Uncategorized

ಜಿಲ್ಲಾ ಮಟ್ಟದ ಜಾಗೃತ ಸಮಾವೇಶ ೨೮ ರಂದು ಬೆಳಗಾವಿಯಲ್ಲಿ ನಡೆಯಲಿದೆ :ಮಹಾಂತೇಶ ತಳವಾರ

Share

ಸಂವಿಧಾನ ರಕ್ಷಣೆಗಾಗಿ ಪ್ರಜಾಪ್ರಭುತ್ವ ಉಳಿವಿಗಾಗಿ ಜಿಲ್ಲಾ ಮಟ್ಟದ ಜಾಗೃತ ಸಮಾವೇಶವನ್ನು ೨೮ ತಾರೀಖಿಗೆ ಬೆಳಗಾವಿ ಜಿಲ್ಲೆಯಲ್ಲಿ ಹಮ್ಮಿಕೊಳ್ಳುತ್ತಿದ್ದೇವೆ ಕರ್ನಾಟಕ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ ವಾದ ಬೆಳಗಾವಿ ಜಿಲ್ಲೆಯ ಅಧ್ಯಕ್ಷರಾದ ಮಹಾಂತೇಶ ತಳವಾರ ಹೇಳಿದರು

ನಗರದಲ್ಲಿ ಅಂಬೇಡ್ಕರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಇನ್ ನ್ಯೂಸ್ ಜೊತೆಗೆ ಮಾತನಾಡಿದ ಅವರು ವಂಟಮುರಿ ಗ್ರಾಮದಲ್ಲಿ ನಡೆದ ಘಟನೆಯನ್ನು ಕರ್ನಾಟಕ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ ವಾದ ಬೆಳಗಾವಿ ಜಿಲ್ಲೆ ವತಿಯಿಂದ ತೀವ್ರವಾಗಿ ಖಂಡಿಸುತ್ತೇವೆ ಬೆಳಗಾವಿ ಜಿಲ್ಲೆಯ ವಿವಿಧ ತಾಲೂಕುಗಳಿಂದ ಕರ್ನಾಟಕ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ ವಾದದಿಂದ ಸಭೆಯನ್ನ ಕರೆಯಲಿದ್ದೇವೆ ಸಂವಿಧಾನದ ಸಮರ್ಪಣಾ ದಿನದ ಅಂಗವಾಗಿ ಸಂವಿಧಾನ ರಕ್ಷಣೆಗಾಗಿ ಪ್ರಜಾಪ್ರಭುತ್ವ ಉಳಿವಿಗಾಗಿ ಜಿಲ್ಲಾ ಮಟ್ಟದ ಜಾಗೃತ ಸಮಾವೇಶವನ್ನು ೨೮ ತಾರೀಖಿಗೆ ಬೆಳಗಾವಿ ಜಿಲ್ಲೆಯಲ್ಲಿ ಹಮ್ಮಿಕೊಳ್ಳುತ್ತಿದ್ದೇವೆ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಸಮಾವೇಶ ನಡೆಯುತ್ತಿದೆ ಮೊನ್ನೆ ವಿಜಾಪುರದಲ್ಲಿ ,ಗುಲಬರ್ಗಾದಲ್ಲಿ ನಡೆದಿದೆ . ೨೮ ತಾರೀಖಿಗೆ ಬೆಳಗಾವಿಯಲ್ಲಿ ಮೆರವಣಿಗೆ ಮುಖಾಂತರ ಜಿಲ್ಲಾ ಮಟ್ಟದ ಜಾಗೃತ ಸಮಾವೇಶ ಅತ್ಯಂತ ಯಶಸ್ವಿಯಾಗಿ ನಡೆಯಲಿದೆ ದಲಿತ ಸಮುದಾಯದವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಎಂದರು .

ಈ ಸಂದರ್ಭದಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ ವಾದ ಬೆಳಗಾವಿ ಅಧ್ಯಕ್ಷರಾದ ಸಂತೋಷ ಹಲಗೇಕರ ,ಸುಧೀರ ಚೌಗುಲೆ ,ಖಾನಾಪುರ ತಾಲೂಕಾಧ್ಯಕ್ಪ ಶಿವಾಜಿ ಮಾದರ , ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಮುಖಂಡರಾದ ಮಲ್ಲೇಶ ಚೌಗುಲೆ , ಕರ್ನಾಟಕ ದಲಿತ ಸಂಘರ್ಷ ಸಮಿತಿಯ ರಾಜ್ಯ ಸಂಘಟನಾ ಸಂಚಾಲಕರಾದ ಸಿದ್ದಪ್ಪಾ ಕಾಂಬಳೆ, ರಾಜ್ಯ ಸಂಘಟನಾ ಸಂಚಾಲಕರಾದ ಗೌತಮ ಪಾಟೀಲ , ರಾಜ್ಯ ಕಮಿಟಿ ಸದಸ್ಯರಾದ ಸುರೇಶ ತಳವಾರ ಸೇರಿದಂತೆ ಅನೇಕರು ಉಪಸ್ಥಿತರಿದ್ದರು

Tags: