Uncategorized

ಲೋಕಸಭಾ ಚುನಾವಣೆಯಲ್ಲಿ ಬೆಳಗಾವಿಯಿಂದ ಸ್ಪರ್ಧೆಗೆ ನಾನು ರೆಡಿ: ಅಶೋಕ ಪೂಜಾರಿ

Share

ಬೆಳಗಾವಿ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಲು ಆಕಾಂಕ್ಷಿಯಾಗಿದ್ದೇನೆ ಎಂದು ಕಾಂಗ್ರೆಸ್ ಮುಖಂಡ ಅಶೋಕ ಪೂಜಾರಿ ಹೇಳಿದರು.

ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಕರ್ನಾಟಕದಲ್ಲಿ ಆಡಳಿತ ಪಕ್ಷ ಕಾಂಗ್ರೆಸ್ ಇರುವುದರಿಂದ. ಲೋಕಸಭಾ ಚುನಾವಣೆಯನ್ನು ಪಕ್ಷದ ವರಿಷ್ಠರು ಗಂಭೀರವಾಗಿ ಪರಿಗಣಿಸಿದ್ದಾರೆ. ಬೆಳಗಾವಿ ಎರಡೂ ಲೋಕಸಭಾ ಕ್ಷೇತ್ರದಲ್ಲಿ ಇಬ್ಬರೂ ಸಚಿವರಿದ್ದಾರೆ. ಇಬ್ಬರೂ ಪ್ರಭಾವಿ ನಾಯಕರಾಗಿರುವ ಸತೀಶ ಜಾರಕಿಹೊಳಿ ಹಾಗೂ ಲಕ್ಷ್ಮೀ ಹೆಬ್ಬಾಳಕರ್ ಅವರನ್ನು ಸ್ಪರ್ಧೆ ಮಾಡುವುದಾಗಿ ಹೇಳಿದರೆ ಅಥವಾ ಅವರ ಕುಟುಂಬದವರಿಗೆ ಅಭ್ಯರ್ಥಿಯನ್ನಾಗಿಸಿದರೆ ಅದಕ್ಕೆ ನಾವು ಬೆಂಬಲಿಸುತ್ತೇವೆ ಎಂದರು.


ಇವರನ್ನು ಹೊರತು ಪಡೆಸಿದರೆ ಬೇರೆಯವರಿಗೆ ಪರಿಗಣಿಸಿದರೆ ಗೋಕಾಕ ವಿಧಾನಸಭಾ ಮತಕ್ಷೇತ್ರದ ನಾನು ಬೆಳಗಾವಿ ಲೋಕಸಭಾ ಮತಕ್ಷೇತ್ರದಿಂದ ಕಾಂಗ್ರೆಸ್ ಟಿಕೆಟ್ ಕೊಡಬೇಕೆಂದು ಹೈಕಮಾಂಡ್ ಗೆ ಮನವಿ ಮಾಡುವೆ .ಗೋಕಾಕನಲ್ಲಿ ಅತೀ ಹೆಚ್ಚು ಜನಸಂಖ್ಯೆ ವೀರಶೈವ ಲಿಂಗಾಯತ ಸಮಾಜದವರು ಇದ್ದಾರೆ. ಒಂದು ವೇಳೆ ನನಗೆ ಅವಕಾಶ ಕೊಟ್ಟರೆ ಗೆಲವು ಸಾಧಿಸುತ್ತೇನೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ರಾಜ್ಯದಲ್ಲಿ ಸುಮಾರು 8 ಸಚಿವರು ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧೆ ನಡೆಸಲಿದ್ದಾರೆ ಎನ್ನುವ ಚರ್ಚೆಗಳು ನಡೆದಿವೆ. ಪಕ್ಷ ಯಾವ ತೀರ್ಮಾನ ತೆಗೆದುಕೊಂಡರೂ ಬದ್ಧರಾಗಿರುತ್ತೇವೆ ಎಂದರು.

ಸುದ್ದಿಗೋಷ್ಠಿಯಲ್ಲಿ ಪುಟ್ಟು ಖಾನಾಪುರೆ, ಶಿವಯ್ಯ ಹಿರೇಮಠ, ಬಸವರಾಜ ಸಂಗಣ್ಣನವರ, ಮಾರುತಿ ಕಂಬಾರ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

Tags: