ಬಸ್ ಹಾಗೂ ಟ್ರೈನ್ ಸೌಲಭ್ಯದ ಮೂಲಕ ಪ್ರಯಾಣಿಕರಿಗೆ ಮಾತ್ರವಲ್ಲದೆ ವಾಣಿಜ್ಯ ಚಟುವಟಿಕೆಗಳಿಗೆ ಸಾರಿಗೆ ಸೇವೆ ಪೂರಕವಾಗಿದೆ. ಈ ನಿಟ್ಟಿನಲ್ಲಿ ವಾಣಿಜ್ಯನಗರಿಯ ಏರ್ಪೋರ್ಟ್ ಮೇಲ್ದರ್ಜೆಗೆ ಏರಿಸುವ ಮೂಲಕ ವಿನೂತನ ಕಾರ್ಯಕ್ಕೆ ಕೇಂದ್ರ ಸರ್ಕಾರ ಮುಂದಾಗಿದೆ. ಅಷ್ಟಕ್ಕೂ ಏನಿದು ಏರ್ಪೋರ್ಟ್ ಮೇಲ್ದರ್ಜೆಗೆ ಏರಿಸುವ ಸ್ಟೋರಿ ಅಂತೀರಾ ತೋರಿಸ್ತಿವಿ ನೋಡಿ..
ಈಗಿರುವ ಹುಬ್ಬಳ್ಳಿ ವಿಮಾನ ನಿಲ್ದಾಣದ ಸಂಚಾರ ದಟ್ಟಣೆ, ಅವಶ್ಯಕತೆ ಹಾಗೂ ಸಾಮರ್ಥ್ಯದ ಪರಿಮಿತಿಯನ್ನು ವಿಸ್ತರಿಸುವ ಹಾಗೂ ಹುಬ್ಬಳ್ಳಿ ನಿಲ್ದಾಣದ ಅಗತ್ಯಗಳನ್ನು 2026ರ ನಂತರದ ಸಂಚಾರ ದಟ್ಟಣೆಗೆ ಅನುಗುಣವಾಗಿ ಹೊಸ ನಿಲ್ದಾಣದ ನಿರ್ಮಾಣ ಕಾರ್ಯ ಡಿಸೆಂಬರ್ ಅಂತ್ಯದೊಳಗೆ ಆರಂಭಿಸಬೇಕು ಎಂದು ಕೇಂದ್ರ ಸಚಿವ ಪಲ್ಲಾದ ಜೋಶಿ ಅವರು ಭಾರತೀಯ ವಿಮಾನ ನಿಲ್ದಾಣಗಳ ಪ್ರಾಧಿಕಾರದ ಅಧಿಕಾರಿಗಳಿಗೆ ಸೂಚಿಸಿದರು. ಹೌದು.. ಹುಬ್ಬಳ್ಳಿ ವಿಮಾನ ನಿಲ್ದಾಣದ ಈಗಿನ ಸಾಮರ್ಥ್ಯ, ಗಾತ್ರ ಹಾಗೂ ಇತರ ಸೌಲಭ್ಯಗಳ ವಿಸ್ತರಣೆಗಾಗಿ ಸಚಿವ ಜೋಶಿ ಅವರ ಕೋರಿಕೆಯ ಮೇರೆಗೆ ಈಗಾಗಲೇ ಕೇಂದ್ರ ಸರ್ಕಾರ ಅಗತ್ಯ ಅನುದಾನ ಬಿಡುಗಡೆ ಮಾಡಿದ್ದು, ಈಗ ಒಟ್ಟು 340 ಕೋಟಿ ರೂ. ವೆಚ್ಚದಲ್ಲಿ ಟೆಂಡರ್ ಪ್ರಕ್ರಿಯೆ ಕೊನೆಗೊಳ್ಳಲಿದೆ. ಡಿಸೆಂಬರ್ ಅಂತ್ಯದ ಒಳಗೆ ಕಾಮಗಾರಿ ಆರಂಭವಾಗುವುದು.
ಇನ್ನೂ 15,950 ಚ.ಮೀ ವಿಸ್ತೀರ್ಣದ ನಿಲ್ದಾಣದಲ್ಲಿ 4 ಏರೋ ಬ್ರಿಜ್ ಸಹಿತ ಏಕಕಾಲಕ್ಕೆ 2,400 ಪ್ರಯಾಣಿಕರನ್ನು ನಿರ್ವಹಿಸುವ ಸಾಮರ್ಥ್ಯ, ಮತ್ತಿತರ ಸುಸಜ್ಜಿತ ನಿಲ್ದಾಣವಾಗಲಿದೆ ಹಾಗೂ ಸಮಸ್ತ ಉತ್ತರ ಕರ್ನಾಟಕದ ಹೆಮ್ಮೆಯ ನಿಲ್ದಾಣವಾಗಿ ಹೊರಹೊಮ್ಮಲಿದೆ. ಈ ಹೊಸ ನಿಲ್ದಾಣ ಪರಿಸರ ಸ್ನೇಹಿಯಾಗಿರಲಿದೆ ಎಂದು ಸಚಿವ ಪಲ್ಲಾದ ಜೋಶಿ ತಿಳಿಸಿದ್ದಾರೆ. ನೂತನ ಯೋಜನೆಯಂತೆ ಹುಬ್ಬಳ್ಳಿ ವಿಮಾನ ನಿಲ್ದಾಣ ಅಗಾಧ ಬೆಳವಣಿಗೆ ಕಾಣುತ್ತಿದೆ.
ಈ ಬಗ್ಗೆ ಸಭೆಯಲ್ಲಿ ಹಲವಾರು ವಿಷಯಗಳನ್ನು
ಚರ್ಚಿಸಲಾಯಿತು.
ಒಟ್ಟಿನಲ್ಲಿ ಮುಂದಿನ ದಿನಗಳಲ್ಲಿ ವಿಮಾನ ನಿಲ್ದಾಣ ಸಾಕಷ್ಟು ನವೀಕರಣ ಕಾಣಲಿದ್ದು, ಇದು ಪ್ರಯಾಣಿಕರಿಗೆ ಅದ್ಭುತ ಅನುಭವವನ್ನು ನೀಡಲಿದೆ. ಕೂಡಲೇ ಕಾಮಗಾರಿ ಆರಂಭಗೊಂಡು ಜನರಿಗೆ ಗುಣಮಟ್ಟದ ಸೇವೆ ದೊರೆಯಲಿ ಎಂಬುವುದು ನಮ್ಮ ಆಶಯ.