ಧಾರವಾಡ ಲೋಕ ಸಭಾ ಸದಸ್ಯರಿಗೆ ಮೀಸಲಿಟ್ಟ ಸರ್ಕಾರಿ ಕಚೇರಿಯನ್ನು ಬಿಜೆಪಿ ಪಕ್ಷ ದುರ್ಬಳಿಕೆ ಮಾಡಿಕೊಂಡ ಆರೋಪ ಕೇಳಿ ಬಂದಿದೆ.
ನಗರದ ಚಿಟಗುಪ್ಪಿ ಆಸ್ಪತ್ರೆ ಬಳಿ ಇರುವ ಸರ್ಕಾರಿ ಕಚೇರಿಯಲ್ಲಿ ಬಿಜೆಪಿ ಸಾಮಾಜಿಕ ಮಾಧ್ಯಮ ಪ್ರಕೋಷ್ಠ ಶಂಕನಾದ ಅಭಿಯಾನದ ಜಿಲ್ಲಾಮಟ್ಟದ ಸಭೆ ನಡೆಸಿದೆ. ಸಭೆಯಲ್ಲಿ ಧಾರವಾಡ ಲೋಕಸಭಾ ವ್ಯಾಪ್ತಿಯಲ್ಲಿ ಬರುವ 8 ವಿಧಾನಸಭಾ ಕ್ಷೇತ್ರದ ಪ್ರಮುಖರು ಭಾಗಿಯಾಗಿದ್ದರು.
ಕೇಂದ್ರ ಸಚಿವ ಪ್ರಹ್ಲಾದ ಜೋಶಿಯವರಿಗೆ ಸರ್ಕಾರದಿಂದ ಕೊಡಲಾಗಿದೆ. ಜನರ ಸಮಸ್ಯೆಗಳನ್ನ ಆಲಿಸಲು, ಸಾರ್ವಜನಿಕ ಸಂಪರ್ಕಕ್ಕಾಗಿ ಸ್ಮಾರ್ಟ್ ಸಿಟಿ ಯೋಜನೆಯಡಿಯಲ್ಲಿ ಬಹಮಡಿ ಕಟ್ಟಡ ನಿರ್ಮಾಣ ಮಾಡಲಾಗಿದೆ. ಸುಮಾರು ಹತ್ತು ಕೋಟಿ ಖರ್ಚು ಮಾಡಿ ಕಟ್ಟಡ ನಿರ್ಮಿಸಲಾಗಿದೆ. ಆದ್ರೆ ಕೋಟಿ ಕೋಟಿ ಖರ್ಚು ಮಾಡಿ ನಿರ್ಮಿಸಿದ ಸರ್ಕಾರಿ ಕಟ್ಟಡವನ್ನೇ ಬಿಜೆಪಿ ಕಚೇರಿಯನ್ನಾಗಿ ಮಾಡಿಕೊಂಡಿದೆ.
ಇಂತಹ ದೊಡ್ಡ ಕಟ್ಟಡದಲ್ಲಿ ಜನರ ಕುಂದುಕೊರತೆಗಳನ್ನು ಆಲಿಸುವುದು ಬಿಟ್ಟು ಪಕ್ಷದ ಚಟುವಟಿಕೆಗಳಿಗೆ ಬಿಜೆಪಿ ಮುಖಂಡರು ಬಳಸಿಕೊಳ್ಳುತ್ತಿದ್ದಾರೆ. ಮುಂಬರುವ ಲೋಕಸಭಾ ಚುನಾವಣೆ ಗಮನದಲ್ಲಿಟ್ಟುಕೊಂಡು ಇದೇ ಸರ್ಕಾರಿ ಕಚೇರಿಯಲ್ಲಿ ಮೇಲಿಂದ ಮೇಲೆ ಸಭೆ ನಡೆಸಲಾಗುತ್ತಿದೆ. ಸರ್ಕಾರಿ ಕಚೇರಿಯನ್ನ ಪಕ್ಷಕ್ಕಾಗಿ ಬಳಸಿಕೊಂಡರು ಅಧಿಕಾರಿಗಳು ಮಾತ್ರ ಮೌನಕ್ಕೆ ಶರಣಾಗಿದ್ದು, ಸಾರ್ವಜನಿಕರ ಕೆಂಗಣ್ಣಿಗೆ ಗುರಿಯಾಗಿದೆ.
Uncategorized
ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಯವರ ಸರ್ಕಾರಿ ಕಚೇರಿಯಲ್ಲಿ ಪಕ್ಷದ ಕಾರ್ಯಕ್ರಮ : ಸಾರ್ವಜನಿಕರ ಆಕ್ರೋಶ
