Uncategorized

ಕಾಂಗ್ರೆಸ ಸರ್ಕಾರದ ವಿರುದ್ಧ ಗುಡುಗಿದ ಬಿಜೆಪಿ ನಾಯಕರು

Share

ರೈತರ ಸಾಲ ಮನ್ನಾ ಮಾಡುವ ನಿರ್ಣಯವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ ಮಾಡದಿದ್ದರೆ ರಾಜ್ಯಾದ್ಯಂತ ಪ್ರವಾಸ ಕೈಗೊಂಡು ರೈತರ ಸಮಸ್ಯೆಯ ವಿರುದ್ಧ ದ್ವನಿ ಎತ್ತುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು.

ಬುಧವಾರ ಬೆಳಗಾವಿಯ ಮಾಲಿನಿ ಸಿಟಿ, ಬಿ ಎಸ ಯಡಿಯೂರಪ್ಪ ಮಾರ್ಗದಲ್ಲಿ ಜನವಿರೋಧಿ ಕಾಂಗ್ರೆಸ್ ಸರಕಾರದ ವಿರುದ್ಧ ಬೃಹತ್ ಹೋರಾಟ ಸಮಾವೇಶದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಸರಕಾರ ಯಾರಿಗೆ ಮೋಸ ಮಾಡಲು ಹೋರಟಿದ್ದಾರೆ. ರೈತರು ಹಾಗೂ ಜನರಿಗೆ ಮೋಸ ಮಾಡಿದೆ. ಇವರಿಗೆ ಅಧಿಕಾರದಲ್ಲಿ ಮುಂದುವರೆಯಲು ನೈತಿಕತೆ ಇಲ್ಲ ಎಂದರು. ಸರಕಾರ ರೈತರ ವಿದ್ಯುತ್ ಪಂಪ್ ಸೈಟ್‌ಗೆ ಉಚಿತ ವಿದ್ಯುತ್ ಕೊಡದಿದ್ದರೆ ರಾಜ್ಯಾದ್ಯಂತ ಹೋರಾಟ ನಡೆಸಲಾಗುವುದು. ರಾಜ್ಯ ಸರಕಾರದಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದೆ. ಗುತ್ತಿಗೆದಾರರ ಸಂಘದ ಅಧ್ಯಕ್ಷ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆಯುತ್ತಿದ್ದಾರೆ ಎಂದರು. ನಾನು ಅಧಿಕಾರದಲ್ಲಿದ್ದಾಗ ಹೆಣ್ಣು ಮಕ್ಕಳ ರಕ್ಷಣೆಗಾಗಿ ಭಾಗ್ಯಲಕ್ಷ್ಮಿ ಯೋಜನೆ ಜಾರಿಗೆ ತಂದಿದ್ದೇನೆ. ಕಳಸಾ ಬಂಡೂರಿ ಯೋಜನೆಗೆ ಅನುದಾನ ಮೀಸಲಿಟ್ಟಿದ್ದೆ. ಆದರೆ ಸರಕಾರ ಜನಪರ ಯೋಜನೆ ಕೈಗೊಂಡಿಲ್ಲ ಎಂದರು

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಮಾತನಾಡಿ, ರಾಜ್ಯದಲ್ಲಿ ಭೀಕರ ಬರಗಾಲ ಇದ್ದರೂ ಕಾಂಗ್ರೆಸ್ ಸರಕಾರ ಸಂಕಷ್ಟದಲ್ಲಿರುವ ರೈತರಿಗೆ ಪರಿಹಾರ ಕೊಡಬೇಕು ಎನ್ನುವ ಸೂಚನೆ ಕಾಣುತ್ತಿಲ್ಲ. ಆದರೆ ರಾಜ್ಯದಲ್ಲಿರುವ ಅಲ್ಪಸಂಖ್ಯಾತರಿಗೆ 10 ಸಾವಿರ ಕೋಟಿ ರೂ. ಕೊಡುವುದಾಗಿ ಘೋಷಣೆ ಮಾಡುತ್ತಾರೆ ಎಂದು ವಾಗ್ದಾಳಿ ನಡೆಸಿದರು.

ವಿಪಕ್ಷ ನಾಯಕ ಆರ್. ಅಶೋಕ ಮಾತನಾಡಿ, ರಾಜ್ಯ ಕಾಂಗ್ರೆಸ್ ಸರಕಾರ ರೈತರ, ಉತ್ತರ ಕರ್ನಾಟಕದ ವಿರೋಧಿಗಳು ಇವರಿಗೆ ಜನರ ಕಲ್ಯಾಣ ಬೇಕಿಲ್ಲ. ಕಾಂಗ್ರೆಸ್ ಸರಕಾರದವರು ರೈತರಿಗೆ ಪರಿಹಾರ ಕೊಡಲು ಭೀಕ್ಷೆ ರೀತಿಯಲ್ಲಿ ಕೊಡುತ್ತಿದ್ದಾರೆ. ಆದರೆ ಯಡಿಯೂರಪ್ಪನವರ ಸರಕಾರದಲ್ಲಿ ರೈತರಿಗೆ 25 ಸಾವಿರ ರೂ. ಪರಿಹಾರ ಕೊಟ್ಟಿದ್ದರು. ಆದರೆ ಕಾಂಗ್ರೆಸ್‌ನವರು 2 ಸಾವಿರ ರೂ. ಕೊಡುತ್ತಿರುವುದು ದುರ್ದೈವದ ಸಂಗತಿ ಎಂದರು.

ಗ್ಯಾರ೦ಟಿ ಯೋಜನೆಯಿಂದ ರಾಜ್ಯ ಸರಕಾರ ಪಾಪರ್ ಆಗಿದೆ. ನೀರಾವರಿ ಯೋಜನೆ, ಶಾಲೆ ನಿರ್ಮಾಣ ಮಾಡಲು, ಪರಿಹಾರ ನೀಡಲು, ರೈತರು ಮೃತಪಟ್ಟರೆ ಅವರ ಕುಟುಂಬಕ್ಕೆ ಪರಿಹಾರ ಕೊಡಲು ದುಡ್ಡಿಲ್ಲ ಎಂದು ವಾಗ್ದಾಳಿ ನಡೆಸಿದರು.

ಮಾಜಿ ಡಿಸಿಎಂ ಗೋವಿಂದ್ ಕಾರಜೋಳ ಮಾತನಾಡಿ, ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದು ಏಳು ತಿಂಗಳು ಕಳೆಯುತ್ತ ಬಂದರೂ ಅಭಿವೃದ್ಧಿ ಕಾರ್ಯಗಳಿಗೆ ಅನುದಾನ ಬಿಡುಗಡೆ ಮಾಡುತ್ತಿಲ್ಲ.ಸಿದ್ದರಾಮಯ್ಯನವರ ಸರಕಾರ ಬಂದ ಮೇಲೆ ಭ್ರಷ್ಟಾಚಾರದ ಮೇಲೆ ಮುಳುಗಿ ಹೋಗಿದೆ. ಸರಕಾರಿ ನೌಕರರಿಗೆ ಹೇದರಿ, ಬೇದರಿಸಿ ಹಣ ಕೀಳುವ ಕೆಲಸ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

ಮಾಜಿ ಡಿಸಿಎಂ ಕೆಎಸ್ ಈಶ್ವರಪ್ಪ ಮಾತನಾಡಿ ಮುಸ್ಲಿಂ ಸಮುದಾಯಕ್ಕೆ 10 ಸಾವಿರ ಕೋಟಿ ರೂ. ಅನುದಾನ ನೀಡುವುದಾಗಿ ಸಿದ್ದರಾಮಯ್ಯ ಹೇಳಿದ್ದಾರೆ ಮುಸ್ಲಿಂರನ್ನ ತೃಪ್ತಿ ಪಡಿಸಲು ಯಾವ ಮಟ್ಟಕ್ಕೆ ಹೋಗಲು ಅವರು ಸಿದ್ದರಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

ಮಾಜಿ‌ ಸಚಿವ ಬಿ. ಶ್ರೀರಾಮುಲು, ಶಾಸಕರಾದ ಅಭಯ ಪಾಟೀಲ, ಶಶಿಕಲಾ ಜೊಲ್ಲೆ, ಮಾಜಿ ಶಾಸಕ ಅನಿಲ್ ಬೆನಕೆ, ಸಂಜಯ ಪಾಟೀಲ.ಮಾಜಿ ಸಂಸದ ರಮೇಶ ಕತ್ತಿ ,ಶಾಸಕ ನಿಖಿಲ ಕತ್ತಿ ,ಶಾಸಕ ವಿಠ್ಠಲ ಹಲಗೇಕರ ,ಶಾಸಕ ಸುನಿಲ ಕುಮಾರ,ಮಾಜಿ ಶಾಸಕ ಅನಿಲ ಬೆನಕೆ ಸೇರಿದಂತೆ ಹಲವಾರು ಮಾಜಿ ಹಾಲಿ ಶಾಸಕರು ಬಿಜೆಪಿ ಮುಖಂಡರು ,ರೈತರು ಕಾರ್ಯಕರ್ತರು ಉಪಸ್ಥಿತರಿದ್ದರು.

Tags: