Uncategorized

ಅಜ್ಜ ಮೊಬೈಲ್ ಕೊಡಿಸಿಲ್ಲವೆಂದು ಯುವಕ ಆತ್ಮಹತ್ಯೆ

Share

ಚಿತ್ರದುರ್ಗ: ಅಜ್ಜ ಮೊಬೈಲ್ ಕೊಡಿಸದ ಹಿನ್ನೆಲೆಯಲ್ಲಿ ಯುವಕ ಆತ್ಮಹತ್ಯೆಗೆ ಶರಣಾದ ಘಟನೆ ಚಿತ್ರದುರ್ಗದಲ್ಲಿ (Chitradurga) ನಡೆದಿದೆ. ಕೊಳಾಳ್ ಗ್ರಾಮದ ಯಶವಂತ್ (20) ಮೃತ ಯುವಕ. ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ತಾಲೂಕಿನ ಕೊಳಾಳ್ ಗ್ರಾಮದಲ್ಲಿ ಈ ಘಟನೆ ನಡೆದಿದೆ.

ಅಕ್ಟೋಬರ್ 8ರಂದು ಮಹಾಗಣಪತಿ ಶೋಭಾಯಾತ್ರೆ ನಡೆದಿತ್ತು. ಹಿಂದೂ ಮಹಾಗಣಪತಿ ವಿಸರ್ಜನೆ ವೇಳೆ ಯಶವಂತ್ ಮೊಬೈಲ್ ಕಳೆದುಕೊಂಡಿದ್ದನು. ಹೀಗಾಗಿ ಹೊಸ ಮೊಬೈಲ್ ಕೊಡಿಸುವಂತೆ ಅಜ್ಜನ ಬಳಿ ಹಠ ಹಿಡಿದಿದ್ದನು. ಈ ವೇಳೆ ಅಜ್ಜ, ಈರುಳ್ಳಿ ಬೆಳೆ ಬಂದ ಬಳಿಕ ಮೊಬೈಲ್ ಕೊಡಿಸುವುದಾಗಿ ಹೇಳಿದ್ದರು

ಇದೀಗ ಅಜ್ಜ ಮೊಬೈಲ್ ಕೊಡಿಸಿಲ್ಲವೆಂದು ಯುವಕ ಅಕ್ಟೋಬರ್ 18ರಂದು ಮನೆಯಲ್ಲಿ ರಾಸಾಯನಿಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದನು. ವಿಷಯ ತಿಳಿದು ಸಂಬಂಧಿಕರು ಕೂಡಲೇ ಚಿತ್ರದುರ್ಗ ಆಸ್ಪತ್ರೆಗೆ ದಾಖಲಿಸಿದರು

ಗುರುವಾರ ಹೆಚ್ಚಿನ ಚಿಕಿತ್ಸೆಗೆ ದಾವಣಗೆರೆ ಸಾಗಿಸುವ ಮಾರ್ಗಮಧ್ಯೆ ಯುವಕ ಸಾವನ್ನಪ್ಪಿದ್ದಾನೆ. ಈ ಸಂಬಂಧ ಚಿತ್ರಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags: