ರಾಜ್ಯ ಸರ್ಕಾರದ ವಿರುದ್ದ ಬಿಜೆಪಿ ಪ್ರತಿಭಟನೆ ನಡೆಸಲಾಯಿತು. ವಿಜಯಪುರ ಜಿಲ್ಲಾ ಬಿಜೆಪಿ ಘಟಕದಿಂದ ರಾಜ್ಯ ಸರ್ಕಾರದಲ್ಲಿ ಮಿತಿಮೀರಿ ಭ್ರಷ್ಟಾಚಾರ ಉಂಟಾಗಿದೆ. ವಿದ್ಯುತ್ ಕಡಿತದಿಂದ ರೈತರಿಗೆ ಜನರಿಗೆ ಸಮಸ್ಯೆ ಯಾಗುತ್ತಿದೆ. ಸರ್ಕಾರ ಜನ ವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಆರೋಪಿಸಿ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ಹೊರಹಾಕಲಾಯಿತು. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗೊಮ್ಮೆ ಬರಗಾಲ ಉಂಟಾಗುತ್ತದೆ. ರಾಜ್ಯ ಸರ್ಕಾರ ಅಭಿವೃದ್ಧಿ ಕಾಮಗಾರಿ ಮಾಡುತ್ತಿಲ್ಲ ಎಂದು ಮುಖಂಡರು ವಾಗ್ದಾಳಿ ನಡೆಸಿದರು. ಸಂಸದ ರಮೇಶ ಜಿಗಜಿಣಗಿ, ಜಿಲ್ಲಾಧ್ಯಕ್ಷ ಆರ್ ಎಸ್ ಪಾಟೀಲ್ ಕೂಚಬಾಳ, ಉಮೇಶ ಕಾರಜೋಳ, ಸುರೇಶ ಬಿರಾದಾರ ಭಾಗಿಯಾಗಿದ್ದರು.
Uncategorized
ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ
