Uncategorized

ಬೆಳಗಾವಿಯಲ್ಲಿ ಕಾಂಗ್ರೆಸ್ ಪಕ್ಷದ 139ನೇ ಸಂಸ್ಥಾಪನಾ ದಿನಾಚರಣೆ

Share

ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ 139ನೇ ಸಂಸ್ಥಾಪನಾ ದಿನಾಚರಣೆ ಹಿನ್ನೆಲೆಯಲ್ಲಿ ನಗರದ ಕಾಂಗ್ರೆಸ್‌ ಭವನದಲ್ಲಿ ಮಹಾತ್ಮಗಾಂಧೀಜಿ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ಮೂಲಕ ಕಾಂಗ್ರೆಸ್ ಪಕ್ಷದ 139ನೇ ಸಂಸ್ಥಾಪನಾ ದಿನಾಚರಣೆ ಆಚರಿಸಲಾಯಿತು.

ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ 139ನೇ ಸಂಸ್ಥಾಪನಾ ದಿನಾಚರಣೆ ಹಿನ್ನೆಲೆಯಲ್ಲಿ ನಗರದ ಕಾಂಗ್ರೆಸ್‌ ಭವನದಲ್ಲಿ ಮಹಾತ್ಮಗಾಂಧೀಜಿ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ಮೂಲಕ ಕಾಂಗ್ರೆಸ್ ಪಕ್ಷದ 139ನೇ ಸಂಸ್ಥಾಪನಾ ದಿನಾಚರಣೆ ಆಚರಿಸಲಾಯಿತು. ಬೆಳಗಾವಿ ಗ್ರಾಮೀಣ ಕಾಂಗ್ರೆಸ್ ಜಿಲ್ಲಾಧ್ಯಕ್ಷ ವಿನಯ ನಾವಲಗಟ್ಟಿ ಮಾತನಾಡಿ, ಭಾರತದ ಇತಿಹಾಸ ಕಂಡ ಪ್ರಮುಖ ರಾಜಕೀಯ ಪಕ್ಷ ಕಾಂಗ್ರೆಸ್. ಜನಪರತೆಯ ಆಧಾರದ ಮೇಲೆ ಎಲ್ಲ ವರ್ಗಗಳ ಏಳಿಗೆಗಾಗಿ ಶ್ರಮಿಸುತ್ತಿದ್ದು, ಸಮಾನ ಅವಕಾಶಗಳನ್ನು ಸೃಷ್ಟಿಸಿದ ಕಾಂಗ್ರೆಸ್‌ನ 139ನೇ ಸಂಸ್ಥಾಪನಾ ದಿನಾಚರಣೆ ಆಚರಿಸುತ್ತಿದ್ದೇವೆ ಎಂದು ತಿಳಿಸಿದರು. ಇದೇ ವೇಳೆ ಬೆಳಗಾವಿ ಗ್ರಾಮೀಣ ಕಾಂಗ್ರೆಸ್‌ ಜಿಲ್ಲಾಧ್ಯಕ್ಷ ವಿನಯ ನಾವಲಗಟ್ಟಿ ಧ್ವಜಾರೋಹಣ ನೆರವೇರಿಸಿದರು. ಜಿಲ್ಲಾ ಕಾಂಗ್ರೆಸ್ ಸೇವಾದಳದ ವತಿಯಿಂದ ಪ್ರತಿಜ್ಞಾವಿಧಿ ಬೋಧಿಸಲಾಯಿತು

ಈ ಸಂದರ್ಭದಲ್ಲಿ ಬಸವರಾಜ ಶೇಂಗಾವಿ, ಮೋಹನ್ ರಡ್ಡಿ, ಪ್ರದೀಪ ಎಂ.ಜೆ., ಶೇಖರ ಐಟಿ, ಸೇವಾದಳದ ಪ್ರಮುಖರಾದ ಶಕೀಲ್‌ ಮುಲ್ಲಾ ವಿನೋದ ಸೊಲ್ಲಾಪುರೆ, ರಾಜು ಶಿಂಫ್, ಅನ್ನಪೂರ್ಣ ಅಸೂರಕರ, ಕೆಪಿಸಿಸಿ ಸದಸ್ಯೆ ಆಯಿಶಾ ಸನದಿ, ಜಯಶ್ರೀ ಮಾಳಗಿ, ವಿಜಯ ಗೆಜ್ಜಿ, ಅಕ್ಟರ್ ತಪಕಿರ್‌, ಇಮ್ರಾನ್ ತಪಕಿರ್‌, ಗಿರೀಶ್‌ ಪಾಟೀಲ್, ಅಬ್ದುಲ್ ಮುಲ್ಲಾ ಸೇರಿದಂತೆ ಇತರರು ಇದ್ದರು

Tags: