Uncategorized

ಬೀರೇಶ್ವರ ಸಹಕಾರಿ ಸಂಸ್ಥೆಯ ಸದಸ್ಯರಿಗೆ ಶೇ.12 ಲಾಭಾಂಶ ವಿತರಣೆ:ಜಯಾನಂದ ಜಾಧವ

Share

ಚಿಕ್ಕೋಡಿ: ತಾಲ್ಲೂಕಿನ ಯಕ್ಸಂಬಾ ಪಟ್ಟಣದ ಜೊಲ್ಲೆ ಗ್ರೂಪ್‍ನ ಮಾತೃಸಂಸ್ಥೆ ಬೀರೇಶ್ವರ ಸಹಕಾರಿ ಸಂಸ್ಥೆಯ ಸದಸ್ಯರಿಗೆ ಶೇ.12 ಲಾಭಾಂಶ ವಿತರಣೆ ಮಾಡಲಾಗುವುದು
ಎಂದು ಸಂಸ್ಥೆಯ ಅಧ್ಯಕ್ಷ ಜಯಾನಂದ ಜಾಧವ ಹೇಳಿದರು.

ಚಿಕ್ಕೋಡಿ ತಾಲ್ಲೂಕಿನ ಯಕ್ಸಂಬಾ ಪಟ್ಟಣದ ಸಂಸ್ಥೆಯ ಪ್ರಧಾನ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, “ಚಿಕ್ಕೋಡಿ ಸಂಸದ ಅಣ್ಣಾಸಾಹೇಬ ಜೊಲ್ಲೆ ಹಾಗೂ ಶಾಸಕಿ ಶಶಿಕಲಾ ಜೊಲ್ಲೆ ಅವರ ಸಾರಥ್ಯದಲ್ಲಿ ಮುನ್ನಡೆಯುತ್ತಿರುವ ಸಹಕಾರಿಯ ಲಾಭಾಂಶವನ್ನು ಸದಸ್ಯರ ಖಾತೆಗಳಿಗೆ ಜಮೆ ಮಾಡಿದೆ. ಸದಸ್ಯರು ಆಯಾ ಶಾಖೆಗಳಲ್ಲಿ ಲಾಭಾಂಶ ಪಡೆದುಕೊಳ್ಳಬಹುದು ಎಂದರು.

ಪ್ರಸಕ್ತ ಆರ್ಥಿಕ ವರ್ಷದಲ್ಲಿ 98 ಹೊಸ ಶಾಖೆಗಳನ್ನು ಆರಂಭಿಸಲು ಪರವಾನಿಗೆ ದೊರೆತಿದ್ದು, ಸಂಸದ ಅಣ್ಣಾಸಾಹೇಬ ಜೊಲ್ಲೆ ಅವರ ಜನ್ಮದಿನದ ಪ್ರಯುಕ್ತ ಏಕಕಾಲದಲ್ಲಿ 29 ಶಾಖೆಗಳನ್ನು ಪ್ರಾರಂಭಿಸಲಾಗಿದೆ” ಎಂದರು.

ಸುದ್ದಿಗೋಷ್ಠಿಯಲ್ಲಿ ಸಂಸ್ಥೆಯ ಉಪಾಧ್ಯಕ್ಷ ಸಿದ್ರಾಮ ಗಡದೆ, ಸಂಚಾಲಕ ಅಪ್ಪಾಸಾಹೇಬ ಜೊಲ್ಲೆ, ಕಲ್ಲಪ್ಪ ಜಾಧವ, ಯಾಶಿನ್ ತಾಂಬೋಳೆ, ಬಿಪಿನ್ ದೇಶಪಾಂಡೆ, ಬಸಪ್ಪ ಗುರವ, ಪ್ರಧಾನ ವ್ಯವಸ್ಥಾಪಕ ರವೀಂದ್ರ ಚೌಗಲೆ, ಉಪಪ್ರಧಾನ ವ್ಯವಸ್ಥಾಪಕರಾದ ಮಹಾದೇವ ಮಂಗಾವತೆ ಸೇರಿದಂತೆ ಸಂಸ್ಥೆಯ ಸಿಬ್ಬಂದಿ ಉಪಸ್ಥಿತರಿದ್ದರು

Tags: