Uncategorized

ವಂಟಮುರಿ ಪ್ರಕರಣದ ಸಂಪೂರ್ಣ ವಿಚಾರಣೆ ನಡೆಸಿದ ಬಿಜೆಪಿಯ ಮಹಿಳಾ ಸಂಸದರು

Share

ಬಿಜೆಪಿಯ ಸತ್ಯಶೋಧನಾ ಸಮಿತಿ ಮಹಿಳಾ ಸಂಸದರು ಹೊಸ ವಂಟಮುರಿ ಪ್ರಕರಣದ ಕೂಲಂಕಷ ತನಿಖೆ ನಡೆಸಿದ್ದು, ಈ ಅಮಾನವೀಯ ಘಟನೆಯನ್ನು ಖಂಡಿಸಿದ್ದಾರೆ. ಈ ಕುರಿತು ಸಂಪೂರ್ಣ ವರದಿಯನ್ನು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರಿಗೆ ನೀಡುವುದಾಗಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಬೆಳಗಾವಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಕೇಂದ್ರ ಸತ್ಯಶೋಧನಾ ಸಮಿತಿಯ ಸದಸ್ಯರಾದ ಅಪರಾಜಿತಾ ಸಾರಂಗಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರ ಆದೇಶದ ಮೇರೆಗೆ ನಾವು ಹೊಸ ವಂಟಮುರಿ ಘಟನೆಯ ತನಿಖೆಗೆ ಬಂದಿದ್ದೇವೆ ಎಂದು ಹೇಳಿದ್ದಾರೆ.

ನಾವು ಘಟನೆಯ ಬಗ್ಗೆ ಕೂಲಂಕುಷವಾಗಿ ತನಿಖೆ ನಡೆಸಿದ್ದೇವೆ ಮತ್ತು ಸಂತ್ರಸ್ತೆಯನ್ನು ಭೇಟಿ ಮಾಡಿ ಆಕೆಗೆ ಧೈರ್ಯ ತುಂಬಿದ್ದೇವೆ. ಇದರಲ್ಲಿ ನಾವು ಯಾವುದೇ ರೀತಿಯ ರಾಜಕೀಯ ಮಾಡುತ್ತಿಲ್ಲ. ಡಿ.11ರಂದು ನಡೆದ ಈ ಘಟನೆಯಲ್ಲಿ ಮಹಿಳೆಯೊಬ್ಬರನ್ನು ಬಟ್ಟೆ ಬಿಚ್ಚಿಸಿ ವಿದ್ಯುತ್ ಕಂಬಕ್ಕೆ ಥಳಿಸಿದ ಘಟನೆ ವಂಟ್ಮೂರಿನಲ್ಲಿ ನಡೆದಿದೆ. ಆದರೆ ಘಟನೆಯ ಬಗ್ಗೆ ಮಾಹಿತಿ ಪಡೆದ ಕಾಕತಿ ಪೊಲೀಸರು ತಡವಾಗಿ ಸ್ಥಳಕ್ಕೆ ಆಗಮಿಸಿದ್ದಾರೆ ಹೊಸ ವಂಟಮುರಿಯಲ್ಲಿ ನಡೆದ ಈ ಘಟನೆಯು ಅತ್ಯಂತ ಅಸಹ್ಯಕರವಾಗಿದೆ. ನಾವು ಇದನ್ನು ಖಂಡಿಸುತ್ತೇವೆ . ಈ ಘಟನೆ ಹೇಗೆ ಸಂಭವಿಸಿತು ಎಂದು ಇಡೀ ದೇಶವೇ ಕಾಂಗ್ರೆಸ್ ಸರಕಾರವನ್ನು ಪ್ರಶ್ನಿಸುತ್ತಿದೆ. ಈ ಘಟನೆಯ ಸಂಪೂರ್ಣ ವರದಿಯನ್ನು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರಿಗೆ ಹಸ್ತಾಂತರಿಸುತ್ತೇವೆ. ಎಂದರು .

ಸುನೀತಾ ದುಗ್ಗಲ್ ಮಾತನಾಡಿ ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರದ ಚಳಿಗಾಲದ ಅಧಿವೇಶನ ನಡೆಯುವ ಸಂದರ್ಭದಲ್ಲಿ ಈ ಘಟನೆ ನಡೆದಿದೆ ನಾವು ಈ ಘಟನೆಯ ವಿವರವಾದ ವರದಿಯನ್ನು ಸಿದ್ಧಪಡಿಸಿದ್ದೇವೆ ಅದನ್ನು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಿಗೆ ಹಸ್ತಾಂತರಿಸುತ್ತೇವೆ. ಇಂತಹ ಘಟನೆಗಳು ಮರುಕಳಿಸದಂತೆ ಕೇಂದ್ರ ಸರ್ಕಾರ ಕ್ರಮಕೈಗೊಳ್ಳುವಂತೆ ಒತ್ತಾಯಿಸಲಾಗುವುದು ಎಂದರು .

ಲಾಕೆಟ್ ಚಟರ್ಜಿ ಮಾತನಾಡಿ ಈ ಪ್ರಕರಣದ ಆರೋಪಿಗಳಿಗೆ ಕೂಡಲೇ ಶಿಕ್ಷೆಯಾಗಬೇಕು . ಈ ವಿಷಯವನ್ನು ಲೋಕಸಭೆಯಲ್ಲಿ ಪ್ರಸ್ತಾಪಿಸುತ್ತೇವೆ ಎಂದರು.

ರಂಜಿತಾ ಕೋಳಿ ಮಾತನಾಡಿ ಹೆಣ್ಣುಮಕ್ಕಳನ್ನು ಲಕ್ಷ್ಮಿ, ದುರ್ಗೆ ಎಂದು ನೋಡುತ್ತಾರೆ ಕರ್ನಾಟಕದಲ್ಲಿ ಮಹಿಳೆಯರಿಗೆ ಗೌರವವಿಲ್ಲ. ಇದರ ವಿರುದ್ಧ ನಾವು ಲೋಕಸಭೆಯಲ್ಲಿ ಧ್ವನಿ ಎತ್ತುತ್ತೇವೆ ಎಂದು ಹೇಳಿದರು.

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಆಶಾ ಲಾಕ್ರಾ ಮಾತನಾಡಿ ಈ ಘಟನೆಯನ್ನು ನಾವು ಖಂಡಿಸಿತ್ತೇವೆ ,ಕರ್ನಾಟಕ ಸರಕಾರ ಆದಿವಾಸಿಗಳ ವಿರೋಧಿಯಾಗಿದ್ದು, ಆದಿವಾಸಿಗಳನ್ನು ಕೇವಲ ವೋಟ್ ಬ್ಯಾಂಕ್ ಆಗಿ ಬಳಸಿಕೊಳ್ಳುತ್ತಿದೆ ಎಂದು ಆರೋಪಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಉಜ್ವಲಾ ಬಡವನಾಚೆ , ಬಸವರಾಜ ಹುಂದರಿ, ಮಾಜಿ ಶಾಸಕ ಸಂಜಯ ಪಾಟೀಲ, ಮಹಾಂತೇಶ ಕವಟಗಿಮಠ, ರಾಜೇಶ ನೇರ್ಲಿ ಮೊದಲಾದವರು ಉಪಸ್ಥಿತರಿದ್ದರು

Tags: