಿಲು ಹತ್ತಿ ಬಂದಿದ್ದೇನೆ. ಈ ಅವಕಾಶಕ್ಕೆ ಯಾರು ಕಾರಣ ಯಾರನ್ನು ಮೊದಲು ನೆನೆಯಲಿ. ಅಪ್ಪ ಗೋವಿಂದರಾಜ ಮಾನೆ ಅಮ್ಮ ರಾಜಮ್ಮ ಗುರು ನೀಲಕಂಠ ಅಥವಾ ನಾದ ನಾಟಕರಂಗ ಸರ್ಕಾರ ಅಥವಾ ಸಂವಿಧಾನವನ್ನೇ, ಸಂವಿಧಾನದ ದನಿ ಸಿದ್ದರಾಮಯ್ಯ ಅವರನ್ನೇ ? ಡಿಸಿಎಂ ಪ್ರಬಲ ಶಕ್ತಿ ಸಂಘಟಕ ಡಿ ಕೆ ಶಿವಕುಮಾರ್, ನನ್ನ ಹೆಸರು ಸೂಚಿಸಿದ ಡಾ ಎಚ್ ಸಿ ಮಹದೇವಪ್ಪ ಅವರನ್ನೇ, ನನ್ನ ಹೆಂಡತಿ ಮಕ್ಕಳು ಅಭಿಮಾನಿಗಳನ್ನೇ ? ಅಥವಾ ಭೂಮಿ ತಾಯಿಯನ್ನೇ ಯಾರು ಯಾರು ಅಂತಾ ಹೇಳಲಿ ಎಂದರು
ಈ ಸಂದರ್ಭದಲ್ಲಿ ಸಚಿವಹೆಚ್ ಸಿ .ಮಹದೇವಪ್ಪ ಮಾತನಾಡುತ್ತಾ ವಿಜಯನಗರ ಸಾಮಂತರು ಮಾಡುತ್ತಿದ್ದದ್ದು ವಿಜಯೋತ್ಸವ. ವಿಜಯನಗರ ಸಾಮ್ರಾಜ್ಯ ಶಾಂತಿ ಸಂಮೃದ್ಧಿಯಿಂದ ಕೂಡಿದ ನಾಡಾಗಿತ್ತು. ಹಂಪಿ ವಿರುಪಾಕ್ಷನ ದೇವಾಲಯದ ರಸ್ತೆಯಲ್ಲಿ ಮುತ್ತು ರತ್ನಗಳನ್ನ ಅಳೆಯುತ್ತಿದ್ದರು. ವಿಜಯನಗರ ಸಾಮ್ರಾಜ್ಯ ಪತನದ ಬಳಿಕ ಮೈಸೂರಿನ ಅರಸರು ದಸರಾ ಹಬ್ಬವನ್ನ ಆಚರಿಸಲಾಯ್ತು. ಮೈಸೂರಿಗೂ ಮೊದಲು ಶ್ರೀರಂಗಪಟ್ಟಣದಲ್ಲಿ ದಸರಾ ಹಬ್ಬವನ್ನ ಆಚರಿಸಲಾಗುತ್ತಿತ್ತು. ಈ ಹಿಂದೆ ಮೈಸೂರಿನ ಅರಸರು ಆನೆಯ ಅಂಬಾರಿ ಮೇಲೆ ಕುಳಿತು ಸಾಗುತ್ತಿದ್ದರು. ನನ್ನ ತಂದೆಯ ಹೆಗಲ ಮೇಲೆ ಕುಳಿತು ಜಂಬೂ ಸವಾರಿಯನ್ನ ವಿಕ್ಷಿಸಿದ್ದೆ ಎಂದು ಹೇಳುವ ಮೂಲಕ ವೇದಿಕೆ ಮೇಲೆ ಬಾಲ್ಯದಲ್ಲಿದ್ದಾಗ ನಡೆಯುತ್ತಿದ್ದ ದಸರಾ ಹಬ್ಬ ಆಚರಣೆಯನ್ನ ಮೆಲಕು ಹಾಕಿದರು
ಈ ಸಂದರ್ಭದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್, ಸಚಿವರಾದ ಹೆಚ್ ಸಿ .ಮಹದೇವಪ್ಪ, ಕೆ.ಜೆ.ಜಾರ್ಜ್, ವೆಂಕಟೇಶ್, ಮುನಿಯಪ್ಪ, ಶಿವರಾಜ್ ತಂಗಡಗಿ, ಸಂಸದ ಪ್ರತಾಪ್ ಸಿಂಹ, ಶಾಸಕರಾದ ಜಿಟಿಡಿ, ರವಿಶಂಕರ್, ಎ.ಆರ್.ಕೃಷ್ಣಮೂರ್ತಿ, ಶ್ರೀವತ್ಸ, ಹರೀಶ್ ಗೌಡ, ತನ್ವೀರ್ ಸೇಠ್, ಅನಿಲ್ ಚಿಕ್ಕಮಾದು, ಮೇಯರ್ ಶಿವಕುಮಾರ್ ಉಪಸ್ಥಿತರಿದ್ದರು.