ಇಸ್ಕಾನ್ ವತಿಯಿಂದ ಆಯೋಜಿಸಿದ್ದ ಗೀತಾ ಜಯಂತಿ ಹಾಗೂ ಗೀತಾ ದಾನ ಯಜ್ಞ ಮಹೋತ್ಸವ ಕಾರ್ಯಕ್ರಮದಲ್ಲಿ ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಕೇಂದ್ರ ರಕ್ಷಣಾ ಸಚಿವ ರಾಜ್ ನಾಥ್ ಸಿಂಗ್ ಅವರೊಂದಿಗೆ ಪಾಲ್ಗೊಂಡರು.
ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಸಚಿವ ಆರ್.ಅಶೋಕ್, ಸಂಸದ ತೇಜಸ್ವಿ ಸೂರ್ಯ, ಶಾಸಕ ಎಂ. ಕೃಷ್ಣಪ್ಪ, ಇಸ್ಕಾನ್ ಅಧ್ಯಕ್ಷ ಶ್ರೀ ಮಧುಪಂಡಿತದಾಸರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.