Belagavi

ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ ಖಾಯಂ ಸಂಚಾರಿ ಪೀಠಕ್ಕಾಗಿ ಒತ್ತಾಯಿಸಿ ಬೆಳಗಾವಿಯಲ್ಲಿ ನ್ಯಾಯವಾದಿಗಳು ಪ್ರತಿಭಟನೆ

Share

ಕರ್ನಾಟಕ ರಾಜ್ಯ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ ಖಾಯಂ ಸಂಚಾರಿ ಪೀಠಕ್ಕಾಗಿ ಒತ್ತಾಯಿಸಿ ಬೆಳಗಾವಿಯಲ್ಲಿ ನ್ಯಾಯವಾದಿಗಳು ಪ್ರತಿಭಟನೆ ನಡೆಸಿದರು.

ಕರ್ನಾಟಕ ರಾಜ್ಯ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ ಖಾಯಂ ಸಂಚಾರಿ ಪೀಠಕ್ಕಾಗಿ ಜಿಲ್ಲಾ ಗ್ರಾಹಕರ ಆಯೋಗದ ಕಟ್ಟಡವನ್ನು ಆಯ್ಕೆ ಮಾಡುವ ಹಾಗೂ ಹೆಚ್ಚುವರಿ ಗ್ರಾಹಕರ ಆಯೋಗವನ್ನು ಬೆಳಗಾವಿಯಲ್ಲಿ ಸ್ಥಾಪನೆ ಮಾಡುವಂತೆ ಆಗ್ರಹಿಸಿ ಶುಕ್ರವಾರ ನ್ಯಾಯವಾದಿಗಳು ಕಲಾಪವನ್ನು ಬಹಿಷ್ಕರಿಸಿ ಜಿಲ್ಲಾಧಿಕಾರಿ ಕಚೇರಿ ಎದುರಿನ ರಸ್ತೆ ತಡೆದು ಪ್ರತಿಭಟನೆ ನಡೆಸಿ ಸರಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಕರ್ನಾಟಕ ರಾಜ್ಯ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಖಾಯಂ ಸಂಚಾರಿ ಪೀಠವನ್ನು ಬೆಳಗಾವಿಯಲ್ಲಿ ಸ್ಥಾಪಿಸುವ ಕುರಿತು ಈಗಾಗಲೇ ಶಿಫಾರಸ್ಸು ಮಾಡಿದ್ದು ಮತ್ತು ಜಿಲ್ಲಾ ನ್ಯಾಯಾಲಯಕ್ಕೆ ಸಮೀಪವಿರುವ ಜಿಲ್ಲಾ ಗ್ರಾಹಕರ ಆಯೋಗದ ಕಟ್ಟಡವನ್ನು ಆಯ್ಕೆ ಮಾಡಬೇಕು ಎಂದು ಈ ಸಂದರ್ಭದಲ್ಲಿ ‌ಬೆಳಗಾವಿ ನ್ಯಾಯವಾದಿಗಳ ಸಂಘಟನೆಯ ಅಧ್ಯಕ್ಷ ಪ್ರಭು ಯತ್ನಟ್ಟಿ ಅಗ್ರಹಿಸಿದರು

ಈ ಕುರಿತು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.ಗ್ರಾಹಕರ ನ್ಯಾಯಾಲಯದಲ್ಲಿ ಹೆಚ್ಚಾಗಿ ಹಿರಿಯ ನಾಗರಿಕರ ಪ್ರಕರಣಗಳನ್ನು ದಾಖಲಿಸಿದ್ದು‌ ಮತ್ತು ಬೇರೆಡೆ ಸ್ಥಾಪಿತವಾದರೆ ಹಿರಿಯ ನಾಗರಿಕರಿಗೆ ಮತ್ತು ನ್ಯಾಯವಾದಿಗಳಿಗೆ ತೊಂದರೆಯಾಗುತ್ತದೆ. ಆದ್ದರಿಂದ ಬೆಳಗಾವಿಯಲ್ಲಿಯೇ ಈ ಪೀಠವನ್ನು ಸ್ಥಾಪನೆ ಮಾಡಬೇಕು. ಪ್ರತ್ಯೇಕ ನ್ಯಾಯಾಲಯ, ಕೊಠಡಿ, ಸಿಬ್ಬಂದಿ, ಮೂಲಭೂತ ಸೌಲಭ್ಯಗಳನ್ನು ಒದಗಿಸಿಕೊಡಬೇಕೆಂದು ಮನವಿಯಲ್ಲಿ ಒತ್ತಾಯಿಸಿದ್ದಾರೆ.

ಬಾರ್ ಅಸೋಸಿಯೇಷನ್ ಅಧ್ಯಕ್ಷ ಪ್ರಭು ಯತ್ನಟ್ಟಿ, ಆರ್.ಪಿ.ಪಾಟೀಲ, ಎನ್.ಆರ್.ಲಾತರ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

Tags: