Uncategorized

ಬೆಳಗಾವಿಯಲ್ಲಿ ಕನ್ನಡಪರ ಸಂಘಟನೆಗಳಿಂದ ಕಿತ್ತೂರು ವಿಜಯದಿನ

Share

ಬೆಳಗಾವಿಯಲ್ಲಿ ಇಂದು ವಿವಿಧ ಕನ್ನಡಪರ ಸಂಘಟನೆಗಳ ವತಿಯಿಂದ ಬೆಳಗಾವಿ ಜಿಲ್ಲಾ ಕನ್ನಡ ಸಂಘಟನೆ ಕ್ರಿಯಾ ಸಮಿತಿಯ ನೇತೃತ್ವದಲ್ಲಿ ಕಿತ್ತೂರು ರಾಣಿ ಚನ್ನಮ್ಮನ ವಿಜಯೋತ್ಸವ ಆಚರಿಸಲಾಯಿತು.

ಬ್ರಿಟಿಷರ ವಿರುದ್ಧ ದೇಶದಲ್ಲಿ ಮೊದಲು ಬಂಡಾಯದ ಬಾವುಟ ರಾಣಿ ಚನ್ನಮ್ಮ ಹಾರಿಸಿದವರು. ಅದರಲ್ಲಿ ಕ್ರಾಂತಿಕಾರಿ ಸಂಗೊಳ್ಳಿ ರಾಯಣ್ಣನ ಜೊತೆಗೆ ಬ್ರಿಟಿಷರ ವಿರುದ್ಧ ವಿಜಯ ಸಾಧಿಸಿದ್ದರು ಈ ಸಂದರ್ಭದಲ್ಲಿ, ಪ್ರತಿ ವರ್ಷ ಅಕ್ಟೋಬರ್ 23 ರಂದು ಚೆನ್ನಮ್ಮಾಜಿಯ ವಿಜಯೋತ್ಸವವನ್ನು ಆಚರಿಸಲಾಗುತ್ತದೆ. ಅದೇ ರೀತಿ ಇಂದು ಸೋಮವಾರ ಬೆಳಗಾವಿಯಲ್ಲಿ ಬೆಳಗಾವಿ ಜಿಲ್ಲಾ ಕನ್ನಡ ಸಂಘಟನೆ ಕ್ರಿಯಾ ಸಮಿತಿ ವತಿಯಿಂದ ಅದ್ದೂರಿಯಿಂದ ವಿಜಯೋತ್ಸವ ಆಚರಿಸಲಾಯಿತು
ಚನ್ನಮ್ಮ ವೃತ್ತದಲ್ಲಿರುವ ರಾಣಿ ಚನ್ನಮ್ಮ ಹಾಗೂ ನ್ಯಾಯಾಲಯದ ಆವರಣದಲ್ಲಿರುವ ವೀರ ಸಂಗೊಳ್ಳಿ ರಾಯಣ್ಣ ಅವರ ಪ್ರತಿಮೆಗಳಿಗೆ ಮಾಲಾರ್ಪಣೆ ಮಾಡುವ ಮೂಲಕ ಗೌರವ ಸಲ್ಲಿಸಲಾಯಿತು.ಪ್ಲೊ
ಬೆಳಗಾವಿ ಜಿಲ್ಲಾ ಕನ್ನಡ ಸಂಘಟನೆ ಕ್ರಿಯಾ ಸಮಿತಿ ವತಿಯಿಂದ ನಡೆದ ಕಾರ್ಯಕ್ರಮದಲ್ಲಿ ವಿವಿಧ ಕನ್ನಡಪರ ಸಂಘಟನೆಗಳ ಮುಖಂಡರು ಭಾಗವಹಿಸಿದ್ದರು.

Tags: