Uncategorized

ಹುಕ್ಕೇರೀಶ ಆಶೀರ್ವಾದ ಪಡೆದ ಸಚಿವೆ ಲಕ್ಷ್ಮಿ ಹೆಬ್ಬಾಳಕರ

Share

ಬೆಳಗಾವಿ ನಗರದ ಲಕ್ಷ್ಮಿ ಟೇಕಡಿಯಲ್ಲಿರುವ ಬೆಳಗಾವಿ ಹುಕ್ಕೇರಿ ಹಿರೇಮಠಕ್ಕೆ ಭೇಟಿ ನೀಡಿ ಶ್ರೀ ಷ ಬ್ರ ಚಂದ್ರಶೇಖರ ಶಿವಾಚಾರ್ಯ ಮಹಾಸ್ವಾಮಿಗಳ ಆಶೀರ್ವಾದವನ್ನು ಮಹಿಳಾ ಮತ್ತು ಮಕ್ಕಳ ಇಲಾಖೆಯ ಸಚಿವರಾದ ಲಕ್ಷ್ಮಿ ಹೆಬ್ಬಾಳಕರ ಪಡೆದರು

ಗಡಿಭಾಗದಲ್ಲಿ ೬೦೦೦೦ ಕ್ಕೂ ಅಧಿಕ ಮಕ್ಕಳಿಗೆ ಮದ್ಯಾಹ್ನದ ಬಿಸಿಯೂಟ ಯೋಜನೆಯನ್ನು ಕಲ್ಪಿಸುತ್ತಿರುವ ಕರ್ನಾಟಕ ರಾಜ್ಯ ಬಿಸಿಯೂಟ ಸ್ವಯಂ ಸೇವಾ ಸಂಸ್ಥೆಗಳ ಒಕ್ಕೂಟದ ಅಧ್ಯಕ್ಷರಾದ ಬೆಳಗಾವಿ ಹುಕ್ಕೇರಿ ಹಿರೇಮಠದ ಶ್ರೀ ಷ ಬ್ರ ಚಂದ್ರಶೇಖರ ಶಿವಾಚಾರ್ಯ ಮಹಾಸ್ವಾಮಿಗಳನ್ನು ಮಹಿಳಾ ಮತ್ತು ಮಕ್ಕಳ ಇಲಾಖೆಯ ಸಚಿವರಾದ ಲಕ್ಷ್ಮಿ ಹೆಬ್ಬಾಳಕರ ಭೇಟಿ ಯಾಗಿ ಆಶೀರ್ವಾದ ಪಡೆದು ಕೊಂಡರು.
ಈ ಸಂದರ್ಭದಲ್ಲಿ ನಿವೃತ್ತ ಬುಡಾ ಇಂಜಿನಿಯರ ಮಹಾಂತೇಶ ಹಿರೇಮಠ,ವಿರೂಪಾಕ್ಷಯ್ಯ ನಿರಲಗಿಮಠ,ವಿರೇಶ ಕಿವಡಸಣ್ಣವರ,ಮಂಜುನಾಥ ಅಳವಣಿ ,ಕಲ್ಲಪ್ಪ ಬೋರಣ್ಣವರ ಸೇರಿದಂತೆ ಇನ್ನು ಅನೇಕರು ಉಪಸ್ಥಿತರಿದ್ದರು .

Tags: