.ಪ್ರಾಥಮಿಕ ಶಾಲಾ ಶಿಕ್ಷಕರ ದರ್ಜೆ ಸೇರಿದಂತೆ ವಿವಿಧ ಬೇಡಿಕೆಗಳಿಗಾಗಿ ಅಗ್ರಹಿಸಿ ಅಂಗನವಾಡಿ
ಕಾರ್ಯಕರ್ತೆಯರು ಇಂದು ಜಿಲ್ಲಾಧಿಕಾರಿ ಕಛೇರಿಯ ಬಳಿ ಪ್ರತಿಭಟನೆ ನಡೆಸಿದರು.
ಪ್ರತಿಭಟನಾ ಮೆರವಣಿಗೆ ನಡೆಸಿದ ಅಂಗನವಾಡಿ ಕಾರ್ಯಕರ್ತೆಯರು ತಮಗೆ ಪ್ರಾಥಮಿಕ ಶಿಕ್ಷಕರ ದರ್ಜೆ ನೀಡಬೇಕು.ಪಿ ಎಫ ಸೌಲಭ್ಯ ನೀಡಬೇಕು ಎಂದು ಅಗ್ರಹಿಸಿ ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ಅವರಿಗೆ ಮನವಿ ಸಲ್ಲಿಸಿದರು.
ಅಂಗನವಾಡಿ ಕಾರ್ಯಕರ್ತೆಯರ ಬೇಡಿಕೆಗಳ ಕುರಿತು ಮಾಹಿತಿ ನೀಡಿದ ಸಿ.ಆಯ್ ಟಿ .ಯು ಮುಖ್ಯಸ್ಥರಾದ ಜೆ.ಎಮ್.ಜೈನೆಖಾನ ಅವರು ಬೇಡಿಗಳ ಈಡೇರಿಕೆಗೆ ಒತ್ತಾಯಿಸಿದರು
ಅಂಗನವಾಡಿ ಕಾರ್ಯಕರ್ತರಿಗೆ ನೀಡಲಾಗುವ ಅತ್ಯಲ್ಪ ಸಂಭಾವನೆ ಮತ್ತು ವಹಿಸಲಾಗುವ ಅಧಿಕ ಜವಾಬ್ದಾರಿ ಕುರಿತು ಅಂಗನವಾಡಿ ಕಾರ್ಯಕರ್ತೆಯರು ಅಳಲನ್ನು ತೋಡಿಕೊಂಡರು.ತಮ್ಮ ಬೇಡಿಕೆಗಳನ್ನು ಈಡೇರಿಸದಿದ್ದಲ್ಲಿ ೬೮ ಸಾವಿರ ಅಂಗನವಾಡಿ ಕಾರ್ಯಕರ್ತೆಯರು ಬೆಂಗಳೂರಿನಲ್ಲಿ ಉಗ್ರ ಹೋರಾಟ ನಡೆಸುವದಾಗಿ ಎಚ್ಚರಿಕೆ ನೀಡಿದರು.
ಈ ಸಂದರ್ಭದಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು