National

ಕೇಂದ್ರ ಕಾರ್ಮಿಕ ಸಚಿವ ಭೂಪೇಂದ್ರ ಯಾದವ್ ಜೊತೆ ಸಿಎಂ ಬೊಮ್ಮಾಯಿ ಚರ್ಚೆ

Share

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ, ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವ ಭೂಪೇಂದ್ರ ಯಾದವ್ ಅವರನ್ನು ಭೇಟಿ ಮಾಡಿದರು.

ದೆಹಲಿ ಪ್ರವಾಸದಲ್ಲಿರುವ ಸಿಎಂ ಬೊಮ್ಮಾಯಿ ಅವರು ಕೇಂದ್ರ ಸಚಿವ ಭೂಪೇಂದ್ರ ಯಾದವ್ ಅವರನ್ನು ಭೇಟಿ ಮಾಡಿದ ರಾಜ್ಯದ ವಿವಿಧ ಯೋಜನೆಗಳ ಬಗ್ಗೆ ಮಾತುಕತೆ ನಡೆಸಿದರು.
ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯದ ಬೃಹತ್ ಮತ್ತು ಮಧ್ಯಮ ನೀರಾವರಿ ಜಲಸಂಪನ್ಮೂಲ ಸಚಿವರಾದ ಗೋವಿಂದ ಕಾರಜೋಳ ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಮಂಜುನಾಥ್ ಪ್ರಸಾದ್ ಉಪಸ್ಥಿತರಿದ್ದರು.

Tags: