ಖಾನಾಪೂರ ತಾಲೂಕಿನ ಹತ್ತರವಾಡ ಗ್ರಾಮದ ಹೊರ ವಲಯದಲ್ಲಿರುವ ಮರಕ್ಕೆ ಮಹಾರಾಷ್ಟ್ರ ರಾಜ್ಯ ಫಲಕವನ್ನು ಬರೆದಿದ್ದು, ಈ ಕೃತ್ಯವನ್ನು ಕರ್ನಾಟಕ ರಕ್ಷಣಾ ವೇದಿಕೆಯು ತೀವ್ರವಾಗಿ ಖಂಡಿಸಿದೆ.
ವೈಸ್ ಓವರ್
ಇದಕ್ಕೆ ಸಂಬಂಧಿಸಿದಂತೆ ತಾಲೂಕಾ ಕರವೇ ಪ್ರಧಾನ ಕಾರ್ಯದರ್ಶಿ ವಿಠ್ಠಲ ಹಿಂಡಲಕರ ಅವರು ತಹಶೀಲ್ದಾರ್ ಪ್ರಕಾಶ್ ಗಾಯಕವಾಡ ಅವರಿಗೆ ಮನವಿ ಸಲ್ಲಿಸಿ ಮಾತನಾಡಿ ಕರ್ನಾಟಕದ ಸೌಲಭ್ಯಗಳನ್ನು ಉಪಯೋಗಿಸಿಕೊಂಡು ಮಹಾರಾಷ್ಟ್ರ ರಾಜ್ಯ ಎಂದು ನಾಮಫಲಕ ಹಾಕಲಾಗಿದ್ದು ಈ ಗುಂಡಾಗಳನ್ನು ಕೂಡಲೇ ಬಂಧಿಸಬೇಕು ಇಲ್ಲವಾದರೆ ಉಗ್ರ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದರು.ಬೈಟ್
ಈ ಸಂದರ್ಭದಲ್ಲಿ ತಾಲೂಕಾ ಸಹಕಾರ್ಯದರ್ಶಿ ಮಲ್ಲಿಕಾರ್ಜುನ ಹೊಸೂರಿ,ಜಯವಂತ ನಿಡಗಲಕರ, ಬಸವರಾಜ ಬಡಿಗೇರ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
ಅಲ್ತಾಫ್ ಎಂ ಬಸರೀಕಟ್ಟಿ
ಇನ್ ನ್ಯೂಸ್ ಖಾನಾಪೂರ
Uncategorized
ಹತ್ತರವಾಡ ಗ್ರಾಮದ ಮರಕ್ಕೆ ಮಹಾರಾಷ್ಟ್ರ ರಾಜ್ಯ ಫಲಕ:ಕಿಡಿಗೇಡಿಗಳನ್ನು ಬಂಧಿಸುವಂತೆ ಕರವೇ ಆಗ್ರಹ
