Uncategorized

ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೇ ಪ್ರಕರಣ ಬಿಜೆಪಿ ರಾಜಕೀಯ ಮಾಡುತ್ತಿದ್ದೆ : ಸಿಎಂ ಸಿದ್ದರಾಮಯ್ಯ

Share

ಬೆಳಗಾವಿಯ ವಂಟಮೂರಿ ಗ್ರಾಮದಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿ, ಹಲ್ಲೇ ಮಾಡಿ ಮಾಡಿರುವ ಅಮಾನುಷ ಘಟನೆಯನ್ನು ರಾಜ್ಯ ಸರ್ಕಾರ ತನಿಖೆ ಮಾಡುತ್ತಿದೆ. ಆದರೆ ಬಿಜೆಪಿಗರು ಈ ವಿಷಯದಲ್ಲಿ ರಾಜಕೀಯ ಮಾಡುತ್ತಿದ್ದಾರೆ. ಅನುಮತಿಯಿಲ್ಲದೇ ಮಹಿಳೆಯನ್ನು ಭೇಟಿಯಾಗುವಂತಿಲ್ಲ ಎಂದು ಹೈಕೋರ್ಟ್ ಆದೇಶ ನೀಡಿದರೂ ಭೇಟಿ ಮಾಡುತ್ತಿದ್ದಾರೆ ಇದು ಖಂಡನೀಯ ಎಂದು ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

ನಗರದ ವಿಪ ಸದಸ್ಯ ಹಾಗೂ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರ ಮನೆಗೆ ಭೇಟಿ ನೀಡಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಮಾನುಷ ಘಟನೆ ತಿಳಿಯುತ್ತಿದ್ದ ಹಾಗೇ ಗೃಹ ಸಚಿವರು ಮಹಿಳೆಯನ್ನು ಭೇಟಿ ಮಾಡಿ ಸಾಂತ್ವನ ಹೇಳುವ ಕೆಲಸ ಮಾಡಿದ್ದಾರೆ. ಇದರಲ್ಲಿ ರಾಜ್ಯ ಸರ್ಕಾರ ಎಲ್ಲಿ ಫೇಲ್ ಆಗಿದೆ ಗೊತ್ತಾಗಬೇಕು. ಬಿಜೆಪಿಯವರು ಸುಖಾ ಸುಮ್ಮನೆ ರಾಜಕೀಯ ಮಾಡುತ್ತಿದ್ದಾರೆ ಎಂದು ಗರಂ ಆದರು.

ಈ ಹಿಂದೆ ಉತ್ತರ ಪ್ರದೇಶದಲ್ಲಿ ಬಿಜೆಪಿ ಶಾಸಕ 9 ವರ್ಷದ ಹುಡುಗಿ ಮೇಲೆ ರೇಪ್ ಮಾಡಿ ಜೈಲು ಸೇರಿದ್ದಾನೆ. ಇದಕ್ಕೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಸೇರಿದಂತೆ ಇನ್ನುಳಿದ ನಾಯಕರು ಏನೂ ಹೇಳತ್ತಾರೆ. ಇಂತಹ ಶಾಸಕರನ್ನು ಇಟ್ಟುಕೊಂಡು ಹೆಣ್ಣು ಮಕ್ಕಳ ಮೇಲೆ ದೌರ್ಜನ್ಯ ಮಾಡುವ ಬಿಜೆಪಿಯವರಿಗೆ ಕಾಂಗ್ರೆಸ್ ಬಗ್ಗೆ ಮಾತನಾಡುವ ನೈತಿಕತೆ ಏನಿದೆ ಎಂದು ಪ್ರಶ್ನೆ ಮಾಡಿದರು.

ನ್ಯಾಷನಲ್ ಕ್ರೈಂ ಬ್ಯೂರೋ ವರದಿ ಗಮನಿಸಿದಾಗ ಯಾರ ಕಾಲದಲ್ಲಿ ಎಷ್ಟು ಮಹಿಳೆಯರ ಮೇಲೆ ದೌರ್ಜನ್ಯ ಪ್ರಕರಣ ನಡೆದಿವೆ ಎಂಬುದು ಗೊತ್ತಾಗುತ್ತದೆ. ನಮ್ಮ ಸರ್ಕಾರದಲ್ಲಿ ಯಾರ ಮೇಲೆ ದೌರ್ಜನ್ಯ ಆದರೂ ತಪ್ಪಿತಸ್ಥರ ಮೇಲೆ ಕಠಿಣ ಕ್ರಮ ಕೈಗೊಳ್ಳತ್ತೇವೆ. ಬೆಳಗಾವಿಯ ವಂಟಮೂರಿ ಪ್ರಕರಣ ಅಮಾನುಷವಾದದ್ದು ಇದು ಅನಾಗರಿಕ ಘಟನೆ, ನಾಗರಿಕ ಸಮಾಜದಲ್ಲಿ ಇಂತಹ ಘಟನೆಗಳು ಮುಂದೆ ನಡೆಯಬಾರದು ಎಂದು ತಿಳಿಸಿದರು.

ಕೋವಿಡ್ ಸಭೆ ನಡೆಸುವೆ: ದೇಶದಲ್ಲಿ ಮತ್ತೆ ಕೋವಿಡ್ ಸೋಂಕು ಪ್ರಕರಣ ಹೆಚ್ಚಾಗುತ್ತಿರುವ ಬೆನ್ನಲ್ಲೇ ರಾಜ್ಯದಲ್ಲಿ ಕಟ್ಟೇಚ್ಚರ ವಹಿಸಲಾಗುವುದು. ಈಗಾಗಲೇ ಆರೋಗ್ಯ ಸಚಿವರೊಂದಿಗೆ ಮಾತನಾಡಿದ್ದೇನೆ. ಮುಂದೆ ತಜ್ಞರ ಜೊತೆಗೆ ಸಭೆ ಮಾಡಲು ಸೂಚಿಸಿದ್ದೇನೆ. ಸೋಂಕು ಹರಡದಂತೆ ಮುಂಜಾಗ್ರತಾ ಕ್ರಮಗಳನ್ನು ಸರ್ಕಾರ ತೆಗೆದುಕೊಳ್ಳಲು ಸಿದ್ದವಾಗಿದೆ ಎಂದು ತಿಳಿಸಿದರು.

ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಯಲುವಹಳ್ಳಿ ಮೊರಾರ್ಜಿ ದೇಸಾಯಿ ವಸತಿ ನಿಲಯದಲ್ಲಿ ಮಕ್ಕಳನ್ನು ಮಲದ ಗುಂಡಿಯೊಳಗೆ ಇಳಿಸಿ ಸ್ವಚ್ಛಗೊಳಿಸಿರುವ ಘಟನೆಗೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ ಸಿದ್ದರಾಮಯ್ಯ, ಘಟನೆಯ ಮಾಹಿತಿ ಗಮನಕ್ಕೆ ಬಂದಿದೆ. ಈಗಾಗಲೇ ಅಧಿಕಾರಿಗಳಿಗೆ ವರದಿ ಕೇಳಿದ್ದೇನೆ. ಯಾರೇ ತಪ್ಪು ಮಾಡಿದರೂ ಅವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಎಂಪಿ ಟಿಕೆಟ್ ಅಭಿಪ್ರಾಯ ಸಂಗ್ರಹ ಮಾಡುತ್ತಿದ್ದೇವೆ

ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಧಾರವಾಡ ಲೋಕಸಭೆಗೆ ಟಿಕೆಟ್ ವಿಚಾರವಾಗಿ ವಿಪ ಸದಸ್ಯ ಜಗದೀಶ್ ಶೆಟ್ಟರ್ ಅವರ ಅಭಿಪ್ರಾಯ ಕೇಳಿದ್ದೇವಿ. ಅವರನ್ನು ನಾವು ಆಕಾಂಕ್ಷಿ ಎಂದು ತಿಳಿದಿದ್ದೇವೆ. ನಮ್ಮ ಶಾಸಕರು, ಕಾರ್ಯಕರ್ತರು ಯಾರಿಗೆ ಹೇಳತ್ತಾರೆ ಅವರಿಗೆ ಟಿಕೆಟ್ ಕೊಡುತ್ತೇವೆ. ಈಗಾಗಲೇ ಪ್ರತಿ ಜಿಲ್ಲೆಯಲ್ಲೂ ಕೂಡಾ ಒಬ್ಬೊಬ್ಬ ಸಚಿವರನ್ನು ವೀಕ್ಷಕರನ್ನು ನೇಮಕ ಮಾಡಿದ್ದೇವೆ. ಅವರ ಅಭಿಪ್ರಾಯ ಕೂಡಾ ಸಂಗ್ರಹ ಮಾಡುತ್ತಿದ್ದೇವೆ. ಬಳಿಕ ಯಾರು ಸೂಕ್ತ ಅಭ್ಯರ್ಥಿ ಆಗತ್ತಾರೋ ಅವರಿಗೆ ಅಭ್ಯರ್ಥಿಯಾಗಿ ಆಯ್ಕೆ ಮಾಡುತ್ತೇವೆ ಎಂದರು‌.

ಇದೇ ವೇಳೆ ಲೋಕಸಭೆಯಲ್ಲಿ ಅಲ್ಪಸಂಖ್ಯಾತರಿಗೆ ಮೂರು ಟಿಕೆಟ್ ನೀಡುವ ವಿಚಾರವಾಗಿ ಮಾತನಾಡಿ, ನಾವು ಹಿಂದೆಯೂ ಕೂಡಾ ಎರಡು ಟಿಕೆಟ್ ಕೊಟ್ಟಿದ್ದೇವೆ. ಈಗಲೂ ಕೂಡ ಕೊಡತ್ತೇವೆ. ಬಿಜೆಪಿಯವರು ಏನ ಮಾಡತ್ತಾರೆ. ಆವರು ಅಲ್ಪಸಂಖ್ಯಾತರ ಮತ ಬೇಡಾ ಅಂತಾರೆ‌. ಅಲ್ಪಸಂಖ್ಯಾತರು ಭಾರತೀಯ ನಾಗರಿಕರು ಅಲ್ಲವೇ? ಇದಕ್ಕೆ ಉತ್ತರ ಅವರು ಹೇಳತ್ತಾರಾ? ಎಂದು ಪ್ರಶ್ನೆ ಮಾಡಿದರು.

Tags: