ಹೌದು ಸಮಾಜಸೇವೆ ಮಾಡುವುದು 24 ಗಂಟೆ ಕೆಲಸ ಇದ್ದಂತೆ, ಶ್ರಮವಹಿಸಿ ಕೆಲಸ ಮಾಡುವುದರಿಂದ ಸಮಾಜದಲ್ಲಿ ಗುರುತಿಸಿಕೊಳ್ಳಲು ಸಾಧ್ಯ ಮೋರೆ ಅವರ ಆದರ್ಶಗಳನ್ನು ಉಳಿಸಿಕೊಂಡು ಹೋಗುವ ಮೂಲಕ ಕೀರ್ತಿ ಮೋರೆ ಅವರು ಸಮಾಜ ಸೇವೆ ನಡೆಸಲಿ ಎಂದು ಖಾನಾಪೂರದ ಮಾಜಿ ಶಾಸಕಿ ಡಾಕ್ಟರ್ ಅಂಜಲಿ ನಿಂಬಾಳ್ಕರ್ ಅವರು ಹೇಳಿದರು.
ಅವರು ಧಾರವಾಡದ ರಾಜೀವಗಾಂಧಿನಗರದಲ್ಲಿ ಮಾಜಿ ಸಚಿವ ಎಸ್.ಆರ್.ಮೋರೆ ಅವರ 86ನೇ ಜನ್ಮದಿನ ಹಾಗೂ 2ನೇ ಪುಣ್ಯ ಸ್ಮರಣೆ ನಿಮಿತ್ಯ ಆಯೋಜಿಸಿದ್ದ ಎಸ್ ಆರ್ ಮೆಮೋರಿಯಲ್ ಚಾರಿಟೇಬಲ್ ಟ್ರಸ್ಟ್ ಶಿವಲೀಲಾ ಪ್ರತಿಷ್ಠಾನ ಹಾಗೂ ಹುಬ್ಬಳ್ಳಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯವತಿಯಿಂದ ಉಚಿತ ಆರೋಗ್ಯ ತಪಾಸಣೆ ಶಿಬಿರದಲ್ಲಿ ಭಾಗವಹಿಸಿ ಮಾತನಾಡಿದರು.
ಈ ಶಿಬಿರದ ದಿವ್ಯ ಸಾನ್ನಿಧ್ಯವನ್ನು ಮುರುಘಾಮಠದ ಡಾ.ಮಲ್ಲಿಕಾರ್ಜುನ ಸ್ವಾಮಿ ಅವರು ವಹಿಸಿದ್ದರು.ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಮಾಜಿ ಸಭಾಧ್ಯಕ್ಷರಾದ ಕೆ.ಬಿ.ಕೋಳಿವಾಡ, ರಾಜಶೇಖರ ಮೆಣಸಿನಕಾಯಿ,ಪಿ.ಕೆ.ನೀರಲಕೇರಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
ಅಲ್ತಾಫ್.ಎಂ.ಬಸರೀಕಟ್ಟಿ
ಇನ್ ನ್ಯೂಸ್ ಖಾನಾಪೂರ